Vamanjoor; ಹಂತಕ ಪ್ರವೀಣ್‌ನಿಂದ ರಕ್ಷಣೆಗೆ ಮತ್ತೆ ಕುಟುಂಬಸ್ಥರಿಂದ ಪೊಲೀಸರಿಗೆ ಮೊರೆ
ವಾಮಂಜೂರಿನ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣ
Team Udayavani, Feb 6, 2024, 7:00 AM IST
ಮಂಗಳೂರು: ವಾಮಂಜೂರಿನಲ್ಲಿ 1994 ರಲ್ಲಿ ನಾಲ್ವರು ಸಂಬಂಧಿಕರನ್ನೇ ಹತ್ಯೆ ಮಾಡಿ ಶಿಕ್ಷೆ ಅನುಭವಿಸಿ ಜೈಲಿನಿಂದ ಬಿಡುಗಡೆಗೊಂಡಿರುವ ಪ್ರವೀಣ್ ಕುಮಾರ್(60)ನಿಂದ ಜೀವಬೆದರಿಕೆ ಇರುವ ಹಿನ್ನೆಲೆಯಲ್ಲಿ ರಕ್ಷಣೆ ಒದಗಿಸಬೇಕು ಎಂದು ಆತನ ಕುಟುಂಬಸ್ಥರು ಮತ್ತೊಮ್ಮೆ ಪೊಲೀಸರು ಹಾಗೂ ಸರಕಾರದ ಮೊರೆ ಹೋಗಿದ್ದಾರೆ.
ಕಳೆದ ಮೇ ತಿಂಗಳಿನಲ್ಲಿ ಪ್ರವೀಣ್‌ನನ್ನು ಸನ್ನಡತೆಯ ಕಾರಣ ನೀಡಿ ಬಿಡುಗಡೆ ಮಾಡಿರುವ ಮಾಹಿತಿ ಬಂದಿತ್ತು. ಬಳಿಕ ನ.7ರಂದು ರಾತ್ರಿ ಆತ ತಮ್ಮನಿಗೆ ಕರೆ ಮಾಡಿ ಜೀವಬೆದರಿಕೆ ಹಾಕಿದ್ದ. ಹಾಗಾಗಿ ನಾವು ಜೀವಭಯದಿಂದ ಇದ್ದೇವೆ. ಪೊಲೀಸರು ಆತನ ಚಲನವಲನಗಳನ್ನು ನಿತ್ಯವೂ ಗಮನಿಸಬೇಕು. ದ.ಕ ಜಿಲ್ಲೆಗೆ ಬರದಂತೆ ಗಡೀಪಾರು ಮಾಡಬೇಕು ಎಂದು ಕುಟುಂಬಸ್ಥರು ಮಂಗ ಳೂರು ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ.
ಪೊಲೀಸರಿಂದ ಸ್ಪಂದನೆ ಸಿಕ್ಕಿಲ್ಲ
ಪ್ರವೀಣ ಬಿಡುಗಡೆಯಾಗಲಿ ದ್ದಾನೆ ಎಂಬ ಬಗ್ಗೆ ಮಾಹಿತಿ ಸಿಕ್ಕಿದ ಕೂಡಲೇ 2022ರಲ್ಲಿ ಪೊಲೀಸ್ ಆಯುಕ್ತರು, ಗೃಹಸಚಿವರು, ರಾಜ್ಯಪಾಲರಿಗೆ ಮನವಿ ಮಾಡಿ ಬಿಡುಗಡೆ ಮಾಡದಂತೆ ಕೇಳಿಕೊಂಡಿದ್ದೆವು. ಆತನ ಪತ್ನಿಯೂ ಬಿಡುಗಡೆ ಮಾಡದಂತೆ ಮನವಿ ಮಾಡಿದ್ದಳು. ಆದರೆ ಪ್ರಯೋಜನ ವಾಗಲಿಲ್ಲ. ಅನಂತರ ಬಿಡುಗಡೆಯ ಸುದ್ದಿ ತಿಳಿದ ಕೂಡಲೇ ಮತ್ತೂಮ್ಮೆ ರಕ್ಷಣೆಗಾಗಿ ಮನವಿ ಮಾಡಿದ್ದೆವು ಎಂದು ಹೇಳಿದರು.
ಪ್ರವೀಣ್ ತನ್ನ ತಮ್ಮನಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದಾಗಲೂ ಪೊಲೀಸರಿಗೆ ತಿಳಿಸಿದ್ದೇವೆ. ಆದರೆ ಪೊಲೀಸರಿಂದ ಸ್ಪಂದನೆ ಸಿಕ್ಕಿಲ್ಲ. ಕುಟುಂಬಸ್ಥರ ಮನೆಗೆ ಪೊಲೀಸರು ಇದುವರೆಗೂ ಭೇಟಿ ನೀಡಿಲ್ಲ. ತನ್ನ ಸಂಬಂಧಿಕರನ್ನೇ ಕೊಲೆ ಮಾಡಿದ್ದ ಆತ ಯಾವುದೇ ಕೃತ್ಯ ಮಾಡಲು ಹಿಂಜರಿಯುವವನಲ್ಲ. ದ್ವೇಷ ಸಾಧಿಸುವ ಆತಂಕವೂ ಇದೆ. ಕುಟುಂಬದಲ್ಲಿ ಹಲವರು ಹಿರಿಯ ನಾಗರಿಕರಿದ್ದಾರೆ. ಹಾಗಾಗಿ ಪೊಲೀಸರು ನಮಗೆ ರಕ್ಷಣೆ ನೀಡ ಬೇಕು ಎಂದು ಕುಟುಂಬಸ್ಥರು ಒತ್ತಾಯಿಸಿದ್ದಾರೆ.
ಮಾಹಿತಿಗೆ ಒತ್ತಾಯ
ಪ್ರವೀಣ ಈಗ ಬೆಳಗಾವಿ ಹಿಂಡಲಗಾ ಜೈಲಿನ ಬಳಿಯಲ್ಲೇ ಟೈಲರ್ ಅಂಗಡಿ ನಡೆಸುತ್ತಿದ್ದಾನೆಂಬ ಮಾಹಿತಿ ಇದೆ. ಈತನನ್ನು ಓರ್ವ ಉತ್ತಮ ವ್ಯಕ್ತಿಯಂತೆ ಬಿಂಬಿಸುವು ದರಿಂದ ಸಮಾಜಕ್ಕೂ ಕೆಟ್ಟ ಸಂದೇಶ ಹೋಗುತ್ತಿದೆ. ಸಂಬಂಧಿಸಿದವರು ಈ ಬಗ್ಗೆ ಗಮನ ಹರಿಸಬೇಕು ಎಂದು ಕುಟುಂಬಸ್ಥರು ಆಗ್ರಹಿಸಿದ್ದಾರೆ.
ನಾಲ್ವರನ್ನು ಹತ್ಯೆಗೈದಿದ್ದ
ಮೂಲತಃ ಉಪ್ಪಿನಂಗಡಿಯವ ನಾಗಿದ್ದರೂ ಹೆಚ್ಚಾಗಿ ವಾಮಂಜೂರಿ ನಲ್ಲಿ ತನ್ನ ಅತ್ತೆಯ ಮನೆಯಲ್ಲೇ ವಾಸವಾಗಿದ್ದ. ಮಂಗಳೂರಿನಲ್ಲಿ ಟೈಲರ್ ವೃತ್ತಿ ಮಾಡುತ್ತಿದ್ದ. 1994ರ ಫೆ.23ರ ರಾತ್ರಿ ವಾಮಂಜೂರಿನ ಮನೆಗೆ ಬಂದಿದ್ದ. ಆಗ ಕಳ್ಳರ ಹಾವಳಿ ಹೆಚ್ಚಾಗಿದ್ದ ಕಾಲ. ಮನೆಯಲ್ಲಿದ್ದ ಆತ ತಮ್ಮ ರಕ್ಷಣೆಗೆ ಇದ್ದಾನೆಂದು ಮನೆಯವರು ಭಾವಿಸಿದ್ದರು. ಆದರೆ ಕುಡಿತ, ಜೂಜಿನ ಚಟ ಹೊಂದಿದ್ದ ಪ್ರವೀಣ್ ಮನೆಯಲ್ಲಿದ್ದ ನಾಲ್ವರು ತನ್ನ ಸಂಬಂಧಿಕರನ್ನೇ ಕತ್ತಿಯಿಂದ ಹೊಡೆದು ಕೊಲೆ ಮಾಡಿ ಚಿನ್ನ, ಹಣ ದೋಚಿ ಪರಾರಿಯಾಗಿದ್ದ. ಪೊಲೀಸರು ಒಮ್ಮೆ ಬಂಧಿಸಿದ ಬಳಿಕವೂ ತಪ್ಪಿಸಿಕೊಂಡಿದ್ದ. ಮತ್ತೂಮ್ಮೆ ಬಂಧಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
Mangaluru: ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.