HC: ಸಾಲ ಬಾಕಿ ಪ್ರಕರಣ: ಜಾರಕಿಹೊಳಿ ವಿರುದ್ಧ ಸದ್ಯ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚನೆ
-ಮಗನ ಮದುವೆ ಹಿನ್ನೆಲೆಯಲ್ಲಿ ಹೈಕೋರ್ಟ್‌ನಿಂದ ಈ "ಪರಿಹಾರ'
Team Udayavani, Feb 9, 2024, 9:47 PM IST
ಬೆಂಗಳೂರು: ಅಪೆಕ್ಸ್ ಬ್ಯಾಂಕಿನಿಂದ ಪಡೆದ 439 ಕೋಟಿ ರೂ. ಸಾಲ ಮರು ಪಾವತಿ ಮಾಡದ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಮುಂದಿನ ವಿಚಾರಣೆವರೆಗೆ ಯಾವುದೇ ಕ್ರಮಕ್ಕೆ ಮುಂದಾಗಬಾರದು ಎಂದು ಹೈಕೋರ್ಟ್ ನಿರ್ದೇಶನ ನೀಡಿದೆ.
ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ರಮೇಶ್ ಜಾರಕಿಹೊಳಿ ಹಾಗೂ ಇತರರು ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅರ್ಜಿದಾರ ರಮೇಶ್ ಜಾರಕಿಹೊಳಿ ಪರ ವಕೀಲರು, ಫೆ.26ರಂದು ಅರ್ಜಿದಾರರ ಮಗನ ಮದುವೆ ನಿಶ್ಚಯವಾಗಿದೆ. ಈ ಸಂದರ್ಭದಲ್ಲಿ ತನಿಖಾಧಿಕಾರಿಗಳು ಅವರನ್ನು ಬಂಧಿಸುವ ಸಾಧ್ಯತೆಯಿದೆ. ಆ ಹಿನ್ನೆಲೆಯಲ್ಲಿ ತಮ್ಮ ಕಕ್ಷಿದಾರರಿಗೆ ರಕ್ಷಣೆ ಬೇಕು ಎಂದು ಮನವಿ ಮಾಡಿದರು.
ಇದನ್ನು ಪರಿಗಣಿಸಿದ ನ್ಯಾಯಪೀಠ, ಹಿಂದೂ ಧರ್ಮದ ಸಂಪ್ರದಾಯಗಳ ಪ್ರಕಾರ ಮಗನ ಮದುವೆಯಲ್ಲಿ ತಂದೆ ಹಾಜರಿರುವುದು ಅತ್ಯಗತ್ಯ. ಆದ ಕಾರಣ ಮುಂದಿನ ವಿಚಾರಣೆವರೆಗೆ ಪ್ರಕರಣ ಮೊದಲ ಅರ್ಜಿದಾರರಾಗಿರುವ ರಮೇಶ್ ಜಾರಕಿಹೊಳಿ ಅವರ ವಿರುದ್ಧ ಯಾವುದೇ ಕ್ರಮಕ್ಕೆ ಮುಂದಾಗಬಾರದು ಎಂದು ತನಿಖಾಧಿಕಾರಿಗಳಿಗೆ ನಿರ್ದೇಶನ ನೀಡಿತು. ಆದರೆ, ಪ್ರಕರಣದ ಇತರ ಅರ್ಜಿದಾರರ ವಿರುದ್ಧ ತನಿಖೆ ನಡೆಸುವುದಕ್ಕೆ ಯಾವುದೇ ಅಡ್ಡಿ ಇಲ್ಲ ಎಂದು ನ್ಯಾಯಪೀಠ ಇದೇ ವೇಳೆ ಸ್ಪಷ್ಟಪಡಿಸಿತು.
ಇದೇ ವೇಳೆ ಅರ್ಜಿದಾರರು ಅಪೆಕ್ಸ್ ಬ್ಯಾಂಕಿನಿಂದ ಪಡೆದಿರುವ ಸಾಲ ಮತ್ತು ಮರು ಪಾವತಿ ಮಾಡಿರುವುದಕ್ಕೆ ಸಂಬಂಧಿಸಿದಂತೆ ಸಂಪೂರ್ಣ ವಿವರಣೆಯನ್ನು ಮುಂದಿನ ವಿಚಾರಣೆ ವೇಳೆ ಸಲ್ಲಿಸುವಂತೆಯೂ ಸೂಚನೆ ನೀಡಿದ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿತು.
ಪ್ರಕರಣದ ಹಿನ್ನೆಲೆ:
ಬೆಳಗಾವಿಯ ಗೋಕಾಕದಲ್ಲಿರುವ ಸೌಭಾಗ್ಯಲಕ್ಷ್ಮಿಶುಗರ್ ಲಿಮಿಟೆಡ್‌ನಲ್ಲಿ ಯಂತ್ರೋಪಕರಣ ಅಳವಡಿಕೆ, ವಿಸ್ತರಣೆ ಮತ್ತು ನಿರ್ವಹಣೆಗಾಗಿ ರಮೇಶ್ ಜಾರಕಿಹೊಳಿ 2013ರಿಂದ 2017ರ ಅವಧಿಯಲ್ಲಿ 439 ಕೋಟಿ ರೂ. ಸಾಲ ಪಡೆದಿದ್ದರು. ಅದನ್ನು ಮರು ಪಾವತಿ ಮಾಡಿರಲಿಲ್ಲ. ಸಾಲ ಪಡೆದಾಗ ಜಾರಕಿಹೊಳಿ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದಿ, ವಸಂತ್ ಮತ್ತು ಶಂಕರ್ ನಿರ್ದೇಶಕರಾಗಿದ್ದರು. ಸಾಲ ಇರುವ ಸಂದರ್ಭದಲ್ಲಿ ನಿರ್ದೇಶಕರನ್ನು ಬದಲಿಸುವಂತಿಲ್ಲ ಎಂಬ ಷರತ್ತು ವಿಧಿಸಲಾಗಿತ್ತು. ಆದರೆ, ಜಾರಕಿಹೊಳಿ ರಾಜಿನಾಮೆ ನೀಡಿದ್ದರು. ಆ ಸ್ಥಾನಕ್ಕೆ ಬೇರೊಬ್ಬರನ್ನು ನೇಮಕ ಮಾಡಲಾಗಿತ್ತು. ಈ ವಿಚಾರವನ್ನು ತಮ್ಮ ಗಮನಕ್ಕೆ ತಂದಿಲ್ಲ ಎಂದು ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರು ಜನವರಿ 5ರಂದು ದೂರು ನೀಡಿದ್ದರು. ಇದನ್ನು ಆಧರಿಸಿ ವಿವಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅದನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.