Politics: ದಿಲ್ಲಿ ಹೋರಾಟಕ್ಕೆ ಕಾಂಗ್ರೆಸ್ ತಯಾರಿ
ನಾಳೆಯೇ ಶಾಸಕರು, ಮೇಲ್ಮನೆ ಸದಸ್ಯರು ರಾಜಧಾನಿಗೆ- ವಿಮಾನಗಳ ಮೂಲಕ ಕರೆತರಲು ಉಸ್ತುವಾರಿಗಳಿಗೆ ಹೊಣೆ
Team Udayavani, Feb 5, 2024, 12:27 AM IST
ಬೆಂಗಳೂರು: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಅನ್ಯಾಯ ಆಗಿದೆ ಎಂದು ಆರೋಪಿಸಿ ದಿಲ್ಲಿಯಲ್ಲಿ ಹೋರಾಟ ಕ್ಕಿಳಿಯಲು ನಿರ್ಧರಿಸಿರುವ ರಾಜ್ಯ ಕಾಂಗ್ರೆಸ್ ಫೆ. 7ರಂದು ಸಂಸತ್ ಭವನದ ಎದುರು ಪ್ರತಿಭಟನೆಗೆ ಸಿದ್ಧತೆ ನಡೆಸುತ್ತಿದೆ. ಜತೆಗೆ, “ನನ್ನ ತೆರಿಗೆ ನನ್ನ ಹಕ್ಕು” ಅಭಿಯಾನಕ್ಕೂ ಬೆಂಬಲ ಸೂಚಿಸಿದೆ.
ದಕ್ಷಿಣ ಭಾರತ ಪ್ರತ್ಯೇಕ ರಾಷ್ಟ್ರದ ಕೂಗೆಬ್ಬಿಸಿದ ಸಂಸದ ಡಿ.ಕೆ. ಸುರೇಶ್ ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಿದ್ದು, ಇದರಿಂದ ಪಕ್ಷಕ್ಕಾಗಿರುವ ಮುಜುಗರವನ್ನೂ ತಪ್ಪಿಸಬೇಕಾದ ಅನಿವಾರ್ಯಕ್ಕೆ ಕಾಂಗ್ರೆಸ್ ಸಿಲುಕಿದೆ. ಅಲ್ಲದೆ ಲೋಕ ಸಭೆ ಚುನಾವಣೆ ಸನ್ನಿಹಿತವಾಗುತ್ತಿರು ವುದರಿಂದ ಪ್ರಧಾನಿ ಮೋದಿ ನೇತೃತ್ವದ ಎನ್‌ಡಿಎ ಸರಕಾರದ ವಿರುದ್ಧ ಜನಾಭಿಪ್ರಾಯ ಮೂಡಿಸಲು ಮುಂದಾಗಿದೆ. ಅದರಂತೆ ಬುಧವಾರ ದಿಲ್ಲಿಯಲ್ಲಿ ದೊಡ್ಡಮಟ್ಟದ ಪ್ರತಿ ಭಟನೆ ನಡೆಯಲಿದ್ದು, ಅದರಲ್ಲಿ ಭಾಗಿಯಾಗುವಂತೆ ಪಕ್ಷದ ಶಾಸಕರು, ವಿಧಾನಪರಿಷತ್ತಿನ ಸದಸ್ಯರೆಲ್ಲರಿಗೂ ಆಹ್ವಾನ ಕೊಟ್ಟಿರುವ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಶಿವಕುಮಾರ್, ಮಂಗಳವಾರವೇ ಎಲ್ಲರೂ ದಿಲ್ಲಿಯಲ್ಲಿ ಹಾಜರಿರುವಂತೆ ತಾಕೀತು ಮಾಡಿದ್ದಾರೆ.
ಜಿಲ್ಲಾ ಉಸ್ತುವಾರಿಗಳೇ ಹೊಣೆ
ಆಯಾ ಜಿಲ್ಲಾ ವ್ಯಾಪ್ತಿಯ ಶಾಸಕರು ಮತ್ತು ಮೇಲ್ಮನೆ ಸದಸ್ಯರನ್ನು ದಿಲ್ಲಿಗೆ ಕರೆತರುವ ಜವಾಬ್ದಾರಿಯನ್ನು ಜಿಲ್ಲಾ ಉಸ್ತುವಾರಿ ಸಚಿವರಿಗೆ ನೀಡಿದ್ದು, ಯಾರೂ ತಪ್ಪಿ ಹೋಗದಂತೆ ನೋಡಿ ಕೊಳ್ಳುವ ಹೊಣೆ ವಹಿಸಿದೆ.
ಪಕ್ಷದಲ್ಲಿ ಎಲ್ಲರನ್ನೂ ಹಿಡಿದಿಟ್ಟು ಕೊಳ್ಳುವ ಸಲುವಾಗಿಯೂ ಕರ್ನಾಟಕ ದಿಂದ ದಿಲ್ಲಿಗೆ ಶಾಸಕರು, ಮೇಲ್ಮನೆ ಸದಸ್ಯರನ್ನು ಕರೆದೊಯ್ಯುವ ಕಸರತ್ತನ್ನು ಕಾಂಗ್ರೆಸ್ ನಡೆಸಿದೆ.
4 ವರ್ಷಗಳಲ್ಲಿ 45 ಸಾವಿರ ಕೋ.ರೂ. ಅನ್ಯಾಯ: ಸಿಎಂ
ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರಕಾರದಿಂದ ಕರ್ನಾಟಕಕ್ಕೆ ಅನ್ಯಾಯ ವಾಗು ತ್ತಿದೆ ಎಂದು ಆರೋ ಪಿ ಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “15ನೇ ಹಣಕಾಸು ಆಯೋಗದ ಬಳಿಕ ರಾಜ್ಯಕ್ಕೆ ಬರುವ ತೆರಿಗೆಯ ಪಾಲು ಗಣನೀಯವಾಗಿ ಇಳಿಕೆಯಾಗಿದೆ. ಇದರಿಂದ ಕಳೆದ 4 ವರ್ಷಗಳಲ್ಲಿ ರಾಜ್ಯಕ್ಕೆ ಬರೋಬ್ಬರಿ 45 ಸಾವಿರ ಕೋಟಿ ರೂ. ನಷ್ಟವಾಗಿದೆ. ಈ ಅನ್ಯಾಯವನ್ನು ಸಹಿಸಲಾಗದು” ಎಂದು ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಜತೆಗೆ ಅನ್ಯಾಯವನ್ನು ಖಂಡಿಸಿ ಕನ್ನಡಿಗರು ನಡೆಸುತ್ತಿರುವ, “ನನ್ನ ತೆರಿಗೆ, ನನ್ನ ಹಕ್ಕು’ ಟ್ವಿಟರ್ ಅಭಿಯಾನಕ್ಕೆ ನನ್ನ ಪೂರ್ಣ ಬೆಂಬಲವಿದೆ. ನಮ್ಮೆಲ್ಲರ ಧ್ವನಿ ಒಟ್ಟಾದರೆ ದಿಲ್ಲಿವರೆಗೆ ಕೇಳುವುದು ಶತಸಿದ್ಧ ಎಂದಿದ್ದಾರೆ.
ಕನ್ನಡಿಗರು ಬೆವರು ಸುರಿಸಿ ಕಟ್ಟುವ ತೆರಿಗೆ ನಮ್ಮವರ ಕಷ್ಟಕಾಲಕ್ಕೆ ಉಪಯೋಗಕ್ಕೆ ಬರದೆ ಉತ್ತರದ ರಾಜ್ಯಗಳ ಪಾಲಾಗುತ್ತಿದೆ. ದಕ್ಷಿಣ ಭಾರತದ ರಾಜ್ಯಗಳ ತೆರಿಗೆ ಋಣ ದಲ್ಲಿರುವ ಉತ್ತರದ ರಾಜ್ಯಗಳು ಎಂದಿಗೂ ನಮಗೆ ಮಾದರಿ ಆಗಲಾರವು. ಈ ಹುಸಿ ಕಲ್ಪನೆಯಿಂದ ಎಲ್ಲರೂ ಹೊರಬರಬೇಕು. ಶ್ರಮ ದಿಂದ ಸದೃಢ ರಾಷ್ಟ್ರ ಕಟ್ಟುತ್ತಿರುವ ಕರ್ನಾಟಕವೇ ಭಾರತಕ್ಕೆ ಮಾದರಿ ಎಂದಿದ್ದಾರೆ. ಕುಳಿತು ತಿನ್ನುವವನಿಗೆ ಮೃಷ್ಟಾನ್ನ ಕೊಟ್ಟು, ದುಡಿಯುವ ಮಗನಿಗೆ ಬರೆ ಎಳೆದರು ಎಂಬಂತಿದೆ ದೇಶದಲ್ಲಿ ಕನ್ನಡಿಗರ ಸ್ಥಿತಿ. ಇದು ಬದಲಾಗಬೇಕು. ನ್ಯಾಯಕ್ಕಾಗಿ ಧ್ವನಿ ಎತ್ತಿರುವ ನಾಡಿನ ಪ್ರಜ್ಞಾವಂತರಿಗೆ ನನ್ನ ಧನ್ಯವಾದಗಳು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ
BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.