Speaker ಯು.ಟಿ. ಖಾದರ್ ಕೋಲದಲ್ಲಿ ಭಾಗಿ: ಮುಸ್ಲಿಂ ಮುಖಂಡರಿಂದ ಆಕ್ರೋಶ
ಕೊರಗಜ್ಜನ ಭಕ್ತ ಖಾದರ್ ನನ್ನು ಮುಸ್ಲಿಮರು ವೇದಿಕೆಗೆ ನಾಯಕನಾಗಿ ಹತ್ತಿಸುವುದು ತರವಲ್ಲ
Team Udayavani, Feb 5, 2024, 8:19 PM IST
ಮಂಗಳೂರು: ವಿಧಾನ ಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ಕೋಲದಲ್ಲಿ ಭಾಗಿಯಾಗಿ ಪ್ರಸಾದ ಸ್ವೀಕರಿಸಿರುವ ವಿಚಾರ ಕರಾವಳಿಯಲ್ಲಿ ಚರ್ಚೆಗೆ ಗುರಿಯಾಗಿದ್ದು, ಮುಸ್ಲಿಂ ಧಾರ್ಮಿಕ ಮುಖಂಡರೊಬ್ಬರು ಬಹಿರಂಗವಾಗಿ ಆಕ್ರೋಶ ಹೊರ ಹಾಕಿದ್ದಾರೆ.
ಕಾರ್ಣಿಕದ ಬಂಟ್ವಾಳ ಪಣೋಲಿಬೈಲು ಕಲ್ಲುರ್ಟಿ ಕ್ಷೇತ್ರದಲ್ಲಿ ಸ್ಪೀಕರ್ ಯು.ಟಿ.ಖಾದರ್ ಅವರು ಕೋಲ ಸೇವೆಯಲ್ಲಿ ಭಾಗಿಯಾಗಿ ದೈವ ನರ್ತಕರಿಂದ ಪ್ರಸಾದ ಸ್ವೀಕರಿಸಿದ ಬಳಿಕ ಕೆಲವರಿಂದ ಆಕ್ರೋಶ ಮತ್ತು ಟೀಕೆ ವ್ಯಕ್ತವಾಗಿದೆ.
ಮುಸ್ಲಿಂ ಧಾರ್ಮಿಕ ಮುಖಂಡ ಸಾಲೆತ್ತೂರು ಫೈಝಿ ಸಾಮಾಜಿಕ ತಾಣದಲ್ಲಿ ಆಕ್ರೋಶ ಹೊರ ಹಾಕಿದ್ದು, ಕೊರಗಜ್ಜನ ಭಕ್ತ ಯು. ಟಿ. ಖಾದರ್ ನನ್ನು ಮುಸ್ಲಿಮರು ಬರೀ ರಾಜಕಾರಣಿಯಾಗಿ ಕಂಡರೆ ಸಾಕು. ಧಾರ್ಮಿಕ ಮುಂದಾಳುವಾಗಿ ಕಾಣುವುದು, ಉಲಮಾ, ಸಾತ್ವಿಕರು ತುಂಬಿದ ಧಾರ್ಮಿಕ ವೇದಿಕೆಗೆ ಮುಸ್ಲಿಂ ನಾಯಕನಾಗಿ ಹತ್ತಿಸುವುದು ತರವಲ್ಲ. ಅದು ಅವರ ಭೂತಾರಾಧನೆಗೆ ನಾವು ಕೊಡುವ ಅಂಗೀಕಾರವಾದೀತು.
ಖಾದರ್ ಕೊರಗಜ್ಜನಿಗೂ ಕಲ್ಲುರ್ಟಿ, ಪಂಜುರ್ಲಿಗೋ ಆರಾಧಿಸಲಿ, ಪ್ರಸಾದ ಪಡೆಯಲಿ ಅದು ಅವರ ವೈಯಕ್ತಿಕ ಸ್ವಾತಂತ್ರ್ಯ. ಅದು ಭಾರತದಲ್ಲಿ ಎಲ್ಲರಿಗೂ ಇರುವ ಸಾಂವಿಧಾನಿಕ ಸ್ವಾತಂತ್ರ್ಯ. ಅದನ್ನು ತಡೆಯುವ ಹಕ್ಕು ನಮಗಿಲ್ಲ. ಆದರೆ ಧಾರ್ಮಿಕ ನಾಯಕನಾಗಿ ನಾವು ಅಂಗೀಕರಿಸುವುದು ಮಾತ್ರ ಅವರ ಭೂತಾರಾಧನೆಯನ್ನು ನಾವು ಒಪ್ಪಿಕೊಂಡಂತಾಗುತ್ತದೆ. ಉಲಮಾಗಳು ಅವರಿಗೆ ಗೌರವ ಕೊಡುವುದು ಮುಸ್ಲಿಮ್ ಸಮುದಾಯಕ್ಕೆ ಕೆಟ್ಟ ಸಂದೇಶವಾಗಿ ಪರಿಣಮಿಸುತ್ತದೆ ಎಂದು ಬರೆದಿದ್ದಾರೆ.
”ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಯು.ಟಿ.ಖಾದರ್ ಅವರ ಗೆಲುವಿಗಾಗಿ ಪಣೋಲಿ ಬೈಲು ಕ್ಷೇತ್ರದಲ್ಲಿ ಹರಕೆ ಹೊತ್ತ ಸೇವೆ ಕೋಲದಲ್ಲಿ ಸ್ಪೀಕರ್ ಖಾದರ್ ಅವರು ಭಾಗಿಯಾಗಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮುಸ್ಲಿಂ ಮುಖಂಡರು ಟೀಕೆಗಳು ಕೇಳಿ ಬಂದ ಬಳಿಕ ಸ್ಪಷ್ಟನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ನೆಲೆ ಕಳೆದುಕೊಳ್ಳುವ ಆತಂಕದಲ್ಲಿ ಶ್ರೀನಿವಾಸ ಮಲ್ಯರ ಪ್ರತಿಮೆ
Mangaluru; ಹರೇಕಳದಿಂದಲೂ ನಗರಕ್ಕೆ ನೀರು
Uppinangady: ತ್ಯಾಜ್ಯ ಸರಿಯಾಗಿ ವಿಂಗಡಿಸಿ ಕೊಡದಿದ್ದರೆ ಕ್ರಮಕ್ಕೆ ಸದಸ್ಯರ ಸಲಹೆ
Bantwal: ಅಭಿವೃದ್ಧಿ ಕಾರ್ಯಕ್ಕಿಂತಲೂ ಸಮಸ್ಯೆಗಳ ಸರಮಾಲೆ ಪ್ರಸ್ತಾವಿಸಿದ ಸಾರ್ವಜನಿಕರು
Kudremukh: 9 ತಿಂಗಳ ಬಳಿಕ ಕುದುರೆಮುಖ ಕಬ್ಬಿಣ ಕಾರ್ಖಾನೆ ಕಾರ್ಯಾರಂಭ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
ಸಂಸ್ಕೃತ ಕಾಲೇಜಿನ 120ರ ಸಂಭ್ರಮದಲ್ಲಿ ಹಳೆ ವಿದ್ಯಾರ್ಥಿಗಳು ಒಟ್ಟಾಗಲಿ: ವಿ| ಪ್ರಸನ್ನಾಚಾರ್ಯ
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.