State Govt; ಲೋಕಸಭಾ ಚುನಾವಣೆ ಬಳಿಕ ಗ್ಯಾರಂಟಿ ಸ್ಥಗಿತ: ಬಿಎಸ್‌ವೈ
ಅನುತ್ಪಾದಕ ಗ್ಯಾರಂಟಿಗಳಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈಮೀರಿ ಹೋಗಿದೆ
Team Udayavani, Feb 5, 2024, 9:43 PM IST
ಬೆಂಗಳೂರು: ಲೋಕಸಭಾ ಚುನಾವಣೆ ಬಳಿಕ ಗ್ಯಾರಂಟಿ ಯೋಜನೆಗಳನ್ನು ಕೈಬಿಡುವ ಸ್ಪಷ್ಟವಾದ ಉದ್ದೇಶವನ್ನು ರಾಜ್ಯ ಸರಕಾರ ಹೊಂದಿದೆ. ಕೇಂದ್ರದ ಮೇಲೆ ಗೂಬೆ ಕೂರಿಸುವ ಮೂಲಕ ಇದಕ್ಕೊಂದು ತಳಹದಿ ಹಾಕಲು ರಾಜ್ಯ ಸರಕಾರ ಯತ್ನಿಸುತ್ತಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.
ಕೇಂದ್ರ ಸರಕಾರ ಹಾಗೂ ಬಿಜೆಪಿ ನಾಯಕರ ವಿರುದ್ಧ ಸಿಎಂ ಸಿದ್ದರಾಮಯ್ಯ ಮಾಡಿರುವ ಆರೋಪಗಳಿಗೆ ಪತ್ರಿಕಾ ಪ್ರಕಟನೆ ಹೊರಡಿಸಿರುವ ಅವರು, ಅನುತ್ಪಾದಕ ಗ್ಯಾರಂಟಿಗಳಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಸಿದ್ದರಾಮಯ್ಯನವರ ಕೈಮೀರಿ ಹೋಗಿದೆ. ಎಲ್ಲ ರಂಗಗಳಲ್ಲಿ ಸರಕಾರ ವಿಫಲವಾಗಿದೆ. ಗ್ಯಾರಂಟಿ ಯೋಜನೆಗಳು ಲೋಕಸಭೆ ಚುನಾವಣೆಯಲ್ಲಿ ಕೈ ಹಿಡಿಯುವುದಿಲ್ಲ ಎಂಬ ಸತ್ಯದ ಅರಿವಾಗಿದೆ. ಪದೇಪದೆ ಸುಳ್ಳು ಹೇಳಿ ಸತ್ಯವನ್ನು ಮುಚ್ಚಿಡಬಹುದು ಎಂದುಕೊಂಡಿದ್ದಾರೆ. ಸಿದ್ದರಾಮಯ್ಯನವರ ಆರೋಪಗಳಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸದನದಲ್ಲಿ ಸೂಕ್ತ ಉತ್ತರ ನೀಡಿದ್ದಾರೆ ಎಂದು ವಿವರಿಸಿದ್ದಾರೆ.
15ನೇ ಹಣಕಾಸು ಆಯೋಗದ ಶಿಫಾರಸಿನಂತೆ ಎನ್‌ಡಿಎ ಸರಕಾರ ಈಗಾಗಲೇ 1,16,828 ಕೋಟಿ ರೂ. ಬಿಡುಗಡೆ ಮಾಡಿದೆ. 15ನೇ ಹಣಕಾಸು ಆಯೋಗದ ಅವಧಿ 2026ರ ವರೆಗೆ ಇದ್ದು ಒಟ್ಟು 2.5 ಲಕ್ಷ ಕೋಟಿಗೂ ಮೀರಿ ತೆರಿಗೆಯ ಹಂಚಿಕೆ ಬರಲಿದೆ. ಇದು ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಇದ್ದಾಗ 14ನೇ ಹಣಕಾಸಿನ ಶಿಫಾರಸಿಗಿಂತ ಅತ್ಯಧಿಕವಾಗಿದೆ ಎಂದು ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ.
15ನೇ ಹಣಕಾಸು ಆಯೋಗದಲ್ಲಿ ರಾಜ್ಯ ಸರಕಾರದ ಪಾಲು 3.6ಕ್ಕೆ ಇಳಿಯಲು ನೇರವಾಗಿ ಸಿದ್ದರಾಮಯ್ಯ ಸರಕಾರವೇ ಕಾರಣ. ಯಾಕೆಂದರೆ 15ನೇ ಹಣಕಾಸು ವರದಿ ತಯಾರಿಸುವಾಗ ರಾಜ್ಯದಲ್ಲಿ ಸಿದ್ದರಾಮಯ್ಯ ಸರಕಾರ ಅಧಿಕಾರದಲ್ಲಿತ್ತು. ರಾಜ್ಯದ ಆರ್ಥಿಕ ಸ್ಥಿತಿಯನ್ನು ಹಣಕಾಸಿನ ಆಯೋಗಕ್ಕೆ ಮನವರಿಕೆ ಮಾಡಿಕೊಡಲು ವಿಫಲವಾದ್ದರಿಂದ ರಾಜ್ಯಕ್ಕೆ ಹಿನ್ನಡೆಯಾಗಿದೆ. 15ನೇ ಹಣಕಾಸು ಆಯೋಗದಲ್ಲಿ ಕಳೆದ ಮೂರು ವರ್ಷಗಳಲ್ಲಿ ರಾಜ್ಯಕ್ಕೆ ಈಗಾಗಲೇ ರೂ. 13,985 ಕೋಟಿ ರೂ. ಬಿಡುಗಡೆಯಾಗಿದೆ. ಈ ವರ್ಷ ಇನ್ನೂ ಸುಮಾರು ರೂ.3,500 ಕೋಟಿ ಅನುದಾನ ರಾಜ್ಯ ಸರಕಾರಕ್ಕೆ ಬರಲಿದೆ ಎಂದು ತಿಳಿಸಿದ್ದಾರೆ.
ಇಷ್ಟೆಲ್ಲ ಮಾಹಿತಿಗಳನ್ನು ಮುಚ್ಚಿಟ್ಟಿರುವ ಸಿದ್ದರಾಮಯ್ಯನವರು ಅರ್ಧ ಸತ್ಯವನ್ನು ಮಾತ್ರ ಹೇಳಿದ್ದಾರೆ. ಎಲ್ಲೆಲ್ಲಿ ಸಾಧ್ಯವಿದೆಯೋ ಅಲ್ಲಿ ತೆರಿಗೆಗಳನ್ನು ಏರಿಸಿದ್ದಾರೆ. ವಿದ್ಯುತ್, ಸಾರಿಗೆ, ನೋಂದಣಿ ಮತ್ತು ಮುದ್ರಾಂಕ ಹಾಗೂ ಅಬಕಾರಿ ಶುಲ್ಕಗಳನ್ನು ಹೆಚ್ಚಿಸಿದ್ದಾರೆ ಎಂದು ಯಡಿಯೂರಪ್ಪ ಆರೋಪಿಸಿದರು.
ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಿದ್ದಾಗ ರೈತರಿಗೆ ಹಾಲಿನ ಪ್ರೋತ್ಸಾಹಧನ ಘೋಷಿಸಿದ್ದರಲ್ಲದೆ, ನಮ್ಮ ಸರಕಾರ ಅಧಿಕಾರದಲ್ಲಿದ್ದಾಗ 26 ಲಕ್ಷ ಗ್ರಾಮೀಣ ರೈತರಿಂದ ನಿತ್ಯ 80-85 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿತ್ತು. ಈ ಸರಕಾರ 716 ಕೊಟಿ ರೂ. ಹಾಲಿನ ಪ್ರೋತ್ಸಾಹ ಧನ ಉಳಿಸಿಕೊಂಡಿದ್ದು, 10 ಲಕ್ಷ ಲೀಟರ್ ಹಾಲಿನ ಸಂಗ್ರಹ ಕಡಿಮೆಯಾಗಿದೆ. ಇದನ್ನು ಮೊದಲು ಬಿಡುಗಡೆ ಮಾಡಲಿ. ಪ್ರತಿ ಬಾರಿ ತನ್ನ ಹೊಣೆಗಾರಿಕೆ ಮರೆತು ಕೇಂದ್ರವನ್ನು ತೋರಿಸುತ್ತದೆ.
-ಬಿ.ವೈ. ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ವೈಫಲ್ಯವನ್ನು ಮುಚ್ಚಿಟ್ಟುಕೊಳ್ಳಲು ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಿದ್ದಾರೆ. 14 ಬಾರಿ ಬಜೆಟ್ ಮಂಡಿಸಿದ ಸಿದ್ದರಾಮಯ್ಯರು ವಿತ್ತೀಯ ಹೊಣೆಗಾರಿಕೆ ಕಾಯ್ದೆ ಉಲ್ಲಂ ಸಿದೆ. ನಿಗದಿತ ತೆರಿಗೆ ಸಂಗ್ರಹವನ್ನೂ ಮಾಡಿಲ್ಲ. ಬೊಕ್ಕಸ ಖಾಲಿ ಮಾಡಿಕೊಂಡಿದೆ. ಇದಕ್ಕೂ ಕೇಂದ್ರ ಸರಕಾರಕ್ಕೂ ಏನು ಸಂಬಂಧ?
-ಪಿ.ರಾಜೀವ್, ರಾಜ್ಯ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.