INDvsENG; ಮೂರು ಪಂದ್ಯಗಳಿಗೆ ತಂಡ ಪ್ರಕಟ: ವಿರಾಟ್ ಅಲಭ್ಯ, ರಾಹುಲ್ ಗೆ ಫಿಟ್ನೆಸ್ ಟೆಸ್ಟ್
ಮೊದಲ ರಾಷ್ಟ್ರೀಯ ಕರೆ ಪಡೆದ ಆರ್ ಸಿಬಿ ಬೌಲರ್
Team Udayavani, Feb 10, 2024, 11:11 AM IST
ಮುಂಬೈ: ಸದ್ಯ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಉಳಿದ ಮೂರು ಪಂದ್ಯಗಳಿಗೆ ಟೀಂ ಇಂಡಿಯಾವನ್ನು ಅಂತಿಮಗೊಳಿಸಲಾಗಿದೆ. ನಿರೀಕ್ಷೆಯಂತೆ ಪ್ರಮುಖ ಬ್ಯಾಟರ್ ವಿರಾಟ್ ಕೊಹ್ಲಿ ಉಳಿದ ಪಂದ್ಯಗಳಿಗೂ ಅಲಭ್ಯರಾಗಿದ್ದಾರೆ.
ಬೆಂಗಾಳದ ವೇಗಿ, ಆರ್ ಸಿಬಿ ಬೌಲರ್ ಆಕಾಶ್ ದೀಪ್ ಅವರು ಮೊದಲ ಬಾರಿ ರಾಷ್ಟ್ರೀಯ ತಂಡದ ಕರೆ ಪಡೆದಿದ್ದಾರೆ. ಉಳಿದಂತೆ ಈ ಹಿಂದಿನ ತಂಡವನ್ನೇ ಬಹುತೇಕ ಉಳಿಸಿಕೊಳ್ಳಲಾಗಿದೆ.
ವೈಯಕ್ತಿಕ ಕಾರಣಗಳಿಂದಾಗಿ ವಿರಾಟ್ ಕೊಹ್ಲಿ ಸರಣಿಯ ಉಳಿದ ಪಂದ್ಯಗಳಿಗೆ ಆಯ್ಕೆಗೆ ಅಲಭ್ಯರಾಗಲಿದ್ದಾರೆ. ಮಂಡಳಿಯು ಕೊಹ್ಲಿ ಅವರ ನಿರ್ಧಾರವನ್ನು ಸಂಪೂರ್ಣವಾಗಿ ಗೌರವಿಸುತ್ತದೆ ಮತ್ತು ಬೆಂಬಲಿಸುತ್ತದೆ ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ.
ಮೊದಲೆರಡು ಪಂದ್ಯಗಳಲ್ಲಿ ಆಡಿದ್ದ ಶ್ರೇಯಸ್ ಅಯ್ಯರ್ ಅವರು ಸರಣಿಗೆ ಆಯ್ಕೆಯಾಗಿಲ್ಲ. ಅವರು ಬೆನ್ನುನೋವಿನಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ.
ಗಾಯದ ಕಾರಣದಿಂದ ಎರಡನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ಕೆಎಲ್ ರಾಹುಲ್ ಮತ್ತು ರವೀಂದ್ರ ಜಡೇಜಾ ತಂಡಕ್ಕೆ ಮರಳಿದ್ದಾರೆ. ಆದರೆ ಅವರು ಫಿಟ್ನೆಸ್ ಸಾಬೀತು ಪಡಿಸಬೇಕಿದೆ. ಎರಡನೇ ಪಂದ್ಯಕ್ಕಾಗಿ ತಂಡಕ್ಕೆ ಬಂದಿದ್ದ ರಜತ್ ಪಾಟಿದಾರ್ ಮತ್ತು ಸರ್ಫರಾಜ್ ಖಾನ್ ರನ್ನು ಉಳಿಸಿಕೊಳ್ಳಲಾಗಿದೆ.
🚨 NEWS 🚨#TeamIndia‘s Squad for final three Tests against England announced.
Details 🔽 #INDvENG | @IDFCFIRSTBankhttps://t.co/JPXnyD4WBK
— BCCI (@BCCI) February 10, 2024
ಮೂರನೇ ಟೆಸ್ಟ್ ಫೆಬ್ರವರಿ 15 ರಂದು ರಾಜ್‌ಕೋಟ್ ನಲ್ಲಿ ಆರಂಭವಾಗಲಿದ್ದು, ನಾಲ್ಕನೇ ಟೆಸ್ಟ್ ಫೆಬ್ರವರಿ 23 ರಿಂದ ರಾಂಚಿಯಲ್ಲಿ ಪ್ರಾರಂಭವಾಗಲಿದೆ. ಸರಣಿಯ ಐದನೇ ಮತ್ತು ಅಂತಿಮ ಟೆಸ್ಟ್ ಮಾರ್ಚ್ 07 ರಿಂದ ಧರ್ಮಶಾಲಾದಲ್ಲಿ ನಡೆಯಲಿದೆ.
ತಂಡ: ರೋಹಿತ್ ಶರ್ಮಾ (ನಾ), ಜಸ್ಪ್ರೀತ್ ಬುಮ್ರಾ (ಉ.ನಾ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ಕೆಎಲ್ ರಾಹುಲ್*, ರಜತ್ ಪಾಟಿದಾರ್, ಸರ್ಫರಾಜ್ ಖಾನ್, ಧ್ರುವ್ ಜುರೆಲ್ (ವಿ.ಕೀ), ಕೆಎಸ್ ಭರತ್ (ವಿ.ಕೀ), ಆರ್. ಅಶ್ವಿನ್, ರವೀಂದ್ರ ಜಡೇಜಾ*, ಅಕ್ಸರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.