Brahmavara ವಿಶಾಲ ಗಾಣಿಗ ಕೊಲೆ ಪ್ರಕರಣ; 3 ವರ್ಷದ ಬಳಿಕ ಲಕ್ನೋದಲ್ಲಿ ಮತ್ತೋರ್ವ ಆರೋಪಿ ಬಂಧನ
Team Udayavani, Feb 3, 2024, 2:48 PM IST
ಉಡುಪಿ: ಸುಮಾರು ಮೂರು ವರ್ಷಗಳ ಹಿಂದೆ ಕರಾವಳಿಯಲ್ಲಿ ಸಂಚಲನ ಮೂಡಿಸಿದ್ದ ಬ್ರಹ್ಮಾವರದ ವಿಶಾಲ ಗಾಣಿಗ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡ ಆರೊಪಿಯನ್ನು ಕೊನೆಗೂ ಬಂಧಿಸಲಾಗಿದೆ.
ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಧರ್ಮೇಂದ್ರ ಕುಮಾರ್ ಸುಹಾನಿ ಎಂಬ ಆರೋಪಿಯನ್ನು ಬ್ರಹ್ಮಾವರ ಪೊಲೀಸರು ಲಕ್ನೋದಲ್ಲಿ ಬಂಧಿಸಿದ್ದಾರೆ.
2021ನೇ ಜುಲೈ ತಿಂಗಳಿನಲ್ಲಿ ಬ್ರಹ್ಮಾವರ ಠಾಣಾ ವ್ಯಾಪ್ತಿಯ ಕುಮ್ರಗೋಡುವಿನಲ್ಲಿರುವ ಮಿಲನ ರೆಸಿಡೆನ್ಸಿಯಲ್ಲಿ ವಿಶಾಲ ಗಾಣಿಗ ಅವರ ಕೊಲೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಆಕೆಯ ಗಂಡ ರಾಮಕೃಷ್ಣ, ಸ್ವಾಮಿನಾಥನ್ ನಿಷಾದ್, ರೋಹಿತ್ ರಾಣಾ ಪ್ರತಾಪ್ ಎಂಬವರನ್ನು ಈಗಾಗಲೇ ಬಂಧಿಸಲಾಗಿತ್ತು.
ವಿಶಾಲ ಕೊಲೆ ಪ್ರಕರಣದಲ್ಲಿ ಆಕೆಯ ಗಂಡ ರಾಮಕೃಷ್ಣ ಪ್ರಮುಖ ಆರೋಪಿಯಾಗಿದ್ದಾನೆ. ರಾಮಕೃಷ್ಣನಿಗೂ ಸುಪಾರಿ ಕಿಲ್ಲರ್ ಸ್ವಾಮಿನಾಥನ್ ನಿಶಾದ್ನಿಗೂ ಪರಿಚಯ ಮಾಡಿಸಿ ಕೊಲೆಗೆ ಸಹಕರಿಸಿದ ಇನ್ನೋರ್ವ ಆರೋಪಿ ಧರ್ಮೇಂದ್ರ ಕುಮಾರ್ ಸುಹಾನಿ ಮೂರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ.
ಈತನಿಗೆ ಬಲೆ ಬೀಸಿದ್ದ ಬ್ರಹ್ಮಾವರ ಠಾಣಾ ಪೊಲೀಸರು ಪಿಎಸ್ಐ ಮಧು ಬಿ. ಇ ಹಾಗೂ ಠಾಣಾ ಸಿಬ್ಬಂದಿಗಳಾದ ಶಾಂತರಾಜ್ ಎಎಸ್ಐ, ಸುರೇಶ ಬಾಬುರವರ ತಂಡವು ದಿನಾಂಕ ಫೆ.02 ರಂದು ಲಕ್ನೋ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದು ದಿನಾಂಕ ಫೆ.03 ರಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!
Udupi: ಗ್ರಾ.ಪಂ. ನೌಕರರ ಮುಷ್ಕರಕ್ಕೆ ಸ್ಪಂದಿಸದ ಸರಕಾರ; ನಾಳೆಯಿಂದ ಪ್ರತಿಭಟನೆ ಮುಂದುವರಿಕೆ
Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Malpe: 8 ಜಿಲ್ಲಾಡಳಿತದಿಂದ ತಡೆಬೇಲಿ ತೆರವು 8ವಾಟರ್ ಸ್ಪೋರ್ಟ್ಸ್ ಮತ್ತೆ ಆರಂಭ
Udupi: ಸಾಲು-ಸಾಲು ರಜೆ; ನವರಾತ್ರಿ ಸಂಭ್ರಮ; ಎಲ್ಲೆಡೆ ವಾಹನ ದಟ್ಟಣೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!
Kasaragod: ಗಾಯಕಿಯ ಮಾನಭಂಗ; ದೂರು: ಗಾಯಕ ರಿಯಾಸ್ ಬಂಧನ
Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ
ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ
Ambewadi ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೀಟೆ ಮರ ಕಡಿಯುತ್ತಿದ್ದ ಓರ್ವನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.