Crime: ಆಸ್ತಿ ವಿಚಾರಕ್ಕೆ ಸಂಬಂಧಿಕನಿಂದ ಜೋಡಿ ಕೊಲೆ

Team Udayavani, Feb 8, 2024, 1:06 PM IST

Crime: ಆಸ್ತಿ ವಿಚಾರಕ್ಕೆ ಸಂಬಂಧಿಕನಿಂದ ಜೋಡಿ ಕೊಲೆ

ಬೆಂಗಳೂರು: ಆಸ್ತಿಯ ವಿಚಾರಕ್ಕೆ ಸಂಬಂಧಿಕನೇ ಇಬ್ಬರು ವ್ಯಾಪಾರಿಗಳನ್ನು ಭೀಕರವಾಗಿ ಕೊಲೆಗೈದಿರುವ ಘಟನೆ ಬುಧವಾರ ಸಂಜೆ ಕುಂಬಾರಪೇಟೆಯ ಅಂಗಡಿಯೊಂದರಲ್ಲಿ ನಡೆದಿದೆ.

ಪದ್ಮನಾಭನಗರದ ಸುರೇಶ್‌(55), ಮಹೇಂದ್ರ (58) ಕೊಲೆಯಾದವರು.

ಬುಧವಾರ ರಾತ್ರಿ 8 ಗಂಟೆಯ ಸುಮಾರಿಗೆ ಕುಂಬಾರ ಪೇಟೆಯಲ್ಲಿರುವ ಹರಿ ಮಾರ್ಕೇಟಿಂಗ್‌ ಎಂಬ ಕಿಚನ್‌ ಉಪಕರಣ ಮಾರಾಟ ಮಾಡುವ ಅಂಗಡಿಗೆ ನುಗ್ಗಿರುವ ದುಷ್ಕರ್ಮಿಯೊಬ್ಬ ಇಬ್ಬರನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆಗೈದಿದ್ದಾರೆ. ಪ್ರಾಥಮಿಕ ವಿಚಾರಣೆಯಲ್ಲಿ ಆಸ್ತಿ ವಿಚಾರಕ್ಕೆ ಸಂಬಂಧಿಕನೇ ಕೃತ್ಯ ಎಸಗಿರುವುದು ಗೊತ್ತಾಗಿದೆ ಎಂದು ಎಂದು ಕೇಂದ್ರ ವಿಭಾಗದ ಡಿಸಿಪಿ ಎಚ್‌.ಟಿ.ಶೇಖರ್‌ ತಿಳಿಸಿದ್ದಾರೆ.

ಈ ಸಂಬಂಧ ಹಲಸೂರು ಗೇಟ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಭದ್ರಿಪ್ರಸಾದ್‌ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.

ರಕ್ಷಣೆ ಮಾಡಲು ಮುಂದಾದವನ ಹತ್ಯೆ: ಸುರೇಶ್‌ ಮತ್ತು ಮಹೇಂದ್ರ ಇಬ್ಬರು ಸ್ನೇಹಿತರಾಗಿದ್ದು, ಸುರೇಶ್‌ ಅಂಗಡಿಗೆ ಮಹೇಂದ್ರ ಬಂದಿದ್ದ. ಇನ್ನು ಕೊಲೆಯಾದ ಸುರೇಶ್‌ ಮತ್ತು ಪೊಲೀಸರ ವಶದಲ್ಲಿರುವ ಆರೋಪಿ ಭದ್ರ ಇಬ್ಬರು ದೂರದ ಸಂಬಂಧಿಕರಾಗಿದ್ದು, ಆಸ್ತಿಯ ವಿಚಾರವಾಗಿ ಜಗಳವಾಗಿತ್ತು. ಈ ಹಿನ್ನೆಲೆಯಲ್ಲಿ ಭದ್ರ, ಸುರೇಶ್‌ನನ್ನು ಕೊಲೆ ಮಾಡಲು ಉಪ್ಪಾರಪೇಟೆಯ ಅಂಗಡಿಗೆ ಬುಧವಾರ ರಾತ್ರಿ ಆಗಮಿಸಿದ್ದ. ಅಂಗಡಿಗೆ ಬಂದವನೆ ಏಕಾಏಕಿ ಚಾಕುವಿನಿಂದ ಸುರೇಶ್‌ ಮೇಲೆ ಹಲ್ಲೆ ಮುಂದಾಗಿದ್ದ. ಈ ವೇಳೆ ಆತನ ರಕ್ಷಣೆಗೆ ಧಾವಿಸಿದ್ದ ಮಹೇಂದ್ರನ ಮೇಲು ಆರೋಪಿ ಚಾಕುವಿನಿಂದ ಇರಿದಿದ್ದಾನೆ. ಗೆಳೆಯ ಮೇಲೆ ಹಲ್ಲೆಯಾಗುತ್ತಿರುವುದನ್ನು ಗಮನಿಸಿ ಕೂಡಲೇ ಆತನ ರಕ್ಷಣೆಗೆ ಧಾವಿಸಿದ್ದಾನೆ. ಆದರೆ ಆತನ ಮೇಲೆಯೂ ಚಾಕುವಿನಿಂದ ಆರೋಪಿ ಭದ್ರಿ ಪ್ರಸಾದ್‌ ಹಲ್ಲೆ ನಡೆಸಿದ್ದಾನೆ. ಇರಿತಕ್ಕೆ ಒಳಗಾದ ಸುರೇಶ್‌ ಅಂಗಡಿಯ ಒಳಗಡೆ ಇದ್ದ ಕುರ್ಚಿ ಮೇಲೆಯೇ ಒದ್ದಾಡಿ ಪ್ರಾಣಬಿಟ್ಟದ್ದು, ಮಹೇಂದ್ರ ಅಂಗಡಿಯ ಹೊರಗಡೆ ಬಿದ್ದು ಒದ್ದಾಡಿ ಪ್ರಾಣಬಿಟ್ಟಿದ್ದಾನೆ. ಇನ್ನು ಆರೋಪಿ ಭದ್ರಿ ಪ್ರಸಾದ್‌ ಎಚ್‌ ಎಸ್‌ಆರ್‌ ಲೇಔಟ್‌ನಲ್ಲಿ ಎಲೆಕ್ಟ್ರಿಕಲ್‌ ಶಾಪ್‌ ಇಟ್ಟುಕೊಂಡಿದ್ದಾನೆ. ಸುರೇಶ್‌ಗೂ ಹಾಗೂ ಭದ್ರಿಪ್ರಸಾದ್‌ಗೆ ಆಸ್ತಿಯ ವಿಚಾರಕ್ಕೆ ಜಗಳವಾಗಿತ್ತು ಎಂದು ಪೊಲೀಸರು ಹೇಳಿದರು.

ಬುಧವಾರ ರಾತ್ರಿ ಕುಂಬಾರ ಪೇಟೆಯ ಅಂಗಡಿಯೊಂದರಲ್ಲಿ ಜೋಡಿ ಕೊಲೆ ಮಾಡಲಾಗಿದೆ. ಆಸ್ತಿ ವಿಚಾರಕ್ಕೆ ಸಂಬಂಧಿ ಕನೇ ಈ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗು ತ್ತಿದೆ. ತನಿಖೆ ಮುಂದುವರಿದಿದೆ. -ಎಚ್‌.ಟಿ.ಶೇಖರ್‌, ಕೇಂದ್ರ ವಿಭಾಗದ ಡಿಸಿಪಿ

ಟಾಪ್ ನ್ಯೂಸ್

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bengaluru

ಜಿ.ಪಂ-ತಾ.ಪಂ ಮೀಸಲು: ಮತ್ತೆ ಕಾಲಾವಕಾಶ ಕೇಳಿದ ಸರ್ಕಾರ

Bengaluru: ಯತ್ನಾಳ್‌ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ

Bengaluru: ಯತ್ನಾಳ್‌ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ

Jalandhara Kannada Movie: ಜಲಂಧರ ಮೇಲೆ ಪ್ರಮೋದ್‌ ಕಣ್ಣು

Jalandhara Kannada Movie: ಜಲಂಧರ ಮೇಲೆ ಪ್ರಮೋದ್‌ ಕಣ್ಣು

Arrested: ಸರ‌, ಮನೆ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

Arrested: ಸರ‌, ಮನೆ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

Theft Case: ಕೆಲಸಕ್ಕಿದ್ದ ಮನೆಯಲ್ಲೇ 25 ಲಕ್ಷ ರೂ. ಚಿನ್ನ ಕದ್ದಳು!

Theft Case: ಕೆಲಸಕ್ಕಿದ್ದ ಮನೆಯಲ್ಲೇ 25 ಲಕ್ಷ ರೂ. ಚಿನ್ನ ಕದ್ದಳು!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.