Guarantee Scheme ರದ್ದು ಹೇಳಿಕೆ; ಮಾಗಡಿ ಶಾಸಕ ಬಾಲಕೃಷ್ಣ ವಿರುದ್ಧ ಜೆಡಿಎಸ್ ದೂರು
Team Udayavani, Feb 2, 2024, 2:50 PM IST
ರಾಮನಗರ: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋತರೆ ಈಗಾಗಲೇ ಜಾರಿ ಮಾಡಿರುವ ಐದು ಗ್ಯಾರೆಂಟಿಗಳು ರದ್ದಾಗುತ್ತವೆ ಎಂದು ಚುನಾವಣೆಗೆ ಮೊದಲೇ ಜನತೆಗೆ ಬ್ಲ್ಯಾಕ್ ಮೇಲ್ ಮಾಡಿದ್ದಾರೆಂದು ಆರೋಪಿಸಿ ಮಾಗಡಿ ವಿಧಾನಸಭೆ ಕ್ಷೇತ್ರದ ಶಾಸಕ ಎಚ್.ಸಿ.ಬಾಲಕೃಷ್ಣ ಅವರ ವಿರುದ್ಧ ಚುನಾವಣಾ ಆಯೋಗಕ್ಕೆ ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷವು ದೂರು ನೀಡಿದೆ.
ಶಾಸಕ ಬಾಲಕೃಷ್ಣ ಅವರ ಶಾಸಕತ್ವವನ್ನು ರದ್ದು ಮಾಡಬೇಕು ಹಾಗೂ ಕಾಂಗ್ರೆಸ್ ಪಕ್ಷದ ಮಾನ್ಯತೆಯನ್ನು ರದ್ದುಪಡಿಸಬೇಕು ಎಂದು ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರಿಗೆ ಸಲ್ಲಿಸಿದ ದೂರಿನಲ್ಲಿ ಮನವಿ ಮಾಡಲಾಗಿದೆ.
ಈ ಸಂದರ್ಭದಲ್ಲಿ ಯುವ ಜೆಡಿಎಸ್ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಪಕ್ಷದ ಶಾಸಕ ಸುರೇಶ್ ಬಾಬು, ಹೆಚ್.ಟಿ.ಮಂಜುನಾಥ್, ಹರೀಶ್ ಗೌಡ, ಸ್ವರೂಪ್ ಪ್ರಕಾಶ್ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಚೌಡರೆಡ್ಡಿ ತೂಪಲ್ಲಿ, ಜೆಡಿಎಸ್ ಬೆಂಗಳೂರು ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಸೇರಿ ಅನೇಕ ನಾಯಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ
Ramanagara: ಆರು ಟ್ರಾನ್ಸ್ ಫಾರ್ಮರ್ ಗಳ ಕಳವು
Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್.ಡಿ.ದೇವೇಗೌಡ ಭವಿಷ್ಯ
By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್ ಕುಮಾರಸ್ವಾಮಿಗೋ?
MUST WATCH
ಹೊಸ ಸೇರ್ಪಡೆ
Byndoor: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ!
Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.