Santhosh Patil Case; ಸಿದ್ದರಾಮಯ್ಯ ಸೇರಿ 4 ಕಾಂಗ್ರೆಸ್ ನಾಯಕರಿಗೆ ದಂಡ ವಿಧಿಸಿದ ಹೈಕೋರ್ಟ್
ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚನೆ
Team Udayavani, Feb 6, 2024, 12:02 PM IST
ಬೆಂಗಳೂರು: ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಆಗ ಸಚಿವರಾಗಿದ್ದ ಕೆ.ಎಸ್ ಈಶ್ವರಪ್ಪ ರಾಜಿನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ಬಿಸಿ ಇದೀಗ ಪಕ್ಷಕ್ಕೆ ತಟ್ಟಿದೆ.
ಆಗ ವಿಪಕ್ಷ ನಾಯಕರಾಗಿದ್ದ ಈಗಿನ ಸಿಎಂ ಸಿದ್ದರಾಮಯ್ಯ, ರಾಮಲಿಂಗ ರೆಡ್ಡಿ, ಎಂ.ಬಿ ಪಾಟೀಲ್, ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲ ಅವರಿಗೆ ಹೈಕೋರ್ಟ್ ತಲಾ ಹತ್ತು ಸಾವಿರ ದಂಡ ವಿಧಿಸಿದೆ.
ಪ್ರಕರಣವೇನು?
ಬೊಮ್ಮಾಯಿ ನೇತೃತ್ವದ ಬಿಜೆಪಿ ಅಧಿಕಾರದಲ್ಲಿದ್ದ ಸಮಯದಲ್ಲಿ ಉಡುಪಿಯಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಶರಣಾಗಿದ್ದ. ಇದರಲ್ಲಿ ಆಗಿನ ಸಚಿವ ಕೆ.ಎಸ್ ಈಶ್ವರಪ್ಪ ಹೆಸರು ಕೇಳಿಬಂದಿತ್ತು. ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿತ್ತು. ಈ ವೇಳೆ ಪೊಲೀಸರು ರಸ್ತೆ ತಡೆ ನಡೆಸಿ ಸಾರ್ವಜನಿಕರಿಗೆ ತೊಂದರೆ ಕೊಟ್ಟಿದ್ದು, ಕಾನೂನು ಸುವ್ಯಸ್ಥೆಗೆ ಭಂಗ ಉಂಟು ಮಾಡಿದ್ದು, ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದು ಇತ್ಯಾದಿ ಆರೋಪಗಳಡಿಯಲ್ಲಿ ಪ್ರಕರಣ ದಾಖಲಿಸಿದ್ದರು.
ಈ ಪ್ರಕರಣ ರದ್ದು ಕೋರಿ ಸಿದ್ದರಾಮಯ್ಯ, ರಾಮಲಿಂಗ ರೆಡ್ಡಿ, ಎಂ.ಬಿ ಪಾಟೀಲ್, ಸುರ್ಜೆವಾಲ ಅವರು ಹೈಕೋರ್ಟ್ ಮೊರೆ ಹೋಗಿದ್ದರು.
ಮಂಗಳವಾರ ಇದರ ವಿಚಾರಣೆ ನಡೆಸಿದ ನ್ಯಾ. ಕೃಷ್ಣದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠವು ಅರ್ಜಿಗಳನ್ನು ವಜಾಗೊಳಿಸಿದೆ. ಅಲ್ಲದೆ ಸಂಬಂಧಪಡದ ಪೊಲೀಸ್ ಅಧಿಕಾರಿಯನ್ನು ಪ್ರತಿವಾದಿಯನ್ನಾಗಿ ಮಾಡಿದ್ದಕ್ಕೆ ಎಲ್ಲರಿಗೂ ತಲಾ 10 ಸಾವಿರ ರೂ. ದಂಡ ವಿಧಿಸಿದೆ.
ಮಾ.6ರಂದು ಜನಪ್ರತಿನಿಧಿಗಳ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯನವರಿಗೆ ಹೈಕೋರ್ಟ್ ಸೂಚಿಸಿದೆ. ಅದೇ ರೀತಿ ಮಾ.7ರಂದು ರಾಮಲಿಂಗ ರೆಡ್ಡಿ, ಮಾ.11 ಸುರ್ಜೆವಾಲಾ, ಮಾ.15ರಂದು ಎಂ.ಬಿ. ಪಾಟೀಲ್ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯದ ಮುಂದೆ ಹಾಜರಾಗಲು ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waq ಹೋರಾಟಕ್ಕೆ ವಿಜಯೇಂದ್ರ ತಂಡಗಳೇ ಅಧಿಕೃತ: ರೇಣುಕಾಚಾರ್ಯ
HDK ವಿರುದ್ಧ ಜಮೀರ್ ಹೇಳಿಕೆ ತಪ್ಪು: ಸಿ.ಎಂ. ಇಬ್ರಾಹಿಂ
B.Z. Zameer Ahmed Khan ‘ಕರಿಯ’ ಎನ್ನಬಾರದಿತ್ತು: ಸಿಎಂ ಸಿದ್ದರಾಮಯ್ಯ
40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ
Cooperation: ನಬಾರ್ಡ್ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.