Arrested: ನಕಲಿ ದಾಖಲೆ ಸೃಷ್ಟಿಸಿ ಭೂ ಕಬಳಿಕೆ; ಜೇಡ್ರಳ್ಳಿ ಕೃಷ್ಣಪ್ಪ ಸೇರಿ ಇಬ್ಬರ ಬಂಧನ
Team Udayavani, Feb 7, 2024, 10:57 AM IST
ಬೆಂಗಳೂರು: ನಕಲಿ ದಾಖಲೆಗಳ ಸೃಷ್ಟಿಸಿ ಹತ್ತಾರು ಜಮೀನುಗಳನ್ನು ದೋಚಲು ಸಂಚು ರೂಪಿಸಿದ ಆರೋಪದ ಮೇಲೆ ಜೇಡರಹಳ್ಳಿ ಕೃಷ್ಣಪ್ಪ ಮತ್ತು ಆತನ ಸಹಚರ ಗೋವಿಂದರಾಜು ಎಂಬಾತನನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳ ವಿರುದ್ಧ ಸುಂಕದಕಟ್ಟೆ ನಿವಾಸಿ ಶಂಕರಪ್ಪ ಎಂಬವರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಮಂಗಳವಾರ ಆರೋಪಿ ಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಬೆಂಗಳೂರು ಉತ್ತರ ತಾಲೂಕು ಯಶವಂತಪುರ ಹೋಬಳಿ ಹೇರೋಹಳ್ಳಿ ಗ್ರಾಮದ ಸರ್ವೆ ನಂ 23ರಲ್ಲಿ ದೂರುದಾರ ಶಂಕರಪ್ಪ ಅವರ ಕುಟುಂಬಕ್ಕೆ ಸೇರಿದ ಪಿತ್ರಾರ್ಜಿತ 16 ಎಕರೆ 37 ಗುಂಟೆ ಜಮೀನು ಇದೆ. ಈ ಸಂಬಂಧ 1991ರಲ್ಲಿ ಶಂಕರಪ್ಪ ಅವರ ದಾಯಾದಿಯೊಬ್ಬರು ಹೈಕೋರ್ಟ್‌ನಲ್ಲಿ ಆಸ್ತಿ ಪಾಲು ಕೇಳಿ ದಾವೆ ಹೂಡಿದ್ದು, ಈ ಸಂಬಂಧ ವಿಚಾರಣೆ ನಡೆಯುತ್ತಿದೆ. ಈ ಮಧ್ಯೆ ಆರೋಪಿ ಜೇಡರಹಳ್ಳಿ ಕೃಷ್ಣಪ್ಪ ಮತ್ತು ಅವರ ಸಹಚರರು ತಮ್ಮ ಕುಟುಂಬರಸ್ಥರಲ್ಲದ ವ್ಯಕ್ತಿಗಳ ಮೂಲಕ ಆರೋಪಿಗಳು ತಮ್ಮ ಹೆಸರಿಗೆ ನೋಂದಣಿ ಮಾಡಿಸಿಕೊಂಡು, ನಾಗರಬಾವಿಯ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಕ್ರಯ ಪತ್ರ ಮಾಡಿಸಿಕೊಂಡು ವಂಚಿಸಿದ್ದಾರೆ ಎಂದು ದೂರು ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
Arrested: ನಕಲಿ ದಾಖಲೆ ನೀಡಿ ಟಿಡಿಎಸ್ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.