![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Feb 8, 2024, 8:08 PM IST
ಮೈಸೂರು: “ಭಾರತ್ ಬ್ರ್ಯಾಂಡ್’ ಪಂಚ ಗ್ಯಾರಂಟಿ ಮೀರಿಸುವಂತದ್ದು. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರತಿ ಕೆಜಿ ಅಕ್ಕಿಗೆ 29 ರೂ. ದರದಲ್ಲಿ ಮಾರಾಟ ಮಾಡಲು ಭಾರತ್ ಬ್ರಾಂಡ್ ಯೋಜನೆ ಬಿಡುಗಡೆ ಮಾಡಿದೆ. ಈ ಯೋಜನೆಯು ಕರ್ನಾಟಕ ಕಾಂಗ್ರೆಸ್ ಸರ್ಕಾರದ ಐದು ಯೋಜನೆಗಳನ್ನು ಮೀರಿಸುವಂತಾಗಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ನಗರದ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಗುರುವಾರ ನಡೆದ ಬಿಜೆಪಿ ಮೈಸೂರು ಗ್ರಾಮಾಂತರ ಜಿಲ್ಲೆಯ ವಿಶೇಷ ಕಾರ್ಯಕಾರಣಿ ಸಭೆ ಉದ್ಘಾಟಿಸಿ ಮಾತನಾಡಿದರು.
ಭಾರತ್ ಬ್ರ್ಯಾಂಡ್ ಬಡವರು, ಮಧ್ಯಮ ವರ್ಗದವರಿಗೆ ಮಾತ್ರ ಸೀಮಿತವಾಗದೆ ಎಲ್ಲಾ ಜನರಿಗೂ ಅನುಕೂಲ ಆಗಲಿದೆ. ಇದರಿಂದ ನೆಮ್ಮದಿಯಿಂದ ಸ್ವಾಭಿಮಾನದ ಬದುಕು ನಡೆಸಲು ಸಾಧ್ಯವಾಗಲಿದೆ ಎಂದು ಹೇಳಿದರು.
ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಕಾರ್ಯವನ್ನು ಸಂಪೂರ್ಣ ಮರೆತಿದ್ದು, ರಾಜ್ಯ ಸರ್ಕಾರದ ವೈಫಲ್ಯ ಹೇಳುವ ಜತೆಗೆ ಕೇಂದ್ರದ ಯೋಜನೆಗಳನ್ನು ಜನರಿಗೆ ಮನವರಿಕೆ ಮಾಡಿಕೊಡುವ ಕೆಲಸವನ್ನು ಪಕ್ಷದ ಕಾರ್ಯಕರ್ತರು ಮಾಡಬೇಕು. ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಗೆಲ್ಲಿಸಲು ಒಗ್ಗಟ್ಟಿನಲ್ಲಿ ಕೆಲಸ ಮಾಡಬೇಕೆಂದು ಮನವಿ ಮಾಡಿದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.