ಭಟ್ಕಳ: ಸನಾತನ ಸಂಸ್ಕೃತಿ ಉಳಿಸಲು ಎಲ್ಲರಲ್ಲೂಹನುಮನ ಶಕ್ತಿ ತುಂಬಿ- ಶ್ರೀವಿಶ್ವಪ್ರಿಯ

ಎಲ್ಲಾ ಠಾಣೆಗಳಲ್ಲಿ ಹನುಮನ ಭಾವಚಿತ್ರ ಇಟ್ಟು ಪೂಜೆ ಮಾಡಲಾಗುತ್ತದೆ

Team Udayavani, Feb 2, 2024, 4:38 PM IST

ಭಟ್ಕಳ: ಸನಾತನ ಸಂಸ್ಕೃತಿ ಉಳಿಸಲು ಎಲ್ಲರಲ್ಲೂಹನುಮನ ಶಕ್ತಿ ತುಂಬಿ- ಶ್ರೀವಿಶ್ವಪ್ರಿಯ

ಉದಯವಾಣಿ ಸಮಾಚಾರ
ಭಟ್ಕಳ: ನಾವು ಹನುಮನನ್ನು ಇಷ್ಟಪಟ್ಟು ಆರಾಧಿಸಲು ಆತನ ಕೃತ್ವತ್ವ ಶಕ್ತಿಯೇ ಕಾರಣ ಎಂದು ಉಡುಪಿ  ಅಷ್ಟಮಠಗಳಲ್ಲೊಂದಾದ ಅದಮಾರು ಮಠದ ಪೀಠಾಧಿಪತಿಗಳಾದ ಶ್ರೀವಿಶ್ವಪ್ರಿಯ ತೀರ್ಥ ಸ್ವಾಮೀಜಿಗಳು ಹೇಳಿದರು.

ನಗರದ ಮಣ್ಕುಳಿಯಲ್ಲಿರುವ ಶ್ರೀ ಹನುಮಂತ ಹಾಗೂ ಶ್ರೀಲಕ್ಷ್ಮೀ ನಾರಾಯಣ ದೇಗುಲ ನಿರ್ಮಾಣ ಕಾರ್ಯಕ್ರಮದ ಪೂರ್ವಭಾವಿಯಾಗಿ ನಿಧಿ ಕುಂಭ ಸ್ಥಾಪನೆ ಕಾರ್ಯಕ್ಕೆ ಚಾಲನೆ ನೀಡಿ ಅವರು ಆಶೀರ್ವಚನ ನೀಡಿದರು.

ಹನುಮನು ತನ್ನ ಕೃತ್ವತ್ವ ಶಕ್ತಿಯಿಂದ ಉತ್ತರ ಭಾರತದ ಎಲ್ಲ ಪೊಲೀಸ್‌ ಠಾಣೆಗಳಲ್ಲಿ ಸ್ಥಾನ ಪಡೆದಿದ್ದಾನೆ. ಅಲ್ಲಿನ ಎಲ್ಲಾ ಠಾಣೆಗಳಲ್ಲಿ ಹನುಮನ ಭಾವಚಿತ್ರ ಇಟ್ಟು ಪೂಜೆ ಮಾಡಲಾಗುತ್ತದೆ. ಅದು ಹನುಮಂತನ ಮೇಲೆ ಜನತೆ ಇಟ್ಟಿರುವ ನಂಬಿಕೆ ಮತ್ತು ದೃಢ ವಿಶ್ವಾಸದ ಸಂಕೇತ. ಎಲ್ಲ ಕಡೆಗಳಲ್ಲಿಯೂ ಕೂಡಾ ಹನುಮ ಎರಡೂ ಕೈಗಳನ್ನು ಮುಗಿದಿರುವ ಭಂಗಿಯಲ್ಲಿನೋಡುತ್ತೇವೆ. ಆದರೆ ಇಲ್ಲಿ ರಾಕ್ಷಸನನ್ನು ಸಂಹರಿಸಿ ಅಭಯ ಹಸ್ತವನ್ನು ನೀಡಿದ್ದು ಹನುಮನ ವಿಶೇಷ
ಭಂಗಿಯಾಗಿದೆ ಎಂದರು.

ನಮ್ಮ ಸನಾತನ ಸಂಸ್ಕೃತಿ ಉಳಿವಿಗಾಗಿ ಮಕ್ಕಳಲ್ಲಿ ಶಾಲೆ, ಮನೆಯಲ್ಲೂ ಕೂಡ ಹನುಮನ ಶಕ್ತಿ ತುಂಬಬೇಕು. ಮಕ್ಕಳು ಸರಿಯಾದ ಮಾರ್ಗದಲ್ಲಿ ಹೋಗುವಂತೆ ಮಾಡುವ ಕಾರ್ಯ ಆಗಬೇಕು. ಪ್ರತಿದಿನ ದೇವಾಲಯಕ್ಕೆ ಹೋಗುವುದರಿಂದ ಮಕ್ಕಳಲ್ಲಿ ದೇವರ ಹಾಗೂ ತಂದೆ-ತಾಯಿಯರಲ್ಲಿ ಭಕ್ತಿ ಮೂಡುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ
ಮಂಕಾಳ ವೈದ್ಯ ಮಾತನಾಡಿ ದೇವಾಲಯ ನಿರ್ಮಾಣ ಕಾರ್ಯದಲ್ಲಿ ಭಾಗವಹಿಸುವುದು ಒಂದು ಭಾಗ್ಯ. ನಾವು ಮಾಡಿದ ಸಾಧನೆ ಈ ಸಮಾಜಕ್ಕೆ ಕೊಟ್ಟ ಕೊಡುಗೆಯೇ ಜೀವನ. ಸಮಾಜಕ್ಕೆ ಕೊಟ್ಟ ಕೊಡುಗೆ ಮಾತ್ರ ಶಾಶ್ವತ. ನಾವು ಉತ್ತಮ ಕೆಲಸ ಮಾಡಿದಾಗ ನಮ್ಮ ಜೀವನ ಸಾರ್ಥಕವಾಗಲಿದೆ ಎಂದರು. ದೇವಸ್ಥಾನದ ನಿರ್ಮಾಣ ಕಾರ್ಯವನ್ನು ಒಂದು ವರ್ಷದ ಒಳಗೆ ಮುಗಿಸುವುದಕ್ಕೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ಮಂಕಾಳ ವೈದ್ಯ ದಂಪತಿಗಳನ್ನು ದೇವಸ್ಥಾನ ಜೀರ್ಣೋದ್ಧಾರ ಸಮಿತಿ ವತಿಯಿಂದ ಗೌರವಿಸಲಾಯಿತು.
ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುಭಾಷ್‌ ಎಂ. ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನಾಗಯಕ್ಷೆ ಧರ್ಮದೇವಿ ಸಂಸ್ಥಾನದ ಅಧ್ಯಕ್ಷ ರಾಮದಾಸ ಪ್ರಭು ಮಾತನಾಡಿದರು.

ದೇವಾಲಯದ ಟ್ರಸ್ಟಿ ಮಹಾಬಲೇಶ್ವರ ಶೆಟ್ಟಿ, ಹಾಡುವಳ್ಳಿ ಗ್ರಾ.ಪಂ.ಅಧ್ಯಕ್ಷ ಶ್ರೀಧರ ಶೆಟ್ಟಿ, ಉಧ್ಯಮಿ ಮಂಜುನಾಥ ಶೆಟ್ಟಿ ಬೆಂಗಳೂರು, ವಿನಾಯಕ ಮುಂಬೈ ಉಪಸ್ಥಿತರಿದ್ದರು. ಕೃಷ್ಣಮೂರ್ತಿ ಶೆಟ್ಟಿ ಸ್ವಾಗತಿಸಿದರು. ಶಿಕ್ಷಕ ಮನೋಜ ಶೆಟ್ಟಿ, ತೇಜಸ್ವಿನಿ ಆರ್‌.ಶೆಟ್ಟಿ ನಿರೂಪಿಸಿದರು. ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಉದಯ್‌ ಶೆಟ್ಟಿ ಸಹಕರಿಸಿದರು.

ಟಾಪ್ ನ್ಯೂಸ್

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

5-dandeli

Dandeli: ವಿದ್ಯುತ್ ಕಂಬದ ಜಿಓಎಸ್ ಕಳವು‌ ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು

10

Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ

10-dandeli

Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.