Chikkamagaluru: ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ KSRTC ಡಿಸಿ
Team Udayavani, Feb 6, 2024, 9:09 PM IST
ಚಿಕ್ಕಮಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಚಾಲಕರೊಬ್ಬರನ್ನು ಬೇರೆಡೆಗೆ ವರ್ಗಾವಣೆ ಮಾಡಲು ಲಂಚದ ಬೇಡಿಕೆ ಇಟ್ಟು, ಹಣ ಪಡೆಯುತ್ತಿದ್ದ ವೇಳೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವಿಭಾಗೀಯ ಜಿಲ್ಲಾ ಅಧಿಕಾರಿ ಬಸವರಾಜ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಚಾಲಕರೊಬ್ಬರು ಚಿಕ್ಕಮಗಳೂರು ವಿಭಾಗದಿಂದ ಕಡೂರು ಡಿಪೋಗೆ ವರ್ಗಾವಣೆ ಮಾಡುವಂತೆ ಅಧಿಕಾರಿ ಬಸವರಾಜ್ ಅವರಿಗೆ ತಿಳಿಸಿದ್ದರು. ವರ್ಗಾವಣೆ ಮಾಡಬೇಕಾದರೇ 10 ಸಾವಿರ ಹಣ ನೀಡಬೇಕೆಂದು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ಸಂಬಂಧ ಚಾಲಕ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದು, ಮಂಗಳವಾರ ಬಸವರಾಜ್ ಲಂಚದ ಹಣ ಪಡೆಯುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಬಸವರಾಜ್ ಹಾಗೂ ಅವರ ಕಾರು ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
ಪ್ರಕರಣದಲ್ಲಿ ಬಸವರಾಜ್ ಪ್ರಮುಖ ಆರೋಪಿಯಾಗಿದ್ದು, ಕಾರು ಚಾಲಕ ಎರಡನೇ ಆರೋಪಿಯಾಗಿದ್ದಾನೆ. ಈ ಸಂಬಂಧ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಅನಿಲ್ ರಾಥೋಡ್ ಸೇರಿದಂತೆ ಇತರೆ ಸಿಬ್ಬಂದಿಗಳು ಇದ್ದರು.
ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವಿಭಾಗೀಯ ಅಧಿಕಾರಿ ಬಸವರಾಜ್ ಮೇಲೆ ಈ ಹಿಂದೆ ಅನೇಕ ಆರೋಪಗಳು ಕೇಳಿ ಬಂದಿದ್ದವು. ನೌಕರರ ವರ್ಗಾವಣೆ ಮಾಡಲು ಮತ್ತು ರಜೆ ನೀಡಲು, ಮಾರ್ಗ ಬದಲಾವಣೆ ಮಾಡಲು ಲಂಚಕ್ಕೆ ಬೇಡಿಕೆ ಇಡುತ್ತಿದ್ದಾರೆಂದು ಸಂಘ ಸಂಸ್ಥೆಗಳು ಆರೋಪಿಸಿದ್ದರು. ಅಧಿಕಾರಿಯನ್ನು ವರ್ಗಾವಣೆ ಮಾಡುವಂತೆ ಆಗ್ರಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.