![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Feb 3, 2024, 7:10 PM IST
ವಿಜಯಪುರ : ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಿ, ಬೆಳೆಸುವಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಹಳ ಶ್ರಮಿಸಿದ್ದಾರೆ. ಇವರ ಪರಿಶ್ರಮದಿಂದಾಗಿ ಕಾಂಗ್ರೆಸ್ ಪಕ್ಷದ ಹೆಚ್ಚಿನ ಶಾಸಕರು ಆಯ್ಕೆಯಾಗಲು ಕಾರಣವಾಗಿದ್ದು, ಭವಿಷ್ಯದಲ್ಲಿ ಉನ್ನತ ಸ್ಥಾನ ಸಿಗಲಿದೆ ಎಂದು ವೀರಶೈವ ರಂಭಾಪುರಿ ಪೀಠದ ಜಗದ್ಗುರು ವೀರ ಸೋಮೇಶ್ವರ ಶ್ರೀಗಳು ಹೇಳಿದರು.
ಶನಿವಾರ ಜಿಲ್ಲೆಯ ಮನಗೂಳಿ ಪಟ್ಟಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಶಿವಕುಮಾರ್ ಅವರು ವೀರಶೈವ ಲಿಂಗಾಯತ ಸಮುದಾಯದ ಜೊತೆಗೂ ಉತ್ತಮ ಬಾಂಧವ್ಯ ಇಟ್ಟುಕೊಂಡಿದ್ದಾರೆ. ಇವರ ಪರಿಶ್ರಮದ ಫಲವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರು ಆಯ್ಕೆಯಾಗಿ, ಅವರ ಅವಧಿಯಲ್ಲಿ ಪಕ್ಷ ಅಧಿಕಾರಕ್ಕೆ ಬಂದಿದೆ ಎಂದರು.
ಶಿವಕುಮಾರ್ ಅವರ ಅನುಭವ ತಿರಸ್ಕಾರ ಮಾಡಲು ಸಾಧ್ಯವಿಲ್ಲ. ಹೀಗಾಗಿ ಮುಂದಿನ ದಿನಗಳಲ್ಲಿ ಅತ್ಯುನ್ನತ ಸ್ಥಾನ ಸಿಗಲಿದೆ. ರಾಜ್ಯದಲ್ಲಿ ಅತ್ಯುನ್ನತ ಸ್ಥಾನ ಎಂದರೆ ಅದು ಮುಖ್ಯಮಂತ್ರಿ ಸ್ಥಾನ. ಹಾಗಂತ ಈಗಲೇ ಸಿಗುತ್ತೆ ಎಂದು ಹೇಳಲ್ಲ, ಭವಿಷ್ಯದ ದಿನಗಳಲ್ಲಿ ರಾಜ್ಯದ ಚುಕ್ಕಾಣಿ ಸಿಗಬಹುದಾದ ಅರ್ಹತೆ ಇದೆ ಎಂದು ಭವಿಷ್ಯ ನುಡಿದರು.ನಮಗಷ್ಟೇ ಅಲ್ಲ, ಬೇರೆಯವರ ಅಭಿಪ್ರಾಯವು ಇದೆ ಆಗಿದೆ. ಆದರೆ ಮುಂದೆ ಕಾಂಗ್ರೆಸ್ ಪಕ್ಷದ ವರಿಷ್ಠರಿಗೆ ಬಿಟ್ಟ ವಿಚಾರ ಎಂದರು.
ಸಿದ್ಧಗಂಗಾ ಶ್ರೀಗಳಿಗೆ ಭಾರತರತ್ನ ಕೊಡಿ
ಆಧ್ಯಾತ್ಮಿಕ ಹಾಗೂ ಶೈಕ್ಷಣಿಕ ಕ್ರಾಂತಿ ಮಾಡಿರುವ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಶ್ರೀಗಳಿಗೂ ಭಾರತ ಸರ್ಕಾರ ಭಾರತರತ್ನ ಗೌರವ ನೀಡಬೇಕು ಎಂದು ರಂಭಾಪುರಿಶ್ರೀಗಳು ಆಗ್ರಹಿಸಿದರು.
ಹಿರಿಯ ರಾಜಕೀಯ ನಾಯಕ ಎಲ್.ಕೆ.ಅಡ್ವಾಣಿ ಅವರಿಗೆ ಭಾರತರತ್ನ ಪ್ರಶಸ್ತಿ ಘೋಷಿಸಿರುವುದ ಸಂತಸದ ವಿಷಯ. ಅಟಲ್ ಬಿಹಾರಿ ವಾಜಪೇಯಿ ಹಾಗೂ ಲಾಲ್ ಕೃಷ್ಣ ಅಡ್ವಾಣಿ ಅವರು ಸಂಕಷ್ಟದ ಸಂದರ್ಭದಲ್ಲಿ ಬಿಜೆಪಿ ಪಕ್ಷ ಕಟ್ಟಿ ಬೆಳೆಸುವಲ್ಲಿ ಶ್ರಮಿಸಿದ್ದಾರೆ ಎಂದರು.
ಈ ಇಬ್ಬರು ನಾಯಕರು ಬಿಜೆಪಿ ಪಕ್ಷ ಕಟ್ಟುವಲ್ಲಿ ಮಾತ್ರವಲ್ಲ ಭಾರತೀಯ ಸಂಸ್ಕೃತಿ ಉಳಿಸುವಲ್ಲಿ ಜೋಡೆತ್ತುಗಳಂತೆ ಹೋರಾಡಿದ್ದಾರೆ. ಹೀಗಾಗಿ ರಾಜಕೀಯ ಹಿರಿಯ ನಾಯಕರಿಗೆ ಗೌರವ ನೀಡಿರುವುದು ಸಹಜವಾಗಿ ಸಂತಸ ತಂದಿದೆ ಎಂದರು.
ಕರ್ನಾಟಕದಲ್ಲಿ ಆಧ್ಯಾತ್ಮಿಕ ಶೈಕ್ಷಣಿಕ ಕ್ಷೇತ್ರದಲ್ಲಿ ತುಮಕೂರಿನ ಸಿದ್ಧಗಂಗೆ ಮಠದ ಡಾ.ಶಿವಕುಮಾರ ಶ್ರೀಗಳು ದೊಡ್ಡ ಕ್ರಾಂತಿಯನ್ನೇ ಮಾಡಿದ್ದಾರೆ. ಹೀಗಾಗಿ ಸಿದ್ಧಗಂಗಾ ಶ್ರೀಗಳಿಗೆ ಭಾರತರತ್ನ ನೀಡುವಂತೆ ಹಿಂದಿನ ಸರ್ಕಾರವೂ ಆಗ್ರಹ ಮಾಡಿತ್ತು ಎಂದರು.
ತಾಂತ್ರಿಕ ಕಾರಣದಿಂದ ಅದು ಸಾಧ್ಯವಾಗಿಲ್ಲ, ಆದರೆ ಭವಿಷ್ಯದಲ್ಲಿ ಸಿದ್ಧಗಂಗಾ ಶ್ರೀಗಳಿಗೆ ಭಾರತರತ್ನ ಪ್ರಶಸ್ತಿ ನೀಡುವ ಮೂಲಕ ಸರ್ಕಾರ ಗೌರವ ಸಲ್ಲಿಸಬೇಕು ಎಂದು ಆಗ್ರಹಿಸಿದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.