Tax Issue; ದೆಹಲಿ ಹೋರಾಟ ಕಾಂಗ್ರೆಸ್‌ನ ರಾಜಕೀಯ ಸ್ಟಂಟ್: ಬೊಮ್ಮಾಯಿ
ರಾಜ್ಯಕ್ಕೆ ತೆರಿಗೆ ಪಾಲು ಕಡಿಮೆಯಾಗಲು ಸಿದ್ದರಾಮಯ್ಯನವರೇ ಕಾರಣ: ಮಾಜಿ ಸಿಎಂ
Team Udayavani, Feb 5, 2024, 9:50 PM IST
ಬೆಂಗಳೂರು: ತೆರಿಗೆ ವಿಚಾರದಲ್ಲಿ ರಾಜ್ಯ ಬಿಜೆಪಿ ನಾಯಕರು ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡಿರುವ ಸಿಎಂ ಸಿದ್ದರಾಮಯ್ಯಗೆ ತಿರುಗೇಟು ನೀಡಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ತಾವು ಮಾಡಿದ ತಪ್ಪು ಮುಚ್ಚಿಟ್ಟುಕೊಳ್ಳಲು ದಿಲ್ಲಿಯಲ್ಲಿ ಪ್ರತಿಭಟನೆ ನಡೆಸುವ ರಾಜಕೀಯ ಸ್ಟಂಟ್ ಪ್ರದರ್ಶನ ಮಾಡುತ್ತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತುರ್ತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, 14ನೇ ಹಣಕಾಸಿಗಿಂತ 15 ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ತೆರಿಗೆ ಪಾಲು ಕಡಿಮೆಯಾಗಿದ್ದರೆ ಅದಕ್ಕೆ ಸಿದ್ದರಾಮಯ್ಯನವರೇ ನೇರ ಕಾರಣ. 15 ನೇ ಹಣಕಾಸು ಆಯೋಗದ ಸಮಿತಿ ಆಕ್ಷೇಪ ಆಲಿಸುವುದಕ್ಕೆ ರಾಜ್ಯಕ್ಕೆ ಬಂದಿದ್ದಾಗ ಸಿದ್ದರಾಮಯ್ಯನವರೇ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಆಗ ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ಆಯೋಗಕ್ಕೆ ಸರಿಯಾಗಿ ಮಾಹಿತಿ ನೀಡದೇ, ಸೂಕ್ತ ಆಕ್ಷೇಪ ಸಲ್ಲಿಸದೇ ಇದ್ದುದರಿಂದ ನಮಗೆ ಸಿಗಬೇಕಿದ್ದ ತೆರಿಗೆ ಪಾಲು ಶೇ.4.7 ನಿಂದ ಶೇ.3.6 ಗೆ ಕಡಿಮೆಯಾಗಿದೆ ಎಂದು ಆರೋಪಿಸಿದರು.
ಬೊಮ್ಮಾಯಿ ತಿರುಗೇಟೇನು ? : ಅಭಿವೃದ್ದಿ ಅನುದಾನ ಯುಪಿಎ ಅವಧಿಯಲ್ಲಿ 60,779 ಕೋಟಿ ರೂ. ಬಂದಿದೆ. ಮೋದಿ ಅವಧಿಯಲ್ಲಿ 2,08,882 ಕೋಟಿ ಬಿಡುಗಡೆಯಾಗಿದೆ. ಇದರ ಅವಧಿ ಇನ್ನೂ ಎರಡು ವರ್ಷ ಇದೆ. 2026 ರ ವರೆಗೆ 2.5 ಲಕ್ಷ ಕೋಟಿ ಮೀರಿ ತೆರಿಗೆ ಹಂಚಿಕೆ ಬರಲಿದೆ. ಇದು ಯುಪಿಎ ಅವಧಿಯ 14 ನೇ ಹಣಕಾಸಿನ ಶಿಫಾರಸ್ಸಿಗಿಂತ 1,51,309 ಕೋಟಿ ರೂ.ಗಳಿಗಿಂತ ಅಧಿಕ ಎಂದು ಬೊಮ್ಮಾಯಿ ಹೇಳಿದರು.
ಫೆ.7 ರಂದು ಸಿದ್ದರಾಮಯ್ಯ ಸರ್ಕಾರದ ವೈಫಲ್ಯ ವಿರೋಧಿಸಿ ಬಿಜೆಪಿ ವತಿಯಿಂದ ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದ ಅವರು, ರಾಜ್ಯ ಸರ್ಕಾರ ಗ್ಯಾರಂಟಿ ಹೆಸರಿನಲ್ಲಿ ಯಾವುದೇ ಅಭಿವೃದ್ದಿ ಕಾರ್ಯಗಳನ್ನು ಮಾಡುತ್ತಿಲ್ಲ. ಇವರು ತಮ್ಮ ಶಾಸಕರಿಗೆ ಅನುದಾನ ಬಿಡುಗಡೆ ಮಾಡಿಲ್ಲ. ಇನ್ನೇನು ಲೋಕಸಭೆ ಚುನಾವಣೆ ಘೋಷಣೆ ಆದರೆ ಈ ವರ್ಷ ಯಾರಿಗೂ ಅನುದಾನ ಬಿಡುಗಡೆ ಮಾಡುವುದಿಲ್ಲ ಎಂದರು.
ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗುತ್ತಿದೆ ಎಂದು ಹೇಳಿಕೊಳ್ಳುತ್ತಿದೆ. ಗ್ಯಾರಂಟಿ ಯೊಜನೆಗಳು ಎಷ್ಟು ಜನರಿಗೆ ತಲುಪಿವೆ ಎಂದು ಶ್ವೇತಪತ್ರ ಹೊರಡಿಸಲಿ ಆಗ್ರಹಿಸಿದರು.
– ಸ್ವಾತಂತ್ರ್ಯ ಬಂದಾಗಿನಿಂದ 2014 ರವರೆಗೆ ರಾಜ್ಯದಲ್ಲಿ ಕೇವಲ 6 ಸಾವಿರ ಕಿ.ಮೀ. ರಾಷ್ಟ್ರೀಯ ಹೆ¨ªಾರಿ ಅಭಿವೃದ್ದಿಯಾಗಿತ್ತು. ಆದರೆ, ಮೋದಿ ಅವಧಿಯಲ್ಲಿ 2014-24 ರ ವರೆಗೆ 13,500 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿಯಾಗಿದೆ. ಕಿಸಾನ ಸಮ್ಮಾನ ಯೋಜನೆಯಲ್ಲಿ ರಾಜ್ಯದ 60 ಲಕ್ಷಕ್ಕೂ ಹೆಚ್ಚು ರೈತರಿಗೆ ಅನುಕೂಲವಾಗಿದೆ. ರೈಲ್ವೆ ಯೋಜನೆಗಳಿಗೆ ಯುಪಿಎ ಅವಧಿಯಲ್ಲಿ 835 ಕೋಟಿ ಬಂದಿದ್ದು. ಎನ್ ಡಿಎ ಅವಧಿಯಲ್ಲಿ 11,000 ಕೋಟಿ ರೂ. ಬಂದಿದೆ.
– 2023-24ನೇ ಬಜೆಟ್ ನಲ್ಲಿ ರಾಜ್ಯಕ್ಕೆ ರೈಲ್ವೆಗೆ 7524 ಕೋಟಿ ರೂ. ಹಂಚಿಕೆಯಾಗಿದೆ. ರೈಲ್ವೆ ವಿದ್ಯುದೀಕರಣಕ್ಕೆ 1947 ರಿಂದ 2014 ರವರೆಗೆ ರಾಜ್ಯದಲ್ಲಿ ಕೇವಲ 16 ಕಿ.ಮೀ ಅಭಿವೃದ್ಧಿ ಆಗಿದ್ದು, ಎನ್ ಡಿಎ ಅವಧಿಯಲ್ಲಿ 3265 ಕಿ.ಮೀ ರಾಜ್ಯದಲ್ಲಿ ರೈಲ್ವೆ ವಿದ್ಯುದೀಕರಣವಾಗಿದೆ. ಕೊರೊನಾ ಸಂದರ್ಭದಲ್ಲಿ ರಾಜ್ಯದಲ್ಲಿ 10 ಕೋಟಿ ಕೊರೊನಾ ಉಚಿತ ಲಸಿಕೆ ನೀಡಿದ್ದಾರೆ.
– ಕೇಂದ್ರ ಸರ್ಕಾರ ಐದು ಕೆಜಿ ಅಕ್ಕಿಯನ್ನು ಸಂಪೂರ್ಣ ಉಚಿತವಾಗಿ ನೀಡುತ್ತಿದ್ದು, ಅದೆಲ್ಲವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳದೆ ಮರೆಮಾಚುತ್ತಿದ್ದಾರೆ
– ಸೆಸ್ ಹಾಗೂ ಸರ್ಚಾಜ್ ಆರಂಭವಾಗಿರುವುದು ಎನ್ ಡಿಎ ಅವಧಿಯಲ್ಲಿ ಅಲ್ಲ. ಸ್ವಾತಂತ್ರ್ಯ ಬಂದಾಗಿನಿಂದಲೂ ಇದೆ. ಯುಪಿಎ ಅವಧಿಯಲ್ಲಿ ಯಾಕೆ ಅದನ್ನು ತೆಗೆದು ಹಾಕಲಿಲ್ಲ ?
– ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಬಜೆಟ್ ನಲ್ಲಿ 5300 ಕೋಟಿ ರೂ. ಮೀಸಲಿಟಿxದೆ. ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಬೇಕೆಂದರೆ ರಾಜ್ಯ ಸರ್ಕಾರ ಶೇ 50% ಖರ್ಚು ಮಾಡಬೇಕು. ಕೇವಲ ಪತ್ರ ಬರೆಯುವುದರಿಂದ ಮಾತ್ರ ಕೆಲಸ ಆಗುವುದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.