ಬಾಡಿಗೆಗೆ ವಾಹನ; ಉಡುಪಿ ಆರ್‌ಟಿಒ ಆಯುಕ್ತರ ದಾಳಿ: ದಾಖಲೆ ಇಲ್ಲದಿದ್ದರೆ ಬಂದ್
Team Udayavani, Feb 8, 2024, 11:52 PM IST
ಉಡುಪಿ : ಸೂಕ್ತ ದಾಖಲೆಗಳಿಲ್ಲದೆ ಗ್ರಾಹಕರಿಗೆ ಬಾಡಿಗೆ ಆಧಾರದಲ್ಲಿ ವಾಹನಗಳನ್ನು ನೀಡುವ (ರೆಂಟಲ್ ಬೈಕ್/ಕಾರ್ ಶಾಪ್) ಉಡುಪಿ, ಮಣಿಪಾಲ ಪರಿಸರದ ಅಂಗಡಿಗಳ ಮೇಲೆ ಆರ್‌ಟಿಒ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದಾರೆ. ಈ ವೇಳೆ ಸುಮಾರು 10ರಿಂದ 15ರಷ್ಟು ವಾಹನಗಳಲ್ಲಿ ಸೂಕ್ತ ದಾಖಲೆ ಇಲ್ಲದಿರುವುದು ಕಂಡುಬಂದಿದೆ.
ಸಾರಿಗೆ ಇಲಾಖೆಯ ಜಂಟಿ ಆಯುಕ್ತ ಕೆ.ಟಿ. ಹಾಲಸ್ವಾಮಿ ನೇತೃತ್ವದಲ್ಲಿ ಅಧಿಕಾರಿಗಳ ತಂಡ ದಾಳಿ ನಡೆಸಿತು. ಈ ವೇಳೆ ಗ್ರಾಹಕರಿಂದ ಯಾವುದೇ ದಾಖಲೆಗಳನ್ನು ಪಡೆಯದೆ ವಾಹನ ನೀಡುತ್ತಿರುವ ಬಗ್ಗೆ, ವಾಹನದ ನಿರ್ವಹಣೆ ಇಲ್ಲದಿರುವುದು, ವಾಯುಮಾಲಿನ್ಯ ಪರೀಕ್ಷೆ, ಇನ್ಶೂರೆನ್ಸ್ ಪಾವತಿಸದಿರುವ ಬಗ್ಗೆ ಕಂಡುಬಂದಿದೆ. ಈ ಬಗ್ಗೆ ಮಾಲಕರಿಗೆ ಇಲಾಖೆಯ ವತಿಯಿಂದ ಎಚ್ಚರಿಕೆ ನೀಡಲಾಯಿತು.
2 ವಾರ ಕಾಲಾವಕಾಶ
ಮಾಲಕರಿಗೆ ಎರಡು ವಾರಗಳ ಕಾಲಾವಕಾಶ ನೀಡಲಾಗಿದೆ. ಈ ವೇಳೆ ಸೇವೆಯಲ್ಲಿರುವ ಎಲ್ಲ ವಾಹನಗಳಿಗೂ ಸೂಕ್ತ ದಾಖಲೆಗಳನ್ನು ಮಾಡಬೇಕು. ಇಲ್ಲದಿದ್ದರೆ ಮುಟ್ಟುಗೋಲು ಹಾಕು ವಂತೆ ತಿಳಿಸಲಾಯಿತು. ವಾಹನಗಳನ್ನು ಬಾಡಿಗೆಗೆ ನೀಡುವ ಸಂದರ್ಭದಲ್ಲಿ ಗ್ರಾಹಕರಲ್ಲಿ ಚಾಲನ ಪರವಾನಿಗೆ ಇದೆಯಾ ಎಂಬ ಬಗ್ಗೆಯೂ ಸೂಕ್ತ ಪರಿಶೀಲನೆ ನಡೆಸುವಂತೆ ಮಾಲಕರಿಗೆ ಸೂಚನೆ ನೀಡಲಾಯಿತು.
ಹಿರಿಯ ನಿರೀಕ್ಷಕ ಸಂತೋಷ್ ಶೆಟ್ಟಿ, ಮೋಟಾರು ವಾಹನ ನಿರೀಕ್ಷಕ ಮಾರುತಿ ನಾಯ್ಕ, ಎಸ್‌ಡಿಎ ಶಾಂತರಾಜ್ ಸಹಿತ ಆರ್‌ಟಿಒ ಸಿಬಂದಿ ಕಾರ್ಯಾಚರಣೆಯಲ್ಲಿದ್ದರು.
ದಾಖಲೆ ಇಲ್ಲದಿದ್ದರೆ ಬಂದ್
ಪರವಾನಿಗೆ ಇಲ್ಲದೆ ಇಂತಹ ಅಂಗಡಿಗಳು ಕಾರ್ಯಾಚರಣೆ ಮಾಡು ವಂತಿಲ್ಲ. ಬಾಡಿಗೆ ಆಧಾರದಲ್ಲಿ ನೀಡುವಾಗ ವಾಹನಗಳ ಸ್ಥಿತಿಯೂ ಉತ್ತಮವಾಗಿರುವಂತೆ ಸೂಚನೆ ನೀಡಲಾಗಿದೆ. ದಾಖಲೆಗಳಿಲ್ಲದ ಅಂಗಡಿಗಳನ್ನು ಬಂದ್ ಮಾಡಲಾಗಿದೆ. ಇಂತಹ ಕಾರ್ಯಾಚರಣೆಯನ್ನು ಮುಂದಿನ ದಿನಗಳಲ್ಲಿಯೂ ಜಿಲ್ಲೆಯ ವಿವಿಧೆಡೆ ನಡೆಸಲಾಗುವುದು ಎಂದು ಶಿವಮೊಗ್ಗ ವಿಭಾಗದ ಜಂಟಿ ಸಾರಿಗೆ ಆಯುಕ್ತ ಕೆ.ಟಿ. ಹಾಲಸ್ವಾಮಿ ಅವರು ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.