Loksabha ಚುನಾವಣೆಗೆ ಸ್ಪರ್ಧಿಸುವುದಿಲ್ಲ, ನಾನೇನು ಫುಟ್ಬಾಲ್ ಚೆಂಡಾ!: ಪ್ರಕಾಶ ಹುಕ್ಕೇರಿ
ಹೈಕಮಾಂಡ್ ಹೇಳಿದರೆ ನಾನು ಸ್ಪರ್ಧೆ ಮಾಡಬೇಕಾ?
Team Udayavani, Feb 1, 2024, 3:57 PM IST
ಬೆಳಗಾವಿ: ಚಿಕ್ಕೋಡಿ ಲೋಕಸಭೆ ಕ್ಷೇತ್ರದಿಂದ ನಾನು ಸ್ಪರ್ಧೆ ಮಾಡುವದಿಲ್ಲ, ಪರಿಷತ್ ಸದಸ್ಯರಾಗಿ ಮುಂದುವರೆಯುತ್ತೇನೆ ಎಂದು ಕಾಂಗ್ರೆಸ್ ನಾಯಕ ಪ್ರಕಾಶ ಹುಕ್ಕೇರಿ ಗುರುವಾರ ಹೇಳಿಕೆ ನೀಡಿದ್ದಾರೆ.
ಚಿಕ್ಕೋಡಿ ತಾಲೂಕಿನ ಕೇರೂರ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಲೋಕಸಭೆ ಕ್ಷೇತ್ರದಿಂದ ಸ್ಪರ್ಧೆ ಕುರಿತು ಸ್ಪಷ್ಟನೆ ನೀಡಿ”ಲೋಕಸಭೆಗೆ ನಾನು ಸ್ಪರ್ಧೆ ಮಾಡುವುದು ಸತ್ಯಕ್ಕೆ ದೂರವಾದ ಸಂಗತಿ. ಹೈಕಮಾಂಡ್ ಹೇಳಿದರೆ ನಾನು ಸ್ಪರ್ಧೆ ಮಾಡಬೇಕಾ? ನಾನೇನು ಫುಟ್ಬಾಲ್ ಚೆಂಡಾ ಎಂದು ಪ್ರಶ್ನಿಸಿದರು.
ಕಳೆದ 2014 ರಲ್ಲಿ ರಾಜ್ಯದಲ್ಲಿ ಸಚಿವನಾಗಿದ್ದೆ. ಆಗ ಹೈಕಮಾಂಡ್ ಸೂಚನೆ ಮೇರೆಗೆ ಸಚಿವ ಸ್ಥಾನ ಬಿಟ್ಟು ಸಂಸದನಾಗಿ ಆಯ್ಕೆಯಾದೆ. ಈಗ ಶಿಕ್ಷಕರ ಮತಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾಗಿ ಒಂದು ವರ್ಷದಿಂದ ನಿರಂತರವಾಗಿ ಕೆಲಸ ಮಾಡುತ್ತಿದ್ದೇನೆ.ಲೋಕಸಭೆಗೆ ಸ್ಪರ್ಧೆ ಮಾಡುವುದಿಲ್ಲ. ಪರಿಷತ್ ಸದಸ್ಯರಾಗಿ ಮುಂದುವರಿಯುವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ
Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.