Belthangady; ಭಾರತೀಯತೆ ಸಂಪೂರ್ಣ ಒಪ್ಪಿಕೊಂಡವರು ಕ್ರೈಸ್ತರು: ಡಾ| ಹೆಗ್ಗಡೆ
ಬೆಳ್ತಂಗಡಿ ಧರ್ಮಪ್ರಾಂತ ಸ್ಥಾಪನೆಯ ಬೆಳ್ಳಿ ಹಬ್ಬದ ಸಂಭ್ರಮ
Team Udayavani, Feb 11, 2024, 11:34 PM IST
ಬೆಳ್ತಂಗಡಿ: ಕೇರಳದಿಂದ ಕರ್ನಾಟಕಕ್ಕೆ ಬಂದು ನೆಲೆನಿಂತ ಸಿರಿಯನ್ ಕಥೋಲಿಕ್ ಕ್ರೈಸ್ತ ಸಮುದಾಯ ಅನೇಕ ಸವಾಲುಗಳ ನಡುವೆ ಉದ್ಯೋಗ, ಶಿಕ್ಷಣ ಮತ್ತು ಉದ್ಯಮ ಕ್ಷೇತ್ರದ ಪ್ರಗತಿಗೆ ಕಾರಣರಾದರು. ಭಾರತದಲ್ಲಿ ಭಾರತೀಯತೆಯನ್ನು ಸಂಪೂರ್ಣವಾಗಿ ಒಪ್ಪಿಕೊಂಡ ಸಮಾಜವಿದ್ದರೆ ಅದು ಕ್ರೈಸ್ತ ಸಮುದಾಯ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.
ಕರ್ನಾಟಕದ ಪ್ರಥಮ ಸೀರೋ ಮಲಬಾರ್ ಧರ್ಮಪ್ರಾಂತವಾದ ಬೆಳ್ತಂಗಡಿ ಧರ್ಮಪ್ರಾಂತದ 25 ವರ್ಷ ಸಂಭ್ರಮ ಹಾಗೂ ಪ್ರಥಮ ಧರ್ಮಾಧ್ಯಕ್ಷರಾಗಿ ನೇಮಕಗೊಂಡ ಬಿಷಪ್ ರೈ| ರೆ| ಡಾ| ಲಾರೆನ್ಸ್ ಮುಕ್ಕುಯಿ ಯವರ ಧರ್ಮಾಧ್ಯಕ್ಷ ದೀಕ್ಷೆಯ ರಜತ ಮಹೋತ್ಸವದಲ್ಲಿ ಅವರು ಮಾತನಾಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಕಳೆದ ಅನೇಕ ದಶಕಗಳಿಂದ ಸರ್ವಧರ್ಮ ಸಮ್ಮೇಳನ ನಡೆಸುತ್ತ¤ ಬಂದಿದ್ದೇವೆ. ಕಳೆದ 25 ವರ್ಷಗಳಿಂದ ಸಮಾಜದಲ್ಲಿ ಶಾಂತಿ, ಸೌಹಾರ್ದತೆ, ಪ್ರೀತಿ ಬೆಳೆಸಿದ ಬೆಳ್ತಂಗಡಿ ಧರ್ಮಪ್ರಾಂತ ಹಾಗೂ ಬಿಷಪ್ ಅವರ ಸೇವೆಯನ್ನು ಅವರು ಶ್ಲಾಘಿಸಿದರು.
ಧರ್ಮವನ್ನು ದೂಷಿಸಬೇಡಿ
ಪ್ರಜಾಪ್ರಭುತ್ವ ಎಲ್ಲರಿಗೂ ಸಮಾನ ಹಕ್ಕು ನೀಡಿದೆೆ. ರಾಜ್ಯ ಸರಕಾರ ಎಲ್ಲ ಧರ್ಮ ಜಾತಿಯವರಿಗಾಗಿ 5 ಗ್ಯಾರಂಟಿ ನೀಡಿದೆ ಎಂದರು.
ಎಲ್ಲರಿಗೂ ಮಾದರಿ
ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಮಾತನಾಡಿ, ಕಳೆದ 25 ವರ್ಷಗಳ ಹಿಂದೆ ಯಾವುದೇ ಮೂಲ ಸೌಕರ್ಯವಿಲ್ಲದ ಕಾಲದಲ್ಲಿ ಬೆಳ್ತಂಗಡಿ ಧರ್ಮಪ್ರಾಂತ ರಚನೆಯಾಗಿ ಎಲ್ಲ ವರ್ಗದ ಜನರಿಗೆ ಎಲ್ಲ ರೀತಿಯ ಸೇವೆ ಮಾಡಿ ಬದುಕು ಬೆಳಗಿರುವುದು ಮುಂದಿನ ದಿನಗಳಲ್ಲಿ ದಿಕ್ಸೂಚಿಯಾಗಿದೆ ಎಂದರು.
ಸಿರೋ ಮಲಬಾರ್ ಕೆಥೋಲಿಕ್ ಚರ್ಚ್‌ನ ಮೇಜರ್ ಆರ್ಚ್ ಬಿಷಪ್ ರೈ| ರೆ| ಡಾ| ರಾಫಾಯಲ್ ತಟ್ಟಿಲ್ ಕಾರ್ಯಕ್ರಮ ಉದ್ಘಾಟಿಸಿ, ಬಡವರ್ಗದ ಮತ್ತು ದೀನ ದಲಿತರನ್ನು ಮುಖ್ಯವಾಹಿನಿಗೆ ತರುವುದು ಧರ್ಮಪ್ರಾಂತದ ಮುಖ್ಯ ಗುರಿಯಾಗಿದೆ ಎಂದರು.
ತಲಚೇರಿಯ ಆರ್ಚ್ ಬಿಷಪ್ ರೈ| ರೆ| ಜೋಸೆಪ್ ಪಾಂಪ್ಲಾನಿ ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ಹರೀಶ್ ಪೂಂಜ, ಅಶೋಕ್ ಕುಮಾರ್ ರೈ, ಬೆಂಗಳೂರಿನ ಆರ್ಚ್ ಬಿಷಪ್ ರೈ| ರೆ| ಪೀಟರ್ ಮಚಾಡೋ, ಮಂಗಳೂರಿನ ಬಿಷಪ್ ರೈ| ರೆ| ಡಾ| ಪೀಟರ್ ಪೌಲ್ ಸಲ್ದಾನ ಶುಭಹಾರೈಸಿದರು.
ಕೊಟ್ಟಯಾಂನ ಆರ್ಚ್ ಬಿಷಪ್ ರೈ| ರೆ| ಮ್ಯಾಥ್ಯೂ ಮೂಲಕ್ಕಟ್, ಬ್ರಹ್ಮಾವರ ಬಿಷಪ್ ರೈ| ರೆ| ಜೋಕಬ್ ಮಾರ್ ಎಲಿಯಾಸ್, ಪುತ್ತೂರು ಬಿಷಪ್ ರೈ| ರೆ| ಗೀವರ್ಗೀಸ್ ಮಕೋರಿಸ್, ಮಾಜಿ ಸಚಿವರಾದ ರಮಾನಾಥ ರೈ, ವಿನಯಕುಮಾರ್ ಸೊರಕೆ, ಕೆ. ಗಂಗಾಧರ ಗೌಡ, ವಿ.ಪ.ಸದಸ್ಯರಾದ ಕೆ.ಹರೀಶ್ ಕುಮಾರ್, ಕೆ. ಪ್ರತಾಪಸಿಂಹ ನಾಯಕ್, ಕ್ರೈಸ್ತ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಜೆ.ಆರ್.ಲೋಬೋ, ಮಾಜಿ ಎಂಎಲ್‌ಸಿ ಐವನ್ ಡಿ’ಸೋಜಾ ಇತರರು ಉಪಸ್ಥಿತರಿದ್ದರು.
ಧರ್ಮಪ್ರಾಂತದಿಂದ 25 ಬಡ ಕುಟುಂಬಗಳಿಗೆ ಕಟ್ಟಿಕೊಟ್ಟ ಮನೆಯ ಕೀಲಿಕೈಯನ್ನು ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಹಸ್ತಾಂತರಿಸಿದರು. ಬೆಳಗ್ಗೆ 8.45ಕ್ಕೆ ಕೃತಜ್ಞತಾ ದಿವ್ಯಬಲಿಪೂಜೆ ನಡೆಯಿತು. ಧರ್ಮಪ್ರಾಂತದ ವಿಕಾರ್ ಜನರಲ್ ಜೋಸೆಫ್ ವಲಿಯಪರಂಬಿಲ್ ಸ್ವಾಗತಿಸಿದರು. ಲಿಲ್ಲಿ ಆ್ಯಂಟನಿವಂದಿಸಿ, ಫಾ| ಜೋಬಿ ಪಲ್ಲಟ್ ಹಾಗೂ ಏಂಜಲ್ ಉಡುಪಿ ನಿರೂಪಿಸಿದರು.
ಎಲ್ಲ ವರ್ಗದ ಜನರ ಉದಾತ್ತ ಅಭಿಮಾನ ಸಿಕ್ಕಿದೆ
ಧರ್ಮಪ್ರಾಂತದ ಧರ್ಮಗುರುಗಳಾಗಿ 25 ವರ್ಷ ಪೂರೈಸಿದ ಬಿಷಪ್ ರೈ| ರೆ| ಲಾರೆನ್ಸ್ ಮುಕ್ಕುಯಿ ಅಭಿನಂದನೆ ಸ್ವೀಕರಿಸಿ ಮಾತನಾಡಿ, ದೇವರ ಅಪಾರವಾದ ಆಶೀರ್ವಾದದಿಂದ ಸಮಾಜದ ಅಭಿವೃದ್ಧಿಗೆ ಅಳಿಲು ಸೇವೆಯನ್ನು ಮಾಡುವ ಪ್ರಯತ್ನ ಮಾಡಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.