HSRP ಅಳವಡಿಕೆ: ಗಡುವು ವಿಸ್ತರಣೆ ಅನಿವಾರ್ಯ

Team Udayavani, Feb 12, 2024, 6:20 AM IST

1-ssdad

ರಾಜ್ಯದಲ್ಲಿ 2019ರ ಎ.1ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫ‌ಲಕ(ಎಚ್‌ಎಸ್‌ಆರ್‌ಪಿ)ಅಳವಡಿಕೆಯನ್ನು ಕಡ್ಡಾಯಗೊಳಿಸಿ ರಾಜ್ಯದ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ಕಳೆದ ವರ್ಷದ ಆಗಸ್ಟ್‌ 18ರಂದು ಆದೇಶ ಹೊರಡಿಸಿದ್ದರು. ಆರಂಭದಲ್ಲಿ ಎಚ್‌ಎಸ್‌ಆರ್‌ಪಿ ಅಳವಡಿಕೆಗೆ 2023ರ ನವೆಂಬರ್‌ 17ರ ವರೆಗೆ ವಾಹನ ಮಾಲಕರಿಗೆ ಗಡುವು ನೀಡಲಾಗಿದ್ದರೂ ಆ ಬಳಿಕ ಈ ಗಡುವನ್ನು 2024ರ ಫೆ. 17ರ ವರೆಗೆ ವಿಸ್ತರಿಸಲಾಗಿತ್ತು. ಆದರೆ ಸಾರಿಗೆ ಇಲಾಖೆ ಮತ್ತು ವಾಹನ ಮಾಲಕರ ನಿರಾಸಕ್ತಿಯ ಪರಿಣಾಮ ಎಚ್‌ಎಸ್‌ಆರ್‌ಪಿ ಅಳವಡಿಕೆ ಪ್ರಕ್ರಿಯೆ ತೀರಾ ನಿಧಾನಗತಿಯಲ್ಲಿ ಸಾಗಿತ್ತು. ಈಗ ಗಡುವು ಸಮೀಪಿಸುತ್ತಿದ್ದಂತೆಯೇ ವಾಹನಗಳ ಮಾಲಕರು ಎಚ್‌ಎಸ್‌ಆರ್‌ಪಿ ಅಳವಡಿಕೆಗಾಗಿ ಮುಗಿ ಬೀಳಲಾರಂಭಿಸಿದ್ದು ಸಹಜವಾಗಿಯೇ ಹತ್ತು ಹಲವು ತಾಂತ್ರಿಕ ಸಮಸ್ಯೆಗಳು ಕಾಣಿಸಿಕೊಳ್ಳಲಾರಂಭಿಸಿವೆ.

ನಿಗದಿತ ದಿನದೊಳಗಾಗಿ ತಮ್ಮ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಕೆ ಕಷ್ಟಸಾಧ್ಯವಾಗಿರುವುದರಿಂದ ಎಲ್ಲಿ ದಂಡ ತೆರಬೇಕಾದ ಅನಿವಾರ್ಯತೆ ಸೃಷ್ಟಿಯಾಗುವುದೋ ಎಂಬ ಆತಂಕ ವಾಹನ ಮಾಲಕರನ್ನು ಕಾಡತೊಡಗಿದೆ.
ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಕೆ ಸಂಬಂಧ ಆದೇಶ ಹೊರಡಿಸಿ 6 ತಿಂಗಳುಗಳೇ ಕಳೆದಿದ್ದರೂ ವಾಹನ ಮಾಲಕರು ಎಚ್ಚೆತ್ತುಕೊಳ್ಳದಿ ದ್ದುದು ಅವರ ನಿರ್ಲಕ್ಷ್ಯ ಧೋರಣೆಗೆ ಹಿಡಿದ ಕನ್ನಡಿ ಎನ್ನಲಡ್ಡಿಯಿಲ್ಲ. ಇದೇ ವೇಳೆ ಸಾರಿಗೆ ಅಧಿಕಾರಿಗಳು ಕೂಡ ಈ ವಿಷಯದಲ್ಲಿ ಆದೇಶ ಹೊರಡಿಸುವುದಷ್ಟೇ ತಮ್ಮ ಜವಾಬ್ದಾರಿ ಎಂಬ ನಿರ್ಧಾರಕ್ಕೆ ಬಂದಂತೆ ತೋರುತ್ತಿದೆ. ಎಚ್‌ಎಸ್‌ಆರ್‌ಪಿ ಅಳವಡಿಕೆ ವಿಷಯದಲ್ಲಿ ಸಾರಿಗೆ ಇಲಾಖೆ ಹೆಚ್ಚಿನ ಆಸ್ಥೆ ವಹಿಸದಿರುವುದರಿಂದಾಗಿಯೇ ಈಗ ಗಡುವು ಸಮೀಪಿಸುತ್ತಿರುವಾಗ ವಾಹನಗಳ ಮಾಲಕರು ಎಚ್‌ಎಸ್‌ಆರ್‌ಪಿ ಅಳವಡಿಕೆಗಾಗಿ ಕಸರತ್ತು ಮಾಡಬೇಕಾದ ಪರಿಸ್ಥಿತಿ ಬಂದೊದಗಿದೆ. ಆದೇಶ ಹೊರಡಿಸಿದ ಬಳಿಕ ಫ‌ಲಕ ಅಳವಡಿಕೆ ಪ್ರಕ್ರಿಯೆ ಮೇಲೆ ನಿಗಾ ಇರಿಸಿ, ಕಾಲಕಾಲಕ್ಕೆ ಸಂಬಂಧಿತರಿಗೆ ಸೂಕ್ತ ನಿರ್ದೇಶನಗಳನ್ನು ನೀಡುತ್ತಿದ್ದಲ್ಲಿ ಇಷ್ಟೊಂದು ಸಮಸ್ಯೆಗಳು ತಲೆದೋರುತ್ತಿರಲಿಲ್ಲ. ಇನ್ನು ಸಾರ್ವಜನಿಕರಂತೂ ಎಂದಿನಂತೆ ಯುದ್ಧ ಕಾಲದಲ್ಲಿ ಶಸ್ತ್ರಾಭ್ಯಾಸದಲ್ಲಿ ತೊಡಗಿಕೊಳ್ಳುವ ಸಂಪ್ರದಾಯ ಈ ವಿಷಯದಲ್ಲೂ ಮುಂದುವರಿದಿರುವುದು ಸ್ಪಷ್ಟ.

ಲಕ್ಷಾಂತರ ಸಂಖ್ಯೆಯಲ್ಲಿ ವಾಹನಗಳ ಮಾಲಕರು ಪ್ರತೀದಿನ ಎಚ್‌ಎಸ್‌ಆರ್‌ಪಿ ಅಳವಡಿಕೆಗಾಗಿ ಆನ್‌ಲೈನ್‌ ನೋಂದಣಿಗೆ ಮುಗಿ ಬೀಳುತ್ತಿರುವ ಪರಿಣಾಮ ಸರ್ವರ್‌ ಮೇಲೆ ಇನ್ನಿಲ್ಲದ ಒತ್ತಡ ಬಿದ್ದು ಸ್ಥಗಿತಗೊಳ್ಳುತ್ತಿದೆ. ಎಚ್‌ಎಸ್‌ಆರ್‌ಪಿ ಅಳವಡಿಕೆ ಪ್ರಕ್ರಿಯೆ ವಿಳಂಬಗೊಳ್ಳುತ್ತಲೇ ವಾಹನಗಳ ಮಾಲಕರು ಸರಕಾರಕ್ಕೆ ಹಿಡಿಶಾಪ ಹಾಕಲಾರಂಭಿಸಿದ್ದು, ಎಂದಿನಂತೆ ವ್ಯವಸ್ಥೆಯನ್ನು ದೂರುವ ಪರಿಪಾಠಕ್ಕೆ ಜೋತು ಬಿದ್ದಿದ್ದಾರೆ. 1.65 ಕೋಟಿಗೂ ಅಧಿಕ ವಾಹನಗಳು ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ಬಾಕಿ ಉಳಿದುಕೊಂಡಿದ್ದು, ಈ ಪ್ರಕ್ರಿಯೆ ಪೂರ್ಣಗೊಳ್ಳಲು ಇನ್ನೂ ಸಾಕಷ್ಟು ಕಾಲಾವಕಾಶದ ಅಗತ್ಯವಿದೆ. ಇನ್ನಾದರೂ ಸಾರಿಗೆ ಇಲಾಖೆ ಮತ್ತು ವಾಹನಗಳ ಮಾಲಕರು ಎಚ್ಚೆತ್ತುಕೊಂಡು ತ್ವರಿತಗತಿಯಲ್ಲಿ ಎಚ್‌ಎಸ್‌ಆರ್‌ಪಿ ಅಳವಡಿಕೆ ಪ್ರಕ್ರಿಯೆಯನ್ನು ಸಲೀಸಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಪರಸ್ಪರ ಸಹಕಾರ ಮನೋಭಾವದಿಂದ ಕಾರ್ಯನಿರ್ವಹಿಸುವ ಅಗತ್ಯವಿದೆ. ಇದಕ್ಕಾಗಿ ಫ‌ಲಕ ಅಳವಡಿಕೆಯ ಗಡುವನ್ನು ಕನಿಷ್ಠ ಒಂದು ತಿಂಗಳ ಮಟ್ಟಿಗಾದರೂ ವಿಸ್ತರಿಸುವ ಮೂಲಕ ಸರ್ವರ್‌ ಮೇಲಣ ಒತ್ತಡವನ್ನು ಕಡಿಮೆ ಮಾಡಿ, ತಾಂತ್ರಿಕ ಸಮಸ್ಯೆಗಳಿಂದ ಮುಕ್ತವಾಗಿಸಬೇಕು. ಇದೇ ವೇಳೆ ಸಾರ್ವಜನಿಕರು, ಇನ್ನೂ ಒಂದು ತಿಂಗಳ ಕಾಲಾವಕಾಶ ಇದೆ ಎಂದು ಕೈಕಟ್ಟಿ ಕುಳಿತುಕೊಳ್ಳದೆ ತಮ್ಮ ಜವಾಬ್ದಾರಿಯನ್ನು ಅರಿತುಕೊಂಡು ಆದಷ್ಟು ಬೇಗ ತಮ್ಮ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ಮುಂದಾಗಬೇಕು.

ಟಾಪ್ ನ್ಯೂಸ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Editorial: ನೈಜ ಕ್ರೀಡಾ ಸಾಧಕರಿಗೆ ಸಂದ ದೇಶದ ಅತ್ಯುನ್ನತ ಕ್ರೀಡಾ ಗೌರವ

Government Transport: ಸರಕಾರಿ ಸಾರಿಗೆ ಸಂಸ್ಥೆಗಳಿಗೆ ಬೇಕಿದೆ ಸುಧಾರಣ ಚಿಕಿತ್ಸೆ

Government Transport: ಸರಕಾರಿ ಸಾರಿಗೆ ಸಂಸ್ಥೆಗಳಿಗೆ ಬೇಕಿದೆ ಸುಧಾರಣ ಚಿಕಿತ್ಸೆ

2025; May the mantra of peace and coexistence resonate throughout the world

Editorial; ಜಗತ್ತಿನೆಲ್ಲೆಡೆ ಅನುರಣಿಸಲಿ ಶಾಂತಿ, ಸಹಬಾಳ್ವೆಯ ಮಂತ್ರ

Exam

ಕೆಪಿಎಸ್‌ಸಿ ಲೋಪಗಳಿಲ್ಲದಂತೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಿ

JAmmu

Jammu-Kashmir: ಉಗ್ರರನ್ನು ಮಟ್ಟ ಹಾಕಿದ‌ ಭದ್ರತಾ ಪಡೆಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.