Vijaypur; ಕಾಂಗ್ರೆಸ್ ಜಿಲ್ಲಾ ಕಚೇರಿಗೆ ಮುತ್ತಿಗೆ ಯತ್ನ: ಬಿಜೆಪಿ ಕಾರ್ಯಕರ್ತರು ವಶಕ್ಕೆ
ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಸದ ಸುರೇರ್ ದೇಶದ ಜನರ ಕ್ಷಮೆ ಯಾಚನೆಗೆ ಆಗ್ರಹ
Team Udayavani, Feb 4, 2024, 1:47 PM IST
ವಿಜಯಪುರ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಏಕವಚನದಲ್ಲಿ ಸಂಬೋಧಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರತ್ಯೇಕ ರಾಷ್ಟ್ರದ ಹೇಳಿಕೆ ನೀಡಿರುವ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ ಕ್ಷಮೆ ಯಾಚನೆಗೆ ಆಗ್ರಹಿಸಿ ಭಾನುವಾರ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ನಗರದ ಕೋರ್ಟ್ ವೃತ್ತದಲ್ಲಿರುವ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಬಾಗಲಕೋಟ ರಸ್ತೆಯಲ್ಲಿರುವ ಬಿಜೆಪಿ ಕಚೇರಿಯಿಂದ ಯುವ ಮೋರ್ಚಾ ಕಾರ್ಯಕರ್ತರು ರಾಷ್ಟ್ರಪತಿ ಗಳನ್ನು ಅವಮಾನಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ದೇಶ ವಿಭಜನೆಯ ವಿದ್ರೋಹದ ಹೇಳಿಕೆ ನೀಡಿರುವ ಸಂಸದ ಡಿ.ಕೆ.ಸುರೇಶ ದೇಶದ ಜನತೆಯ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿ ಮೆರವಣಿಗೆ ನಡೆಸಿದರು.
ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಕಾಂಗ್ರೆಸ್ ಕಚೇರಿಗೆ ಸಂಪರ್ಕ ಕಲ್ಪಿಸುವ ರಾಮನಗರ ರಸ್ತೆಗೆ ಬ್ಯಾರಿಕೇಡ್ ಅಳವಡಿಸಿ, ಸಂಚಾರ ನಿರ್ಬಂಧಿಸಿದ್ದರು. ಈ ವೇಳೆ ಬ್ಯಾರಿಕೇಡ್ ಅಳವಡಿಸಿದ ಸ್ಥಳಕ್ಕೆ ಆಗಮಿಸಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ಪ್ರತಿಭಟನಾ ಮೆರವಣಿಗೆ ತಡೆಯಲು ಪೊಲೀಸರು ಮುಂದಾದರು. ಪ್ರತಿಭಟನ ನಿರತರು ಬ್ಯಾರಿಕೇಡ್ ಕಿತ್ತುಹಾಕಿ ಕಾಂಗ್ರೆಸ್ ಕಚೇರಿಯತ್ತ ಮುನ್ನುಗ್ಗಲು ಯತ್ನಿಸಿದರೂ, ಪೊಲೀಸರು ಅವಕಾಶ ಕಲ್ಪಿಸಲಿಲ್ಲ.ಕುಪಿತರಾದ ಪ್ರತಿಭಟನಾ ನಿರತರು ಕೋರ್ಟ್ ವೃತ್ತದಲ್ಲಿ ಧರಣಿ ನಡೆಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಸದ ಡಿ.ಕೆ.ಸುರೇಶ್ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.
ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ಪ್ರತಿಭಟನಾ ನಿರತ ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದು, ಪೊಲೀಸ್ ವ್ಯಾನ್ ನಲ್ಲಿ ಕರೆದೊಯ್ಯುವಾಗ ಕಾಂಗ್ರೆಸ್ ಭಗಾವೋ ದೇಶ ಬಚಾವೋ, ಹರಹರ ಮಹಾದೇವ್ , ಜೈಶ್ರೀರಾಮ್ , ಭಾರತ್ ಮಾತಾಕಿ ಜೈ ಎಂಬೆಲ್ಲ ಘೋಷಣೆ ಕೂಗಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.