Land scam; ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಬಂಧನ: ಚಂಪಾಯ್ ಗೆ ಪಟ್ಟ?
Team Udayavani, Jan 31, 2024, 8:36 PM IST
ರಾಂಚಿ: ಆಪಾದಿತ ಭೂ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಅವರನ್ನು ಇಡಿ ಬುಧವಾರ ರಾತ್ರಿ ಬಂಧಿಸಿದೆ.
ಇಡಿ ಸಿಎಂ ಸೋರೆನ್ ಅವರನ್ನು 7 ಗಂಟೆಗೂ ಹೆಚ್ಚು ಕಾಲ ಪ್ರಶ್ನಿಸಿದ್ದು, ಬಂಧನವಾಗುತ್ತಿದ್ದಂತೆ ಜಾರ್ಖಂಡ್ ಮುಕ್ತಿ ಮೋರ್ಚಾ ಶಾಸಕರು ರಾಜಭವನಕ್ಕೆ ತೆರಳಿದ್ದು, ಸಚಿವರಾಗಿದ್ದ ಚಂಪಾಯ್ ಸೋರೆನ್ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ವರದಿಯಾಗಿದೆ.
ಹೇಮಂತ್ ಸೊರೇನ್ ರಾಜೀನಾಮೆ ಸಲ್ಲಿಸಿದ್ದು, 67 ರ ಹರೆಯದ ಚಂಪಾಯ್ ಸೋರೆನ್ ತತ್ ಕ್ಷಣ ಸಿಎಂ ಆಗಿ ಪ್ರಮಾಣ ಸ್ವೀಕರಿಸುವ ಸಾಧ್ಯತೆ ಇದೆ.
ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಮೂವರು ಸದಸ್ಯರ ತಂಡ ರಚಿಸಲಾಗಿದೆ. 7,000 ಕ್ಕೂ ಹೆಚ್ಚು ಪೊಲೀಸ್ ಸಿಬಂದಿಯನ್ನು ನಿಯೋಜಿಸಿ ಆಯಕಟ್ಟಿನ ಸ್ಥಳಗಳ ಮೇಲೆ ವಿಶೇಷ ಗಮನ ಹರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court Verdict: ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ… ಆರೋಪಿ ಸಂಜಯ್ ರಾಯ್ ದೋಷಿ
Suffocation: ಚಳಿಗೆಂದು ಹಾಕಿದ ಬೆಂಕಿ… ಬೆಳಗಾಗುವಷ್ಟರಲ್ಲಿ ದಂಪತಿಯ ಜೀವವೇ ಹೋಗಿತ್ತು…
IMF; ಜಗತ್ತಿಗೆ ಆರ್ಥಿಕ ಹಿಂಜರಿತ ಉಂಟಾದರೂ, ಭಾರತಕ್ಕೆ ಅಪಾಯ ಇಲ್ಲ
Russia ಸೇನೆಯಲ್ಲಿದ್ದ 16 ಭಾರತೀಯರು ನಾಪತ್ತೆ, 12 ಜನ ಸಾವು: ಕೇಂದ್ರ
ಬಾಲ್ಯ ವಿವಾಹ ಕಾನೂನು ಪರಿಶೀಲನೆ: ಸುಪ್ರೀಂ ಅಸ್ತು
MUST WATCH
ಹೊಸ ಸೇರ್ಪಡೆ
ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್
Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ
Ban: ಏರ್ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್ ಬಳಕೆ ನಿಷೇಧ: ಪಾಲಿಕೆ ಆದೇಶ
ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು
EV: ಇವಿ ಬಳಕೆಗೆ ಉತ್ತೇಜನ: ದೇಶದಲ್ಲೇ ನಂಬರ್ 1 ಸ್ಥಾನ ಪಡೆದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.