ನಾನು ಯಾವ ಕೆಲಸ ಮಾಡಿದರೂ ಅವರ ಸಲಹೆಯನ್ನು ಪಡೆದುಕೊಳ್ಳುತ್ತೇನೆ: ದೇವರಕೊಂಡ ಬಗ್ಗೆ ರಶ್ಮಿಕಾ
ನನಗೆ ಅವರ ಅಭಿಪ್ರಾಯದ ಅಗತ್ಯವಿರುತ್ತದೆ.
Team Udayavani, Feb 1, 2024, 12:51 PM IST
ಬೆಂಗಳೂರು: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ – ವಿಜಯ್ ದೇವರಕೊಂಡ ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಲ್ಲಿರುತ್ತಾರೆ. ಅವರ ಆತ್ಮೀಯತೆ ಇಂಟರ್ ನೆಟ್ ನಲ್ಲಿ ಅನೇಕ ಬಾರಿ ಸದ್ದು ಮಾಡಿದೆ.
ಇತ್ತೀಚೆಗೆ ರಶ್ಮಿಕಾ – ದೇವರಕೊಂಡ ಎಂಗೇಜ್ ಮೆಂಟ್ ಮಾಡಿಕೊಳ್ಳಲಿದ್ದಾರೆ ಎನ್ನುವ ಸುದ್ದಿಯೊಂದು ಹರಿದಾಡಿತ್ತು. ಆದರೆ ಇದು ಸತ್ಯಕ್ಕೆ ದೂರವೆಂದು ದೇವರಕೊಂಡ ಈ ಬಗ್ಗೆ ಸ್ಪಷ್ಟನೆ ನೀಡಿದ್ದರು.
ʼಗೀತಾ ಗೋವಿಂದಂʼ, ʼಡಿಯರ್ ಕಾಮ್ರೆಡ್ʼ ಮೂಲಕ ಬಿಗ್ ಸ್ಕ್ರೀನ್ ನಲ್ಲಿ ಮೋಡಿ ಮಾಡಿ ರಶ್ಮಿಕಾ – ದೇವರಕೊಂಡ ಆ ಬಳಿಕ ಜೊತೆಯಾಗಿ ಹಲವು ಬಾರಿ ಕಾಣಿಸಿಕೊಂಡಿದ್ದಾರೆ. ರಶ್ಮಿಕಾ ಮಂದಣ್ಣ ಅವರು, ಸಂದರ್ಶನವೊಂದರಲ್ಲಿ ವಿಜಯ್ ದೇವರಕೊಂಡ ಅವರ ಗೆಳೆತನದ ಬಗ್ಗೆ ಮಾತನಾಡಿದ್ದಾರೆ.
“ಈಗ ನಾನು ಜೀವನದಲ್ಲಿ ಏನು ಮಾಡಿದರೂ, ಅದಕ್ಕೆ ಅವರ(ದೇವರಕೊಂಡ) ಕೊಡುಗೆ ಇದೆ. ನಾನು ಯಾವ ಕೆಲಸ ಮಾಡಿದರೂ ಅವರ ಸಲಹೆಯನ್ನು ಪಡೆದುಕೊಳ್ಳುತ್ತೇನೆ. ಅವರ ಅಭಿಪ್ರಾಯದಂತೆ ನಾನು ಅದನ್ನು ಮಾಡುತ್ತೇನೆ” ಎಂದಿದ್ದಾರೆ.
“ವಿಜಯ್ ಎಲ್ಲದಕ್ಕೆ ಹೌದೆಂದು ಒಪ್ಪುವ ವ್ಯಕ್ತಿಯಲ್ಲ. ಅವರ ಅಭಿಪ್ರಾಯ ವಿಚಾರದ ಮೇಲಿರುತ್ತದೆ. ಇದು ಒಳ್ಳೆಯದು. ಒಳ್ಳೆಯದಲ್ಲ. ನಾನು ಏನು ಯೋಚಿಸುತ್ತೇನೋ, ಏನು ಯೋಚಿಸುವುದಿಲ್ವೋ.. ಎಲ್ಲದಕ್ಕೂ ಅವರು ನನಗೆ ಬೆಂಬಲ ನೀಡುತ್ತಾರೆ. ಅವರು ನನ್ನ ಇಡೀ ಜೀವನದಲ್ಲಿ ಬೇರೆಯವರಿಗಿಂತ ವೈಯಕ್ತಿಕವಾಗಿ ಹೆಚ್ಚಾಗಿ ನನ್ನನ್ನು ಬೆಂಬಲಿಸಿದ್ದಾರೆ. ಅವರು ನಾನು ನಿಜವಾಗಿಯೂ ಗೌರವಿಸುವ ವ್ಯಕ್ತಿ ಎಂದು ನಾನು ಭಾವಿಸುತ್ತೇನೆ” ಎಂದು ಹೇಳಿದ್ದಾರೆ.
ಕಳೆದ ಕೆಲ ವರ್ಷಗಳಿಂದ ರಶ್ಮಿಕಾ – ದೇವರಕೊಂಡ ಡೇಟ್ ನಲ್ಲಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಇಬ್ಬರು ಇದುವರೆಗೂ ಎಲ್ಲೂ ಹೇಳಿಕೊಂಡಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dhanashree Verma: ಯಶ್ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Kollywood: ʼಅಮರನ್ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?
Kollywood: ಧನುಷ್ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
Manya: ಭಜನ ಮಂದಿರದಿಂದ ಕಳವು ಆರೋಪಿಗಳಿಂದ ಮಾಹಿತಿ ಸಂಗ್ರಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.