Udupi; ಗಾಂಜಾ ಮಾರಾಟ: ಆರೋಪಿಗೆ ಜೈಲು
Team Udayavani, Feb 1, 2024, 12:52 AM IST
ಉಡುಪಿ: ಅಕ್ರಮ ಗಾಂಜಾ ಮಾರಾಟ ಪ್ರಕರಣದ ಆರೋಪಿಗೆ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ಬುಧವಾರ ಆದೇಶ ನೀಡಿದೆ.
ಕೃಷ್ಣಾಪುರ, ಕಾಟಿಪಳ್ಳ ನಿವಾಸಿ ಕೇಶವ ಸನೀಲ್ (50) ಶಿಕ್ಷೆಗೊಳಪಟ್ಟ ಆರೋಪಿ. 2016ರ ಎ.10ರಂದು ಕಾರ್ಕಳ ತಾಲೂಕು ನಂದಳಿಕೆ ಗ್ರಾಮದ ಮಾವಿನಕಟ್ಟೆ ಬಸ್ ನಿಲ್ದಾಣದ ಬಳಿ ಕಾರಿನಲ್ಲಿ ಅಕ್ರಮವಾಗಿ ಗಾಂಜ ಮಾರಾಟ ಮಾಡುತ್ತಿದ್ದ ಕೇಶವ ಸನೀಲ್ನನ್ನು ಕಾರ್ಕಳ ಗ್ರಾಮಂತರ ಪೊಲೀಸರು ಬಂಧಿಸಿ, ಒಟ್ಟು 1894 ಗ್ರಾಂ ಗಾಂಜಾ, ಕಾರನ್ನು ವಶಪಡಿಸಿಕೊಂಡಿದ್ದರು.
ಸುತ್ತಮುತ್ತಲಿನ ಪರಿಸರದ ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ತಂದಿರುವುದಾಗಿ ಆರೋಪಿ ತಿಳಿಸಿದ್ದು, ಈ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಕಾರ್ಕಳ ವೃತ್ತ ನಿರೀಕ್ಷಕ ಜಿ.ಎಂ.ನಾಯ್ಕರ್ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷರೋಪ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಉಡುಪಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪ ಅವರು ಆರೋಪಿತನು ತಪ್ಪಿತಸ್ಥ ಎಂಬುದು ಕಂಡುಬಂದ ಹಿನ್ನೆಲೆಯಲ್ಲಿ ಆರೋಪಿಗೆ ಒಂದು ವರ್ಷ ಕಠಿನ ಸಜೆ ಮತ್ತು 30,000 ರೂ. ದಂಡ ವಿಧಿಸಿ ಆದೇಶ ನೀಡಿದ್ದಾರೆ. ಸರಕಾರಿ ಅಭಿಯೋಜಕ ಜಯರಾಮ ಶೆಟ್ಟಿ ವಾದ ಮಂಡಿಸಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.