Loan Apps: ಲೋನ್ಆ್ಯಪ್ ಡೌನ್ಲೋಡ್ ಮಾಡಿದಕ್ಕೆ ಯುವತಿಗೆ ಬ್ಲ್ಯಾಕ್ಮೇಲ್
Team Udayavani, Feb 8, 2024, 12:45 PM IST
ಬೆಂಗಳೂರು: ಇನ್ಸ್ಟಾಗ್ರಾಂ ವೀಕ್ಷಿಸುವಾಗ ಆಕಸ್ಮಿಕವಾಗಿ ಲೋನ್ ಆ್ಯಪ್ ಡೌನ್ ಲೋಡ್ ಮಾಡಿದಕ್ಕಾಗಿ ಯುವತಿಯೊಬ್ಬಳಿಗೆ ಕರೆ ಮಾಡಿದ ಸೈಬರ್ ವಂಚಕರು ಹಣಕ್ಕೆ ಬೇಡಿಕೆ ಇಟ್ಟಿರುವ ಪ್ರಕರಣ ಬೆಳಕಿಗೆ ಬಂದಿದೆ.
ಈ ಸಂಬಂಧ 22 ವರ್ಷದ ಯುವತಿ ನೀಡಿದ ದೂರಿನ ಮೇರೆಗೆ ಗೋವಿಂದಪುರ ಠಾಣೆ ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಐಟಿ ಕಾಯ್ದೆ ಅಡಿ ಕೇಸ್ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಸಂತ್ರಸ್ತೆ ಕೆಲ ದಿನಗಳ ಹಿಂದೆ ಇನ್ಸ್ಟಾಗ್ರಾಂ ಖಾತೆ ವೀಕ್ಷಿಸುವಾಗ ಆಕಸ್ಮಿಕವಾಗಿ ಲೋನ್ ಆ್ಯಪ್ ಡೌನ್ಲೋಡ್ ಆಗಿದ್ದು, ಕೆಲ ಕ್ಷಣಗಳಲ್ಲೇ ಅದನ್ನು ಡಿಲೀಟ್ ಮಾಡಿದ್ದಾರೆ. ಆದರೆ, ಕೆಲ ಅಪರಿಚಿತ ವ್ಯಕ್ತಿಗಳು, ಸಂತ್ರಸ್ತೆಯ ನಗ್ನ ಚಿತ್ರಗಳನ್ನು ಕೃತಕ ಬುದ್ಧಿಮತೆ ಮೂಲಕ ಸೃಷ್ಟಿಸಿ, ಆಕೆಯ ಮೊಬೈಲ್ಗೆ ಕಳುಹಿಸಿದ್ದಾರೆ. ಅಲ್ಲದೆ, ಐದಾರು ನಂಬರ್ಗಳಿಂದ ನಿರಂತರ ಕರೆ ಮಾಡಿ, ತಾವೂ ಸೂಚಿಸಿದ ಬ್ಯಾಂಕ್ ಖಾತೆಗೆ ಹಣ ಜಮೆ ಮಾಡಬೇಕು. ಹಣ ಕೊಡಲು ಯುವತಿ ನಿರಾಕರಿಸಿದ್ದಾರೆ. ಆಕೆಯ ನಗ್ನ ಫೋಟೋಗಳನ್ನು ಕುಟುಂಬದವರು ಹಾಗೂ ಸ್ನೇಹಿತರಿಗೆ ಕಳುಹಿಸಿ ಬ್ಲ್ಯಾಕ್ಮೇಲ್ ಮಾಡಿದ್ದಾರೆ. ಹೀಗಾಗಿ ಕೃತಕ ಬುದ್ಧಿಮತ್ತೆ ಮೂಲಕ ನಗ್ನಪೋಟೋಗಳನ್ನು ಸೃಷ್ಟಿಸಿದ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳಲು ಸಂತ್ರಸ್ತೆ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಸುರಂಗ ರಸ್ತೆ ಕಾಮಗಾರಿಗೆ ಭಾರತ-ಚೀನಾ ಸಂಬಂಧ ಅಡ್ಡಿ!
Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ
Digital arrest: ವೃದ್ಧೆಗೆ ಡಿಜಿಟಲ್ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್ ವಂಚಕ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
MUST WATCH
ಹೊಸ ಸೇರ್ಪಡೆ
US Polls; ಟ್ರಂಪ್ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.