Charles III: ಬ್ರಿಟನ್ ರಾಜ ಚಾರ್ಲ್ಸ್ -3 ಗೆ ಕ್ಯಾನ್ಸರ್… ಅರಮನೆಯಲ್ಲೇ ಚಿಕಿತ್ಸೆ
Team Udayavani, Feb 6, 2024, 8:41 AM IST
ಲಂಡನ್ : ಬ್ರಿಟನ್ ರಾಜ ಚಾರ್ಲ್ಸ್ III ಅವರಿಗೆ ಕ್ಯಾನ್ಸರ್ ಇರುವುದು ದೃಢಪಟ್ಟಿದೆ. ಬಕಿಂಗ್ಹ್ಯಾಮ್ ಅರಮನೆ ಹೊರಡಿಸಿದ ಹೇಳಿಕೆಯಲ್ಲಿ ಈ ಮಾಹಿತಿ ನೀಡಲಾಗಿದೆ.
75 ವರ್ಷದ ಕಿಂಗ್ ಚಾರ್ಲ್ಸ್ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸಿದ ವೇಳೆ ಕ್ಯಾನ್ಸರ್ ರೋಗ ಲಕ್ಷಣ ಇರುವುದು ಕಂಡುಬಂದಿದೆ ಎಂದು ಬಕಿಂಗ್ಹ್ಯಾಮ್ ಅರಮನೆಯಿಂದ ಅಧಿಕೃತ ಮಾಹಿತಿ ಹೊರಬಿದ್ದಿದೆ.
ಆದರೆ ಕಿಂಗ್ ಚಾರ್ಲ್ಸ್‌ಗೆ ಯಾವ ರೀತಿಯ ಕ್ಯಾನ್ಸರ್ ಇದೆ ಮತ್ತು ದೇಹದ ಯಾವ ಭಾಗದಲ್ಲಿ ರೋಗ ಲಕ್ಷಣಗಳು ಕಾಣಿಸಿ ಕೊಂಡಿವೆ ಎಂಬುದು ಮಾತ್ರ ಹೇಳಿಕೆಯಲ್ಲಿ ಉಲ್ಲೇಖಿಸಲಾಗಿಲ್ಲ.
ಕಿಂಗ್ ಚಾರ್ಲ್ಸ್ ಗೆ ಸೋಮವಾರದಿಂದಲೇ ಚಿಕಿತ್ಸೆ ನೀಡಲು ವೈದ್ಯರು ತಯಾರಿ ನಡೆಸಿದ್ದು ಅಲ್ಲದೆ ಅರಮನೆಯಲ್ಲೇ ಚಿಕಿತ್ಸೆ ನೀಡಲು ವೈದ್ಯರ ತಂಡ ಎಲ್ಲ ರೀತಿಯ ವ್ಯವಸ್ಥೆಯನ್ನು ಮಾಡಿಕೊಂಡಿದೆ ಎಂದು ಹೇಳಲಾಗಿದೆ.
ರಾಜಮನೆತನದ ವಕ್ತಾರರು ಆಗಿರುವ ಕಿಂಗ್ ಚಾರ್ಲ್ಸ್ ಸಂಪೂರ್ಣವಾಗಿ ಸಕಾರಾತ್ಮಕವಾಗಿದ್ದಾರೆ ಮತ್ತು ಶೀಘ್ರದಲ್ಲೇ ತಮ್ಮ ರಾಜಮನೆತನವನ್ನು ಸೇರಿಕೊಳ್ಳಲಿದ್ದಾರೆ ಎಂದು ಹೇಳಲಾಗಿದ್ದು. ಆದರೆ, ಅವರ ಅನಾರೋಗ್ಯದಿಂದ ಚೇತರಿಸಿಕೊಳ್ಳಲು ಎಷ್ಟು ಸಮಯ ತೆಗೆದುಕೊಳ್ಳುತ್ತದೆ ಎಂಬ ಬಗ್ಗೆ ಯಾವುದೇ ಮಾಹಿತಿಯನ್ನು ಬಹಿರಂಗಪಡಿಸಲಾಗಿಲ್ಲ.
ಸಾರ್ವಜನಿಕ ಕಾರ್ಯಕ್ರಮಗಳಿಂದ ದೂರವಿರಲು ಸಲಹೆ
ನಿಯಮಿತ ಚಿಕಿತ್ಸೆ ಪ್ರಾರಂಭವಾದ ನಂತರ ಸೋಮವಾರ ನೀಡಿದ ಹೇಳಿಕೆಯ ಪ್ರಕಾರ, ಸಾರ್ವಜನಿಕ ಕಾರ್ಯಕ್ರಮಗಳಿಂದ ದೂರವಿರಲು ವೈದ್ಯರು ಕಿಂಗ್ ಚಾರ್ಲ್ಸ್‌ಗೆ ಸಲಹೆ ನೀಡಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ, ಅವರ ಸ್ಥಾನದಲ್ಲಿ ಕುಟುಂಬದ ಇತರ ಹಿರಿಯ ಸದಸ್ಯರು ಸೇರಲಿದ್ದಾರೆ. ಆದಾಗ್ಯೂ, ಈ ಸಮಯದಲ್ಲಿ ಅವರು ದಾಖಲೆಗಳಿಗೆ ಸಹಿ ಹಾಕುವುದು ಮತ್ತು ಅರಮನೆಯೊಳಗೆ ಸಣ್ಣ ಖಾಸಗಿ ಸಭೆಗಳನ್ನು ನಡೆಸುವುದು ಸೇರಿದಂತೆ ರಾಜ್ಯ ವ್ಯವಹಾರವನ್ನು ಮುಂದುವರೆಸುತ್ತಾರೆ ಎಂದು ಹೇಳಲಾಗಿದೆ.
Wishing His Majesty a full and speedy recovery.
I have no doubt he’ll be back to full strength in no time and I know the whole country will be wishing him well. https://t.co/W4qe806gmv
— Rishi Sunak (@RishiSunak) February 5, 2024
ಬ್ರಿಟನ್ ಪ್ರಧಾನಿ ಟ್ವೀಟ್
ಕಿಂಗ್ ಚಾರ್ಲ್ಸ್ ಅವರ ಆರೋಗ್ಯ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಬ್ರಿಟಿಷ್ ಪ್ರಧಾನಿ ರಿಷಿ ಸುನಕ್ ಅವರು ಕಿಂಗ್ ಚಾರ್ಲ್ಸ್ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದರು. ಬ್ರಿಟನ್ ರಾಜ ಶೀಘ್ರದಲ್ಲೇ ಗುಣಮುಖರಾಗುತ್ತಾರೆ ಎಂಬ ಸಂಪೂರ್ಣ ವಿಶ್ವಾಸವಿದೆ. ರಾಜ ಚಾರ್ಲ್ಸ್ ಶೀಘ್ರ ಗುಣಮುಖರಾಗಲಿ ಎಂದು ಇಡೀ ದೇಶ ಪ್ರಾರ್ಥಿಸುತ್ತಿದೆ ಎಂದು ಸುನಕ್ ಹೇಳಿದ್ದಾರೆ. ಬ್ರಿಟನ್‌ನ ವಿರೋಧ ಪಕ್ಷವಾದ ಲೇಬರ್ ಪಾರ್ಟಿ ಕೂಡ ರಾಜನಿಗೆ ಉತ್ತಮ ಆರೋಗ್ಯವನ್ನು ಬಯಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!
Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.