High Court ; ಅತ್ಯಾಚಾರ; ಎಂಜಿನಿಯರ್‌ಗೆ 7 ವರ್ಷ ಜೈಲು
ಬಂಟ್ವಾಳ, ಕುಂದಾಪುರದಲ್ಲೂ ಕರ್ತವ್ಯ ನಿರ್ವಹಿಸಿದ್ದ
Team Udayavani, Feb 11, 2024, 12:24 AM IST
ಬೆಂಗಳೂರು: ಮದುವೆ ಆಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿರುವ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪೆನಿ (ಹೆಸ್ಕಾಂ) ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಆಗಿರುವ ಕುಂದಾಪುರದ ಬೆಟಕೇರಿ ನಿವಾಸಿ ರಾಕೇಶ್ ಬಿ. ಗೆ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಹೈಕೋರ್ಟ್ ಆದೇಶಿಸಿದೆ.
ಕುಮಟಾದಲ್ಲಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದ ರಾಕೇಶ್ ಬಿ. ತನ್ನ ನೆರೆಯ ಬಿಇಡಿ ಓದುತ್ತಿದ್ದ ಯುವತಿಯ ಜತೆ ಪ್ರೇಮ ಸಂಬಂಧ ಹೊಂದಿದ್ದ. ಆ ಬಳಿಕ ಬಂಟ್ವಾಳ ಮತ್ತು ತದನಂತರ ಕುಂದಾಪುರಕ್ಕೆ ವರ್ಗಾವಣೆಗೊಂಡಿದ್ದ. 2015ರಲ್ಲಿ ಕುಂದಾಪುರದಲ್ಲಿ ಸೇವೆ ಸಲ್ಲಿಸುತ್ತಿದ್ದಾಗ ಯುವತಿಯನ್ನು ಕುಂದಾಪುರಕ್ಕೆ ಕರೆಸಿಕೊಂಡಿದ್ದ ರಾಕೇಶ್, ಯುವತಿಯ ಒಪ್ಪಿಗೆ ಪಡೆಯದೆ ದೈಹಿಕ ಸಂಪರ್ಕ ಬೆಳೆಸಿದ್ದ. ರಾಕೇಶ್ ವಿರುದ್ಧ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು.
ಕುಂದಾಪುರ ನ್ಯಾಯಾಲಯ ರಾಕೇಶ್ ಬಿ.ಯನ್ನು ದೋಷಮುಕ್ತಗೊಳಿಸಿತ್ತು. ಆದರೆ ಇದನ್ನು ಪ್ರಶ್ನಿಸಿ ಯುವತಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾ| ಪ್ರಭಾಕರ ಶಾಸಿŒ, ನ್ಯಾ| ಉಮೇಶ್ ಅಡಿಗ ಅವರನ್ನು ಒಳಗೊಂಡಿದ್ದ ದ್ವಿಸದಸ್ಯ ನ್ಯಾಯಪೀಠ, ರಾಕೇಶ್ ಬಿ. ದೋಷಿ ಎಂದು ತೀರ್ಪಿತ್ತಿದೆ.
ರಾಕೇಶ್‌ಗೆ 7 ವರ್ಷಗಳ ಸಜೆ, 50 ಸಾವಿರ ರೂ ದಂಡ, ದಂಡ ಕಟ್ಟಲು ವಿಫಲವಾದರೆ ಮತ್ತೆ 6 ತಿಂಗಳ ಜೈಲು ಶಿಕ್ಷೆ ಪ್ರಕಟಿಸಿದೆ. ಮೋಸ ಸಾಬೀತಾದ ಹಿನ್ನೆಲೆಯಲ್ಲಿ 6 ತಿಂಗಳ ಜೈಲು ಶಿಕ್ಷೆ ನೀಡಲಾಗಿದ್ದು, ಶಿಕ್ಷೆಯನ್ನು ಏಕಕಾಲದಲ್ಲಿ ಅನುಭವಿಸಬೇಕು ಎಂದು ಕೋರ್ಟ್ ಹೇಳಿದೆ. ದಂಡದಲ್ಲಿ 45 ಸಾವಿರ ರೂ ಸಂತ್ರಸ್ತೆಗೆ ಮತ್ತು 5 ಸಾವಿರ ರೂಗಳನ್ನು ರಾಜ್ಯ ಸರಕಾರಕ್ಕೆ ಪಾವತಿಸಬೇಕು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು ಸಂತ್ರಸ್ತೆಗೆ ಪಾವತಿಸಬೇಕಾದ ಪರಿಹಾರ ಮೊತ್ತದ ಬಗ್ಗೆ ಆರು ತಿಂಗಳೊಳಗೆ ತೀರ್ಮಾನ ಕೈಗೊಳ್ಳಬೇಕು, ರಾಕೇಶ್ 45 ದಿನದೊಳಗೆ ಸೆಷನ್ಸ್ ನ್ಯಾಯಾಧೀಶರ ನ್ಯಾಯಾಲಯದ ಮುಂದೆ ಹಾಜರಾಗಬೇಕು ಎಂದು ಹೈಕೋರ್ಟ್ ಆದೇಶಿಸಿದೆ. ಪ್ರಕರಣದಲ್ಲಿ ಕುಂದಾಪುರದ ವಕೀಲ ರವಿಕಿರಣ ಮುಡೇಶ್ವರ್ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಮತ್ತು ಸಂತ್ರಸ್ತ ಯುವತಿ ಪರ ಹರೀಶ್ ಟಿ. ಭಂಡಾರಿ ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.