ಮಂಗನ ಕಾಯಿಲೆಗೆ ಹೊಸ ವ್ಯಾಕ್ಸಿನ್; ಐಸಿಎಂಆರ್ ಒಪ್ಪಿಗೆ: ಸಚಿವ ದಿನೇಶ್ ಗುಂಡೂರಾವ್

ಮಾರ್ಚ್ ವರೆಗೆ ಜನ ಬಹಳ ಎಚ್ಚರಿಕೆಯಿಂದ ಇರಬೇಕು...

Team Udayavani, Feb 10, 2024, 6:57 PM IST

1-qewqeqw

ಉಡುಪಿ: ಮಂಗನ ಕಾಯಿಲೆಗೆ ಹೊಸ ವ್ಯಾಕ್ಸಿನ್ ಕುರಿತು ಐಸಿಎಂಆರ್ ಜತೆ ಚರ್ಚೆ ನಡೆಸಲಾಗಿದ್ದು, ತಯಾರಿಕೆಗೆ ಒಪ್ಪಿಗೆ ಸೂಚಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಉಡುಪಿಯಲ್ಲಿ ಶನಿವಾರ ಮಂಗನ ಕಾಯಿಲೆ ನಿಯಂತ್ರಣ ಕುರಿತಂತೆ ಆರೋಗ್ಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ ಸಚಿವರು, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಮಳೆಗಾಲ ಆರಂಭ ಮತ್ತು ಅಂತ್ಯದಲ್ಲಿ ಮಂಗನ ಕಾಯಿಲೆ ಹೆಚ್ಚಳವಾಗುತ್ತದೆ.‌ ಮಾರ್ಚ್ ವರೆಗೆ ಜನ ಬಹಳ ಎಚ್ಚರಿಕೆಯಿಂದ ಇರಬೇಕು. ಲಕ್ಷಣಗಳು ಬಂದ ಕೂಡಲೇ ಚಿಕಿತ್ಸೆ ಪಡೆದುಕೊಳ್ಳಲು ಮುಂದಾಗಬೇಕು ಎಂದರು.‌

ಮಂಗನ ಕಾಯಿಲೆಗೆ ಎಬಿಎಆರ್ ಕೆ ಫಂಡ್ ನಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲು ಈಗಾಗಲೇ ಸೂಚಿಸಲಾಗಿದೆ. ಅಲ್ಲದೇ ಕೆ.ಎಫ್.ಡಿ ಪಾಸಿಟಿವ್ ಬಂದವರನ್ನ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲು ಕಡ್ಡಾಯಗೊಳಿಸಲಾಗಿದೆ ಎಂದರು.

ರಾಜ್ಯದಲ್ಲಿ ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಹೆಚ್ಚಾಗಿ ಕಾಣಿಸಿಕೊಂಡಿದ್ದು, ಒಟ್ಟು 70 ಕೆಎಫ್ ಡಿ ಪ್ರಕರಣ ದಾಖಲಾಗಿವೆ. ಹಲವರು ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. 20 ಸಕ್ರಿಯ ಪ್ರಕರಣಗಳು ಇವೆ. 2 ಸಾವಾಗೀಡಾಗಿದ್ದು, ಇಬ್ಬರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾವಿಗೀಡಾದ ಕುಟುಂಬಗಳಿಗೆ ಪರಿಹಾರ ನೀಡುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ಮಾಡುವುದಾಗಿ ತಿಳಿಸಿದರು.

ಸಾವು ಆಗದೆ ಇರುವ ಬಗ್ಗೆ ಮುನ್ನೆಚ್ಚರಿಕೆ ಕಾರ್ಯಕ್ರಮ ಕೈಗೊಳ್ಳುಲು ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹಿಂದೆ ಇರುವ ವ್ಯಾಕ್ಸಿನ್ ಬಳಕೆ ಮಾಡಬೇಡಿ ಎಂದು ಸೂಚಿಸಲಾಗಿದೆ. ಹೊಸ ವ್ಯಾಕ್ಸಿನ್ ಬಗ್ಗೆ ಐಸಿಎಂಆರ್ ಜೊತೆ ಚರ್ಚೆ ನಡೆಸಲಾಗಿದೆ. ಐಸಿಎಂಆರ್ ನವರು ವ್ಯಾಕ್ಸಿನ್ ತಯಾರಿಕೆಗೆ ಒಪ್ಪಿಗೆ ನೀಡಿದ್ದು, ಹೈದರಾಬಾದ್ ಸಂಸ್ಥೆ ಸಂಶೋಧನೆ ಮಾಡಿ ವ್ಯಾಕ್ಸಿನ್ ತಯಾರಿಸುತ್ತದೆ. ಮುಂದಿನ ವರ್ಷಕ್ಕೆ ಮಂಗನ ಕಾಯಿಲೆಗೆ ಒಳ್ಳೆಯ ಚುಚ್ಚುಮದ್ದು ಸಿಗಬಹುದು ಎಂದು ಭರವಸೆ ನೀಡಿದರು.

ಉಣ್ಣೆ ಕಡಿತವನ್ನು ತಡೆಗಟ್ಟಲು ಬಳಸಲಾಗುವ DEPA ತೈಲವನ್ನು ಸಾರ್ವಜನಿಕರಿಗೆ ಬಳಸಲು ಉಚಿತವಾಗಿ ನೀಡಲಾಗಿದೆ. ರಾಜ್ಯಮಟ್ಟದಿಂದ ಈವರೆಗೆ 62794 DEPA ಬಾಟಲ್ ಗಳನ್ನು ವಿತರಿಲಾಗಿದೆ. ರಾಜ್ಯ ಮಟ್ಟದಿಂದ ಅಧಿಕಾರಿಗಳು, RRT ತಂಡ ನಿಯಮಿತವಾಗಿ ಭೇಟಿ ನೀಡುತ್ತಿದ್ದು ಸಮಯೋಚಿತ ಮಾರ್ಗದರ್ಶನವನ್ನು ನೀಡುತ್ತಿದ್ದಾರೆ. ಪ್ರತಿ ದಿನ ವಿ.ಸಿ. ಮುಖೇನ ಸದರಿ ಕಾರ್ಯ ಚಟುವಟಿಕೆಗಳ ಮೇಲ್ವಿಚಾರಣೆಯನ್ನು ನಡೆಸಲಾಗುತ್ತಿದೆ. VDL ಶಿವಮೊಗ್ಗ ಮತ್ತು MIV ಮಣಿಪಾಲದಲ್ಲಿನ ಪ್ರಯೋಗಾಲಯಗಳನ್ನು KFD ಪರೀಕ್ಷೆಗೆ ಗುರುತಿಸಲಾಗಿದ್ದು, ಶೀಘ್ರವಾಗಿ ಮಾದರಿಗಳನ್ನು ಸಂಸ್ಕರಿಸಿ ಪರೀಕ್ಷೆ ನಡೆಸಿ ವರದಿ ನೀಡಲಾಗುತ್ತಿದೆ ಎಂದು ವಿವರ ನೀಡಿದರು.

KFD ಪಾಸಿಟಿವ್ ಪ್ರಕರಣಗಳನ್ನು ಮನೆಯಿಂದ ಆಸ್ಪತ್ರೆಗೆ ಸಾಗಿಸಲು ಮತ್ತು ಅಗತ್ಯವಿದ್ದರೆ, ಉನ್ನತ ರೆಫರಲ್ ಸೆಂಟರ್‌ ನಾಗಿಸಲು ಉಚಿತ ಆಂಬ್ಯುಲೆನ್ಸ್ ಸೌಲಭ್ಯ ಒದಗಿಸಿದೆ. ರೋಗ ಪ್ರಸರಣಾ ಋತುವಿನಲ್ಲಿ ತಾಲೂಕು ಆಸ್ಪತ್ರೆಗಳಾದ ಜಿಸಿಎಚ್ ತೀರ್ಥಹಳ್ಳಿ, ಸಾಗರ, ಸಿದ್ದಾಪುರ ಮತ್ತು ಹೊನ್ನಾವರ ಉಪ ವಿಭಾಗೀಯ ಆಸ್ಪತ್ರೆಗಳಲ್ಲಿ KFD ಗೆ ಚಿಕಿತ್ಸೆ ನೀಡಲು ಹಾಸಿಗೆಗಳನ್ನು ಮೀಸಲಿರಿಸಲಾಗಿದೆ. ICU ನಲ್ಲಿ ದಾಖಲಾಗಿರುವ ರೋಗಿಗಳ ಆರೋಗ್ಯ ಸ್ಥಿತಿ-ಗತಿಯನ್ನು ಪ್ರತಿದಿನ ಪರೀಶೀಲಿಸಲು ಟೆಲಿ-ICU ಸೇವೆಯನ್ನು KFD ಗೂ ವಿಸ್ತರಿಸಲಾಗಿದೆ ಎಂದು ಆರೋಗ್ಯ ಇಲಾಖೆ ಕೈಗೊಂಡ ಕ್ರಮಗಳ ಕುರಿತು ವಿವರಿಸಿದರು.

ಟಾಪ್ ನ್ಯೂಸ್

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

CM DCM

Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

vijayen

BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫ‌ಲ: ವಿಜಯೇಂದ್ರ ಮೇಲೂ ಪರಿಣಾಮ?

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.