Arrested: ಸುಲಿಗೆ ಮಾಡಿದವರನ್ನು ಬೆನ್ನಟ್ಟಿ ಬಂಧಿಸಿದ ಹೊಯ್ಸಳ ಸಿಬ್ಬಂದಿ
Team Udayavani, Feb 8, 2024, 12:41 PM IST
ಬೆಂಗಳೂರು: ಆಟೋದಲ್ಲಿ ಮಲಗಿದ್ದ ಚಾಲಕನನ್ನು ಹೆದರಿಸಿ ಹಲ್ಲೆ ಮಾಡಿ ಮೊಬೈಲ್ ಹಾಗೂ ಹಣ ಸುಲಿಗೆ ಮಾಡಿದ್ದ ಇಬ್ಬರು ಕಳ್ಳರನ್ನು ಇಂದಿರಾನಗರ ಠಾಣೆ ಹೊಯ್ಸಳ ಸಿಬ್ಬಂದಿ ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಬಂಧಿಸಿದ್ದಾರೆ.
ನಗರದ ವಿನೋದ್ ಅಲಿಯಾಸ್ ಗುಂಡು (22), ಸ್ಟೀಫನ್ ರಾಜ್ (24) ಬಂಧಿತರು.
ಆರೋಪಿಗಳು ಜ.31ರಂದು ಮುಂಜಾನೆ 4 ಗಂಟೆ ಸಮಯದಲ್ಲಿ ಸಿದ್ದೇಶ್ ಎಂಬವರು ತಮ್ಮ ಆಟೋದಲ್ಲಿ ಇಂದಿರಾನಗರದ 100 ಅಡಿ ರಸ್ತೆಯ ಬದಿಯಲ್ಲಿ ಆಟೋ ನಿಲ್ಲಿಸಿ ಮಲಗಿದ್ದರು. ಅದೇ ವೇಳೆ ಸ್ಥಳಕ್ಕೆ ಬಂದ ಆರೋಪಿಗಳು ಚಾಲಕನನ್ನು ಬೆದರಿಸಿ ಹಲ್ಲೆ ಮಾಡಿ ಜೇಬಿನಲ್ಲಿದ್ದ ಮೊಬೈಲ್ ಹಾಗೂ 2,300 ರೂ. ನಗದು ದೋಚಿ ಪರಾರಿಯಾಗಿದ್ದಾರೆ.
ಈ ವೇಳೆ ಚಾಲಕ ಕೂಡಲೇ ಪೊಲೀಸ್ ಸಹಾಯವಾಣಿ 112ಕ್ಕೆ ಕರೆ ಮಾಡಿ ಘಟನೆ ಬಗ್ಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಕಾರ್ಯಪ್ರವೃತ್ತರಾದ ಹೊಯ್ಸಳ 30ರ ವಾಹನದಲ್ಲಿದ್ದ ಸಹಾಯಕ ಪೊಲೀಸ್ ಇನ್‌ಸ್ಪೆಕ್ಟರ್ ವಿಲಿಯಮ್ ಜಾರ್ಜ್ ಮತ್ತು ಚಾಲಕ ಬೀರಪ್ಪ ಪೂಜಾರಿ ದ್ವಿಚಕ್ರ ವಾಹನದಲ್ಲಿ ಪರಾರಿಯಾಗುತ್ತಿದ್ದ ಆರೋಪಿಗಳ ಬೆನ್ನಟ್ಟಿ ಕೆಲವೇ ಕ್ಷಣಗಳಲ್ಲಿ ವಶಕ್ಕೆ ಪಡೆದಿದ್ದಾರೆ ಎಂದು ಪೂರ್ವ ವಿಭಾಗದ ಡಿಸಿಪಿ ಡಿ.ದೇವರಾಜ್ ಮಾಹಿತಿ ನೀಡಿದರು.
ಆರೋಪಿಗಳ ಬಂಧನದಿಂದ ಇಂದಿರಾನಗರ, ಹಲಸೂರು, ಹೆಣ್ಣೂರು ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಐದು ಸುಲಿಗೆ, ಕಳ್ಳತನ ಪ್ರಕರಣಗಳು ಪತ್ತೆಯಾಗಿದ್ದು, ವಿನೋದ್ ವಿರುದ್ಧ ವಿವಿಧ ಠಾಣೆಗಳಲ್ಲಿ 10, ಸ್ಟೀಫನ್ ರಾಜ್ ವಿರುದ್ಧ 2 ಪ್ರಕರಣಗಳು ದಾಖಲಾಗಿವೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sullia: ಅಪಘಾತ; ಪರಾರಿಯಾಗಿದ್ದ ಲಾರಿ ವಶಕ್ಕೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್ ಮಗುಚಿ ಇಬ್ಬರು ನಟಿಯರ ಸಾವು
Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.