Oath: ಸಂಸದ ಸಂಜಯ್ ಸಿಂಗ್ ಪ್ರಮಾಣ ವಚನ ಸ್ವೀಕಾರಕ್ಕೆ ರಾಜ್ಯಸಭಾ ಅಧ್ಯಕ್ಷರಿಂದ ತಡೆ
Team Udayavani, Feb 5, 2024, 1:42 PM IST
ನವದೆಹಲಿ: ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿರುವ ಆಮ್ ಆದ್ಮಿ ಪಕ್ಷದ (ಎಎಪಿ) ಮುಖಂಡ ಸಂಜಯ್ ಸಿಂಗ್ ಭಾರೀ ಮುಖಭಂಗ ಅನುಭವಿಸಿದ್ದಾರೆ. ಆಪ್ ನಾಯಕ ಸೋಮವಾರ ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಲು ಸಾಧ್ಯವಾಗಲಿಲ್ಲ. ಸಿಂಗ್ ಅವರಿಗೆ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಅವರು ಅವಕಾಶ ನೀಡಲು ನಿರಾಕರಿಸಿರುವುದು ಇದಕ್ಕೆ ಕಾರಣ ಎನ್ನಲಾಗಿದೆ.
ಸಂಜಯ್ ಸಿಂಗ್ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲು ರಾಜ್ಯಸಭಾ ಅಧ್ಯಕ್ಷರು ನಿರಾಕರಿಸಿದ್ದಾರೆ. ಇದರಿಂದಾಗಿ ಇಂದು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ. ಈ ವಿಷಯವು ಪ್ರಸ್ತುತ ವಿಶೇಷಾಧಿಕಾರ ಸಮಿತಿಯಲ್ಲಿದೆ ಎಂದು ಅಧ್ಯಕ್ಷರು ಹೇಳಿದ್ದಾರೆ.
ನ್ಯಾಯಾಲಯದಿಂದ ಅನುಮತಿ ಸಿಕ್ಕಿತ್ತು:
ಫೆಬ್ರವರಿ 5 ರಂದು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಲು ಸಂಜಯ್ ಸಿಂಗ್ ಅವರಿಗೆ ಫೆಬ್ರವರಿ 3 ರಂದು ರೂಸ್ ಅವೆನ್ಯೂ ಕೋರ್ಟ್ ಅನುಮತಿ ನೀಡಿತ್ತು ಈ ನಿಟ್ಟಿನಲ್ಲಿ ಆಪ್ ನಾಯಕನನ್ನು ಬೆಳಗ್ಗೆ 10 ಗಂಟೆಯೊಳಗೆ ಸಂಸತ್ತಿಗೆ ಕರೆದೊಯ್ಯುವಂತೆ ಜೈಲು ಅಧಿಕಾರಿಗಳಿಗೆ ನ್ಯಾಯಾಲಯ ಆದೇಶಿಸಿತ್ತು.
ಸಂಜಯ್ ಸಿಂಗ್ ಅವರು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಲು ಮತ್ತು ಪ್ರಸ್ತುತ ಸಂಸತ್ತಿನ ಅಧಿವೇಶನದಲ್ಲಿ ಭಾಗವಹಿಸಲು ಫೆಬ್ರವರಿ 4 ರಿಂದ 10 ರವರೆಗೆ ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆಪ್ ನಾಯಕನ ಅರ್ಜಿಯ ಮೇಲೆ ವಿಶೇಷ ನ್ಯಾಯಾಧೀಶ ಎಂಕೆ ನಾಗ್ಪಾಲ್ ಅವರು ಜಾರಿ ನಿರ್ದೇಶನಾಲಯಕ್ಕೆ (ಇಡಿ) ನೋಟಿಸ್ ಜಾರಿ ಮಾಡಿದ್ದು, ಫೆಬ್ರವರಿ 3 ರೊಳಗೆ ಉತ್ತರವನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ. ಈಗ ನಿಷ್ಕ್ರಿಯಗೊಂಡಿರುವ ದೆಹಲಿ ಅಬಕಾರಿ ನೀತಿ 2021-22ರ ರಚನೆ ಮತ್ತು ಅನುಷ್ಠಾನದಲ್ಲಿ ಆಪ್ ನಾಯಕ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಇಡಿ ಆರೋಪಿಸಿದೆ.
ಇದನ್ನೂ ಓದಿ: Shocking… ಬುರ್ಖಾ ಧರಿಸಿ ತಂಗಿಯ ಮದುವೆಗೆಂದು ಮಾಡಿಟ್ಟ ಆಭರಣಗಳನ್ನೇ ದೋಚಿದ ಅಕ್ಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.