Shairyam Sarvatra Sadhanam; ಹೊಸಬರ ಚಿತ್ರ ಬಿಡುಗಡೆಗೆ ಸಿದ್ಧ
Team Udayavani, Feb 6, 2024, 4:53 PM IST
“ಧೈರ್ಯಂ ಸರ್ವತ್ರ ಸಾಧನಂ’ ಸಿನಿಮಾ ತೆರೆಗೆ ಬರಲು ಸಿದ್ಧವಾಗಿದೆ. ಮೊದಲ ಹಂತವಾಗಿ ಚಿತ್ರದ ಟ್ರೇಲರ್ ಅನ್ನು ಚಿತ್ರತಂಡ ಸೋಮವಾರ ಬಿಡುಗಡೆ ಮಾಡಿದೆ. ಆ್ಯಕ್ಷನ್ ಜೊತೆಗೆ ಕಂಟೆಂಟ್ ಇಟ್ಟುಕೊಂಡಿರುವ ಈ ಚಿತ್ರದ ಟ್ರೇಲರ್‌ಗೆ ಮೆಚ್ಚುಗೆ ವ್ಯಕ್ತವಾಗುವ ಮೂಲಕ ಚಿತ್ರತಂಡ ಖುಷಿಯಾಗಿದೆ.
“ಧೈರ್ಯಂ ಸರ್ವತ್ರ ಸಾಧನಂ’ ಸಿನಿಮಾಕ್ಕೆ ಎ. ಆರ್. ಸಾಯಿರಾಮ್ ಕಥೆ, ಚಿತ್ರಕಥೆ, ಸಂಭಾಷಣೆ ಹಾಗೂ ಗೀತ ರಚನೆ ಮಾಡಿ ಆ್ಯಕ್ಷನ್-ಕಟ್ ಹೇಳಿದ್ದಾರೆ. ನಮ್ಮ ಸುತ್ತಮುತ್ತ ನಡೆಯಬಹುದಾದ, ಒಂದಷ್ಟು ಜನರಿಗೆ ಸ್ಫೂರ್ತಿಯಾಗಬಲ್ಲ ವಿಷಯಗಳನ್ನು ಇಟ್ಟುಕೊಂಡು ಈ ಸಿನಿಮಾವನ್ನು ತೆರೆಗೆ ತರಲಾಗುತ್ತಿದೆ ಎಂಬುದು ಚಿತ್ರತಂಡದ ಒಕ್ಕೊರಲ ಮಾತು.
ಈಗಾಗಲೇ “ಕಮರೊಟ್ಟು ಚೆಕ್‌ಪೋಸ್ಟ್’, “ಗುಬ್ಬಿಮರಿ’ ಹೀಗೆ ಒಂದಷ್ಟು ಸಿನಿಮಾಗಳನ್ನು ನಿರ್ಮಿಸಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಆನಂದ್ ಬಾಬು. ಜಿ “ಎ. ಪಿ. ಪ್ರೊಡಕ್ಷನ್ಸ್’ ಬ್ಯಾನರ್ ಅಡಿಯಲ್ಲಿ “ಧೈರ್ಯಂ ಸರ್ವತ್ರ ಸಾಧನಂ’ ಸಿನಿಮಾಕ್ಕೆ ಬಂಡವಾಳ ಹೂಡಿ ನಿರ್ಮಿಸಿದ್ದಾರೆ. “ಒಂದು ಸಿನಿಮಾದಲ್ಲಿ ಏನೇನು ಎಲಿಮೆಂಟ್ಸ್ ಇರಬೇಕೋ ಅದೆಲ್ಲವೂ ಈ ಸಿನಿಮಾದಲ್ಲಿದೆ. ಎಲ್ಲ ವರ್ಗದ
ಆಡಿಯನ್ಸ್‌ಗೂ ಇಷ್ಟವಾಗುವಂಥ ಒಳ್ಳೆಯ ಕಥೆ, ಐದು ಫೈಟ್ಸ್, ಎರಡು ಚೇಸಿಂಗ್, ಸಾಂಗ್ಸ್ ಎಲ್ಲವೂ ಸಿನಿಮಾದಲ್ಲಿದೆ. ಬಿಡುಗಡೆಗೂ ಮೊದಲೇ ಸಿನಿಮಾ ತನ್ನ ಕಂಟೆಂಟ್‌ನಿಂದಾಗಿ ಆಡಿಯನ್ಸ್‌ಗೆ ಇಷ್ಟವಾಗುತ್ತಿದೆ. ಎಲ್ಲ ಕಡೆಗಳಲ್ಲಿ ಸಿನಿಮಾದ ಬಗ್ಗೆ ನಿರೀಕ್ಷೆಯ ಮಾತುಗಳನ್ನಾಡುತ್ತಿದ್ದಾರೆ’ ಎನ್ನುತ್ತಿದೆ ಚಿತ್ರತಂಡ.
“ಧೈರ್ಯಂ ಸರ್ವತ್ರ ಸಾಧನಂ’ ಸಿನಿಮಾದಲ್ಲಿ ವಿವಾನ್ ಕೆ. ಕೆ. ನಾಯಕನಾಗಿ ಸ್ಯಾಂಡಲ್‌ವುಡ್‌ಗೆ ಪರಿಚಯವಾಗುತ್ತಿದ್ದಾರೆ. ಅನುಷಾ ರೈ ನಾಯಕಿಯಾಗಿ ಜೋಡಿಯಾಗಿದ್ದಾರೆ. ಉಳಿದಂತೆ ಯಶ್ ಶೆಟ್ಟಿ, ಬಲರಾಜವಾಡಿ, ಚಕ್ರವರ್ತಿ ಚಂದ್ರಚೂಡ್, ವರ್ಧನ್, ಪ್ರದೀಪ್ ಪೂಜಾರಿ, ರಾಮ್‌ಪವನ್, ಪದ್ಮಿನಿ ಶೆಟ್ಟಿ, ಅರ್ಜುನ್ ಪಾಳೆಗಾರ, ರಾಮ್ ನಾಯಕ್, ಹೊಂಗಿರಣ ಚಂದ್ರು ಮತ್ತಿತರರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್ ರಾಘವೇಂದ್ರ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.