Bomb threat message: ಕೇಂದ್ರೀಯ ವಿದ್ಯಾಲಯಕ್ಕೆ ಇ-ಮೇಲ್‌ ಮೂಲಕ ಬಾಂಬ್‌ ಬೆದರಿಕೆ ಸಂದೇಶ!


Team Udayavani, Feb 5, 2024, 11:32 AM IST

Bomb threat message: ಕೇಂದ್ರೀಯ ವಿದ್ಯಾಲಯಕ್ಕೆ ಇ-ಮೇಲ್‌ ಮೂಲಕ ಬಾಂಬ್‌ ಬೆದರಿಕೆ ಸಂದೇಶ!

ಬೆಂಗಳೂರು: ಯಶವಂತಪುರದ ಕೇಂದ್ರಿಯ ವಿದ್ಯಾ ಲಯ ಭಾರತೀಯ ವಿದ್ಯಾ ಸಂಸ್ಥೆ (ಐಐಎಸ್‌ಸಿ)ಯ ಇ-ಮೇಲ್‌ ವಿಳಾಸಕ್ಕೆ ಕಿಡಿಗೇಡಿಗಳು ಬಾಂಬ್‌ ಇರಿಸಿರುವುದಾಗಿ ಇ-ಮೇಲ್‌ ಮೂಲಕ ಬೆದರಿಕೆ ಸಂದೇಶ ಕಳುಹಿಸಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.

ಕಳೆದ ವರ್ಷ ಡಿಸೆಂಬರ್‌ ತಿಂಗಳಲ್ಲಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗದ 70ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಸಂದೇಶ ಬಂದಿತ್ತು. ಈಗ ಅಂತಹದ್ದೇ ಮತ್ತೂಂದು ಪ್ರಕರಣ ವರದಿಯಾಗಿದೆ. ಜ.28ರಂದು ಬೆಳಗ್ಗೆ 7.37ಕ್ಕೆ ಕೇಂದ್ರೀಯ ವಿದ್ಯಾಲಯದ ಅಧಿಕೃತ ಇ-ಮೇಲ್‌ principal.kviiscgmail.com ಗೆ sahukarisrinivasa rao65gmail.com ಎಂಬ ಇ-ಮೇಲ್‌ನಿಂದ ʼin your school one bomb is their it will blast tomorrow morning 10.20′ ಎಂಬ ಬೆದರಿಕೆ ಸಂದೇಶ ಬಂದಿದೆ.

ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲ ರಾದ ಎನ್‌.ವೈ.ಅಮೃತಬಾಲ ಎಂದಿನಂತೆ ಇ- ಮೇಲ್‌ ಪರಿಶೀಲನೆ ವೇಳೆ ಬೆದರಿಕೆ ಇ-ಮೇಲ್‌ ಸಂದೇಶ ನೋಡಿದ್ದಾರೆ. ಕೂಡಲೇ ಯಶವಂತಪುರ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಅಂದು ಭಾನುವಾರ ರಜೆ ಇದ್ದ ಕಾರಣ ಶಾಲೆಗೆ ಮಕ್ಕಳು ಬಂದಿರಲಿಲ್ಲ. ತಕ್ಷಣ ಬಾಂಬ್‌ ನಿಷ್ಕ್ರಿಯ ದಳ, ಶ್ವಾನ ದಳ ಹಾಗೂ ಪೊಲೀಸರು, ಕೇಂದ್ರೀಯ ವಿದ್ಯಾಲಯಕ್ಕೆ ತೆರಳಿ ತಪಾಸಣೆ ನಡೆಸಿದ್ದಾರೆ. ಆದರೆ, ಎಲ್ಲಿಯೂ ಬಾಂಬ್‌ ಅಥವಾ ಸ್ಫೋಟಕ ವಸ್ತುಗಳು ಪತ್ತೆ ಯಾಗಿಲ್ಲ. ಹೀಗಾಗಿ ಇದೊಂದು ಹುಸಿ ಬಾಂಬ್‌ ಬೆದರಿಕೆ ಇ-ಮೇಲ್‌ ಎಂಬುದು ಖಚಿತವಾಗಿದೆ . ಈ ಸಂಬಂಧ ಪ್ರಕರಣ ದಾಖಲಿಸಿ ಕೊಂಡಿರುವ ಪೊಲೀಸರು,ಇ-ಮೇಲ್‌ ವಿಳಾಸದ ಜಾಡು ಹಿಡಿಯಲು ಸೈಬರ್‌ ಕ್ರೈಂ ತಜ್ಞರ ಸಹಕಾರ ಕೋರಿದ್ದಾರೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಕಳೆದ ವರ್ಷ ಬೆಂಗಳೂರು ನಗರ ಮತ್ತು ಗ್ರಾಮಾಂತರ ಭಾಗದ 70ಕ್ಕೂ ಹೆಚ್ಚು ಶಾಲೆಗಳಿಗೆ ಬೆದರಿಕೆ ಇ-ಮೇಲ್‌ ಸಂದೇಶ ಬಂದಿತ್ತು. ಈ ವೇಳೆ ತನಿಖೆ ಕೈಗೊಂಡ ಪೊಲೀಸರಿಗೆ ಕಿಡಿಗೇಡಿಗಳು ವಿಪಿಎನ್‌ ನೆಟ್‌ ವರ್ಕ್‌ ಬಳಸಿ ಸಂದೇಶ ಕಳುಹಿಸಿರುವುದು ಪತ್ತೆಯಾಗಿತ್ತು.

 

ಟಾಪ್ ನ್ಯೂಸ್

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.