Hanuman flag ಹಾರಿಸದಿದ್ದರೆ “ಕೆರಗೋಡು ಚಲೋ’

ಮಂಗಳೂರಿನಲ್ಲಿ ವಿಹಿಂಪ ಪ್ರಾಂತ ಸಹಕಾರ್ಯದರ್ಶಿ ಶರಣ್‌ ಪಂಪ್‌ವೆಲ್‌

Team Udayavani, Feb 10, 2024, 12:46 AM IST

Hanuman flag ಹಾರಿಸದಿದ್ದರೆ “ಕೆರಗೋಡು ಚಲೋ’

ಮಂಗಳೂರು: ಕೆರಗೋಡು ಗ್ರಾಮದ ಧ್ವಜಸ್ತಂಭದಲ್ಲಿ ರಾಜ್ಯ ಸರಕಾರ ಮತ್ತೆ ಹನುಮಧ್ವಜ ಹಾರಿಸದಿದ್ದರೆ ವಿಶ್ವ ಹಿಂದೂ ಪರಿಷತ್‌ ಮತ್ತು ಬಜರಂಗ ದಳ ಕಾರ್ಯಕರ್ತರೇ “ಕೆರಗೋಡು ಚಲೋ’ ಅಭಿಯಾನ ಹಮ್ಮಿಕೊಳ್ಳುವರು ಎಂದು ವಿಹಿಂಪ ಪ್ರಾಂತ ಸಹಕಾರ್ಯದರ್ಶಿ ಶರಣ್‌ ಪಂಪ್‌ವೆಲ್‌ ಹೇಳಿದ್ದಾರೆ.

ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜವನ್ನು ತೆರವುಗೊಳಿಸಿದ  ಕೃತ್ಯವನ್ನು ಖಂಡಿಸಿ, ಅದೇ ಜಾಗ ದಲ್ಲಿ ಹನುಮಧ್ವಜ ಮರುಸ್ಥಾಪಿ ಸಲು ಆಗ್ರಹಿಸಿ ವಿಹಿಂಪ, ಬಜರಂಗ ದಳ ವತಿಯಿಂದ ಮಿನಿವಿಧಾನ ಸೌಧ ಮುಂಭಾಗ ಗುರುವಾರ ನಡೆದ ಹನುಮಾನ್‌ ಚಾಲೀಸಾ ಪಠಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬಜರಂಗದಳದ ಎಲ್ಲ ಕಾರ್ಯ ಕರ್ತರು ಕೆರಗೋಡು ಗ್ರಾಮ ಚಲೋ ನಡೆಸಲಿದ್ದು, ಅಲ್ಲಿಯೇ ವಾಸ್ತವ್ಯ ನಡೆಸಿ, ಹನು ಮಧ್ವಜ ಮರು ಹಾರಿಸಲಿದ್ದೇವೆ ಎಂದರು.

ಅಲ್ಲಿನ ಗ್ರಾಮಸ್ಥರು 40 ವರ್ಷದ ಹಿಂದೆ ಹನುಮಧ್ವಜ ಸ್ಥಾಪಿಸಿದ್ದರು. ಯಾವುದೇ ಗಲಾಟೆ ಇರಲಿಲ್ಲ. ನಮಗೆ ರಾಷ್ಟ್ರಧ್ವಜ, ಕನ್ನಡಧ್ವಜದ ಮೇಲೆ ಗೌರವವಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರಕಾರ ಓಟ್‌ ಬ್ಯಾಂಕ್‌ ಗಾಗಿ ಹನುಮ ಧ್ವಜ ತೆರವುಗೊಳಿಸಿದೆ ಎಂದು ಆರೋಪಿಸಿದರು.

ಸಿಎಂ ಸಿದ್ದರಾಮಯ್ಯ ಹಿಂದೂ ವಿರೋಧಿಯಾಗಿದ್ದು, ಕಾಂಗ್ರೆಸ್‌ ಹಿಂದೂ ವಿರೋಧಿ ಯಾಗಿ ವರ್ತಿಸುತ್ತಿದೆ. ಮುಂದಿನ ಚುನಾವಣೆ ಯಲ್ಲಿ ಮುಸಲ್ಮಾನರ ಮತಕ್ಕಾಗಿ ಈಗ ಹನುಮಧ್ವಜಕ್ಕೆ ಅಪಮಾನ ಮಾಡಲಾಗಿದೆ ಎಂದು ಆಪಾದಿಸಿದರು.

ವಿಹಿಂಪ ಜಿಲ್ಲಾ ಕಾರ್ಯದರ್ಶಿ ಶಿವಾನಂದ ಮೆಂಡನ್‌, ವಿಹಿಂಪ ಮಂಗಳೂರು ಜಿಲ್ಲಾಧ್ಯಕ್ಷ ಎಚ್‌.ಕೆ.ಪುರುಷೋತ್ತಮ, ಬಜರಂಗದಳ ವಿಭಾಗ ಸಂಯೋಜಕ ಭುಜಂಗ ಕುಲಾಲ್‌, ಪ್ರಮುಖರಾದ ಮನೋ ಹರ ಸುವರ್ಣ, ಪುನೀತ್‌ ಅತ್ತಾವರ, ಲತೀಶ್‌ ಗುಂಡ್ಯ, ಶ್ರೀಕಾಂತ್‌ ಕಾಟಿಪಳ್ಳ, ಅಜಿತ್‌ ಕುಮಾರ್‌, ಭರತ್‌ , ನವೀನ್‌ ನೆರಿಯ, ಶ್ವೇತಾ, ವೈಶಾಲಿ, ಮುಂತಾದವರು ಶ್ರೀಧರ್‌ ಭಾಗವಹಿಸಿದ್ದರು. ವಿಹಿಂಪ, ಬಜರಂಗದಳ ಕಾರ್ಯಕರ್ತರು ಹನುಮಾನ್‌ ಚಾಲೀಸಾ ಪಠಿಸಿದರು.

 

ಟಾಪ್ ನ್ಯೂಸ್

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

Shettar (3)

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pejavara-Sri

Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ

7(1)

Mangalore: ಊದು ಪೂಜೆ: ಹುಲಿ ವೇಷಕ್ಕೆ ಮುಹೂರ್ತ!

9-mng-1

Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ

2(1)

Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

dw

Padubidri: ರಸ್ತೆ ಅಪಘಾತ; ಗಾಯಾಳು ಸಾವು

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

crimebb

Kasaragod ಅಪರಾಧ ಸುದ್ದಿಗಳು

13

Malpe: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.