ಕೊಪ್ಪಳ: ಪೊಲೀಸ್ ಇಲಾಖೆಯಿಂದ 13 ಕೆಜಿ ಗಾಂಜಾ ಗಿಡ ನಾಶ
Team Udayavani, Feb 9, 2024, 11:13 PM IST
ಕೊಪ್ಪಳ: ಜಿಲ್ಲಾ ಪೊಲೀಸ್ ಇಲಾಖೆಯು ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಳಿ ಮಾಡಿದ ವೇಳೆ 6 ಪ್ರಕರಣದಡಿ ಜಪ್ತಿ ಮಾಡಿದ್ದ ಒಟ್ಟು 13 ಕೆಜಿ 438 ಗ್ರಾಂ ಗಾಂಜಾ ಗಿಡಗಳನ್ನು ತಾಲೂಕಿನ ನಾಗೇಶನಹಳ್ಳಿ ಬಳಿಯ ಜೈವಿಕ ವೈದ್ಯಕೀಯ ತ್ಯಾಜ್ಯ ವಿಲೇವಾರಿ ಘಟಕದ ಬಾಯ್ಲರ್‌ನಲ್ಲಿ ಕೊಪ್ಪಳ ಎಸ್ಪಿ ಯಶೋಧಾ ಒಂಟಗೋಡಿ ಸಮ್ಮುಖದಲ್ಲಿ ನಾಶಪಡಿಸಲಾಯಿತು.
ಕೊಪ್ಪಳ ಜಿಲ್ಲೆಯಲ್ಲಿ 2011, 2016, 2020, 2022, 2023 ರಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ದಾಖಲಾದ 06 ಪ್ರಕರಣಗಳಲ್ಲಿ ಗಾಂಜಾ ಗಿಡಗಳನ್ನು ಆರೋಪಿಗಳಿಂದ ಜಪ್ತಿ ಮಾಡಲಾಗಿತ್ತು. ಕಾಯ್ದೆ ಹಾಗೂ ನಿಯಮಗಳ ಅನುಸಾರ ಜಿಲ್ಲಾ ಮಾದಕ ವಸ್ತು ವಿಲೇವಾರಿ ಅಧ್ಯಕ್ಷರೂ ಆಗಿರುವ ಕೊಪ್ಪಳ ಎಸ್ಪಿ ಯಶೋಧಾ ಒಂಟಗೋಡಿ, ಎಎಸ್‌ಪಿ ಹೇಮಂತ್ ಕುಮಾರ, ಡಿಎಸ್‌ಪಿ ಮುತ್ತಣ್ಣ, ಸಿದ್ದಲಿಂಗಪ್ಪ ಗೌಡ ಅವರ ಸಮ್ಮುಖದಲ್ಲಿ ತಾಲೂಕಿನ ನಾಗೇಶನಹಳ್ಳಿ ಬಳಿಯ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ವಶಕ್ಕೆ ಪಡೆಲಾಗಿದ್ದ ೧೩.೪೩೮ ಕೆಜಿ ಗಾಂಜಾ ಗಿಡಗಳನ್ನು ವೈದ್ಯಕೀಯ ವಿಧಿ ವಿಧಾನಗಳ ಪ್ರಕಾರ ನಾಶಪಡಿಸಲಾಯಿತು.
ಈ ವೇಳೆ ಜಿಲ್ಲಾ ಅಪರಾಧ ದಾಖಲಾತಿ ವಿಭಾಗದ ಪ್ರಭಾರಿ ಪಿಐ ಡಿ ಸುರೇಶ, ಡಿಸಿಆರ್‌ಬಿ ಸಿಬ್ಬಂದಿಗಳು, ಪರಿಸರ ಇಲಾಖೆಯ ಅಧಿಕಾರಿಗಳು, ವಿಲೇವಾರಿ ಘಟಕದ ಮುಖ್ಯಸ್ಥ ಚಂದ್ರು ಗಡಾದ್ ಸೇರಿ ಸ್ಥಳೀಯರ ಸಮ್ಮುಖದಲ್ಲಿ ನಾಶಪಡಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್
ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ
ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು
Gangavathi: ಆನೆಗೊಂದಿ ರಾಜವಂಶಸ್ಥ ಎಸ್.ಆರ್.ಕೆ. ರಾಜಬಹಾದ್ದೂರ್ ನಿಧನ
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
MUST WATCH
ಹೊಸ ಸೇರ್ಪಡೆ
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್ ಕುಮಾರ್
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.