ಕಾಂಗ್ರೆಸ್ ಗೆ ವರ್ಗ ಮತ್ತು ಜಾತಿ ನಡುವಿನ ವ್ಯತ್ಯಾಸ ಗೊತ್ತಿಲ್ಲ: ರಾಹುಲ್ ಗೆ ಶಾ ತಿರುಗೇಟು
ಆ ಸಂದರ್ಭದಲ್ಲಿ ಮೋದಿ ಅವರು ಯಾವುದೇ ಹುದ್ದೆಯಲ್ಲಿ ಇರಲಿಲ್ಲವಾಗಿತ್ತು
Team Udayavani, Feb 10, 2024, 5:50 PM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಓಬಿಸಿಯಲ್ಲಿ ಹುಟ್ಟಿಲ್ಲ ಎಂಬ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿಕೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಹುಲ್ ಗಾಂಧಿ ಸತ್ಯವನ್ನು ತಿರುಚಿ, ಅನಗತ್ಯ ವಿವಾದ ಸೃಷ್ಟಿಸುತ್ತಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ:Bollywood; ರಾಕುಲ್ ಪ್ರೀತ್ ಸಿಂಗ್-ಜಾಕಿ ಭಗ್ನಾನಿ ಮದುವೆ ಡೇಟ್ ಫಿಕ್ಸ್
ಅವರು ಶನಿವಾರ (ಫೆ.10) 17ನೇ ಲೋಕಸಭೆಯ ಕೊನೆಯ ದಿನದ ಕಲಾಪದಲ್ಲಿ ಪಾಲ್ಗೊಂಡು ಮಾತನಾಡುತ್ತ, ರಾಹುಲ್ ಗಾಂಧಿಗೆ ಬಹಿರಂಗವಾಗಿ ಸುಳ್ಳು ಹೇಳೋದು ಅಭ್ಯಾಸವಾಗಿದೆ. ಸುಳ್ಳನ್ನು ಪದೇ, ಪದೇ ಹೇಳುತ್ತಿದ್ದಾರೆ. ಈಗ ಪ್ರಧಾನಿ ಮೋದಿ ಅವರ ಜಾತಿ ಬಗ್ಗೆ ಮಾತನಾಡುತ್ತಿದ್ದಾರೆ. ಬಹುಶಃ ಕಾಂಗ್ರೆಸ್ ಗೆ ವರ್ಗ ಮತ್ತು ಜಾತಿ ನಡುವಿನ ವ್ಯತ್ಯಾಸ ತಿಳಿದಿಲ್ಲ ಎಂಬ ಅನುಮಾನವಿದೆ. ಪ್ರಧಾನಿ ಮೋದಿ ತಾನು ಓಬಿಸಿ ಎಂದು ಹೇಳಿದ್ದು, ಓಬಿಸಿ ಎಂಬುದು ವರ್ಗ, ಜಾತಿಯಲ್ಲ ಎಂದು ಕಿಡಿಕಾರಿದರು.
ಕಾಂಗ್ರೆಸ್ ಜಾತಿಯನ್ನು ತಿರುಚಿದೆ:
ಪ್ರಧಾನಿ ನರೇಂದ್ರ ಮೋದಿ ಅವರು ಓಬಿಸಿಯಲ್ಲಿ ಹುಟ್ಟಿಲ್ಲ ಎಂಬ ರಾಹುಲ್ ಗಾಂಧಿ ಆರೋಪಕ್ಕೆ ಅಮಿತ್ ಶಾ ತಿರುಗೇಟು ನೀಡಿದ್ದು, ಕಾಂಗ್ರೆಸ್ ಪಕ್ಷಕ್ಕೆ ವರ್ಗ ಮತ್ತು ಜಾತಿ ನಡುವಿನ ವ್ಯತ್ಯಾಸ ತಿಳಿದಿಲ್ಲ. ಹೀಗಾಗಿ ಜನರಲ್ಲಿ ಗೊಂದಲ ಹುಟ್ಟಿಸುತ್ತಿದೆ ಎಂದರು.
ಓಬಿಸಿಗೆ ಮಾನ್ಯತೆ ಕೊಟ್ಟವರು ಯಾರು?
ಪ್ರಧಾನಿ ನರೇಂದ್ರ ಮೋದಿ ಅವರ ಸಮುದಾಯವನ್ನು ಓಬಿಸಿಗೆ ಸೇರಿಸಬೇಕೆಂದು 1994ರಲ್ಲಿ ಗುಜರಾತ್ ನ ಕಾಂಗ್ರೆಸ್ ನೇತೃತ್ವದ ಸರ್ಕಾರವೇ ಶಿಫಾರಸು ಮಾಡಿತ್ತು.. ಆ ಸಂದರ್ಭದಲ್ಲಿ ಮೋದಿ ಅವರು ಯಾವುದೇ ಹುದ್ದೆಯಲ್ಲಿ ಇರಲಿಲ್ಲವಾಗಿತ್ತು. ಓಬಿಸಿಗೆ ಮಾನ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ 2,000ನೇ ಇಸವಿಯಲ್ಲಿ ಕೋರಿತ್ತು. ಅದನ್ನು ಕೇಂದ್ರ ಸರ್ಕಾರ ಒಪ್ಪಿಕೊಂಡಿತ್ತು. ಮೋದಿಜೀಯವರ (ಜಾಟಿ) ಸಮುದಾಯವನ್ನು ಓಬಿಸಿಗೆ ಸೇರಿಸಬೇಕೆಂದು 1994ರ ಜುಲೈ 25ರಂದು ಶಿಫಾರಸು ಮಾಡಿತ್ತು. ಆ ಸಂದರ್ಭದಲ್ಲಿ ಕಾಂಗ್ರೆಸ್ ನ ಛಬೀಲ್ ದಾಸ್ ಮೆಹ್ತಾ ಗುಜರಾತ್ ಮುಖ್ಯಮಂತ್ರಿಯಾಗಿದ್ದರು. ಆಗ ಮೋದಿಜೀಯವರು ಯಾವ ಚುನಾವಣೆಗೂ ಸ್ಪರ್ಧಿಸಿರಲಿಲ್ಲವಾಗಿತ್ತು. ಬಹುಶಃ ಅವರು ಪಕ್ಷಕ್ಕಾಗಿ ದುಡಿಯುತ್ತಿದ್ದರು. 2001ರಲ್ಲಿ ಮೋದಿಜೀಯವರು ಗುಜರಾತ್ ಮುಖ್ಯಮಂತ್ರಿಯಾಗಿದ್ದರು ಎಂದು ಸಚಿವ ಅಮಿತ್ ಶಾ ಪುರಾವೆ ಸಹಿತ ಕಾಂಗ್ರೆಸ್ ಗೆ ತಿರುಗೇಟು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.