![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 1, 2024, 2:13 AM IST
ಬೆಂಗಳೂರು/ಗಂಗಾವತಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ಮರಳಿದ ಬೆನ್ನಲ್ಲೇ ಮತ್ತೂಬ್ಬ ನಾಯಕನನ್ನು ಪಕ್ಷಕ್ಕೆ ಸೆಳೆಯುವ ಕಸರತ್ತುಗಳು ಆರಂಭ ವಾಗಿವೆ. ದಿಲ್ಲಿಯಲ್ಲಿ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಮಾಜಿ ಸಚಿವ ಬಿ.ಶ್ರೀರಾಮುಲು ಕೆಆರ್‌ಪಿ ಪಕ್ಷದ ಸಂಸ್ಥಾಪಕ ಹಾಗೂ ಶಾಸಕ ಜನಾರ್ದನ ರೆಡ್ಡಿ ಅವರಿಗೆ ಬಿಜೆಪಿ ನೀಡಿರುವ ಆಫರ್ ರವಾನೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಬುಧವಾರ ತುರ್ತಾಗಿ ಪಕ್ಷದ ರಾಜ್ಯ ಕಾರ್ಯಕಾರಿಣಿ ನಡೆಸಿದ ಜನಾರ್ದನ ರೆಡ್ಡಿ ಅವರು, ರಾಷ್ಟ್ರ ಹಾಗೂ ರಾಜ್ಯದ ರಾಜಕೀಯ ವಿದ್ಯಮಾನಗಳನ್ನು ಸಮಗ್ರವಾಗಿ ಚರ್ಚಿಸಿದ್ದಾರೆ. ಲೋಕಸಭಾ ಚುನಾವಣೆಗೂ ಮುನ್ನ ಕೆಆರ್‌ಪಿ ಪಕ್ಷವನ್ನು ವಿಲೀನಗೊಳಿಸುವಂತೆ ನೀಡಿರುವ ಪ್ರಸ್ತಾವನೆಯನ್ನು ಕಾರ್ಯಕಾರಿಣಿ ಮುಂದಿಟ್ಟಿದ್ದು, ವಿಲೀನಕ್ಕಿಂತ ಹೊಂದಾಣಿಕೆ ಸೂತ್ರವೆಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.
ಲೋಕಸಭೆ ಚುನಾವಣೆಯು ದೇಶದ ದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿದ್ದು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್‌ಪಿ) ಬಿಜೆಪಿ ಜತೆ ಸ್ಥಾನಗಳ ಹೊಂದಾಣಿಕೆಗೆ ಸಿದ್ಧವಾಗಿದೆ. ಈಗಾಗಲೇ ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಪಕ್ಷದ ಸಂಘಟನೆ ಬಲಿಷ್ಠವಾಗಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಪಕ್ಷ ಸಂಘಟಿಸಿ ಬಲಪಡಿಸಬೇಕಿದೆ. ಮತ್ತೂಮ್ಮೆ ನರೇಂದ್ರ ಮೋದಿ ಅವರು ಪ್ರಧಾನಿಯಾಗಲು ಲೋಕಸಮರದಲ್ಲಿ ಬಿಜೆಪಿ ನಮ್ಮ ಜತೆ ಹೊಂದಾಣಿಕೆಗೆ ಮುಂದಾದಲ್ಲಿ ಪಕ್ಷದ ಕಾರ್ಯಕರ್ತರೆಲ್ಲರೂ ಬದ್ಧವಾಗಿರಬೇಕು ಎಂದರು.
ಯುವ ಘಟಕದ ರಾಜ್ಯಾಧ್ಯಕ್ಷ ಭೀಮಾಶಂಕರ್ ಪಾಟೀಲ್ ಮಾತನಾಡಿ, ಲೋಕಸಭೆ ಚುನಾವಣೆಗೆ ಸಂಬಂಧಿಸಿ ಪಕ್ಷದ ಸ್ಥಾಪಕರಾದ ಗಾಲಿ ಜನಾರ್ದನ ರೆಡ್ಡಿ ತೆಗೆದುಕೊಳ್ಳುವ ನಿರ್ಣಯಗಳಿಗೆ ಬದ್ಧರಾಗಿದ್ದೇವೆ. ಅವರ ತೀರ್ಮಾನಕ್ಕೆ ಒಕ್ಕೊರಲಿನಿಂದ ಪಕ್ಷದ ಎಲ್ಲಾ ಪದಾಧಿ ಕಾರಿಗಳು ಸಮ್ಮತಿ ಸೂಚಿಸಿರುವುದು ಒಳ್ಳೆಯ ಬೆಳವಣಿಗೆ ಎಂದರು.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.