Karnataka: ಲೋಕ ಚುನಾವಣೆವರೆಗೆ ಕೈ ಕಾರ್ಯಕರ್ತರಿಗೆ ಇಲ್ಲ ನಿಗಮ
ವಿಧಾನಸಭೆ ಅಧಿವೇಶನ ಬಳಿಕ ನೀತಿಸಂಹಿತೆ ಜಾರಿ ಆತಂಕ
Team Udayavani, Feb 12, 2024, 1:09 AM IST
ಬೆಂಗಳೂರು: ನಿಗಮ ಮಂಡಳಿ ಗಳಲ್ಲಿ ಅಧಿಕಾರ ಭಾಗ್ಯ ಪಡೆಯುವ ಕನಸು ನನಸಾಗಲು ಕಾಂಗ್ರೆಸ್ ಕಾರ್ಯಕರ್ತರು ಇನ್ನಷ್ಟು ದಿನ ಕಾಯುವುದು ಅನಿವಾರ್ಯ. ಸ್ಥಾನಮಾನ ನೀಡುವ ಸಂದರ್ಭದಲ್ಲೇ ಕಾರ್ಯಕರ್ತರಿಗೂ ಹುದ್ದೆಗಳನ್ನು ನೀಡುವ ಬಗ್ಗೆ ಕಾಂಗ್ರೆಸ್‌ನಲ್ಲಿ ಚರ್ಚೆ ನಡೆದಿತ್ತು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಹೈಕಮಾಂಡ್ ನಡುವೆ ಈ ಬಗ್ಗೆ ಇನ್ನೂ ಒಮ್ಮತ ಮೂಡಿಲ್ಲ.
ಸೋಮವಾರ ವಿಧಾನ ಮಂಡಲದ ಅಧಿ ವೇಶನ ಆರಂಭಗೊಳ್ಳಲಿದ್ದು, 2 ವಾರಗಳ ಕಾಲ ನಡೆಯಲಿದೆ. ಅದರ ಬೆನ್ನಲ್ಲೇ ಲೋಕಸಭಾ ಚುನಾವಣೆಯ ವೇಳಾಪಟ್ಟಿ ಪ್ರಕಟಗೊಂಡು ನೀತಿ ಸಂಹಿತೆ ಜಾರಿಯಾಗುವ ಸಾಧ್ಯತೆಯಿದೆ. ಆ ಬಳಿಕ ಚುನಾವಣೆ ಮುಕ್ತಾಯಗೊಳ್ಳುವ ತನಕ ನಿಗಮ ಮಂಡಲಿಗಳ ನೇಮಕ ನಡೆಯುವ ಸಾಧ್ಯತೆಗಳಿಲ್ಲ.
3ರಿಂದ 4 ತಿಂಗಳ ಕಸರತ್ತಿನ ಬಳಿಕ ಜ. 26 ರಂದು 34 ಶಾಸಕರಿಗೆ ನಿಗಮ ಮಂಡಳಿಯ ಆಧಿಕಾರ ಕೊಟ್ಟು ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದರು. ಈ ಮೊದಲು ಕಾರ್ಯಕರ್ತರಿಗೂ ಸ್ಥಾನಮಾನ ನೀಡುವ ಬಗ್ಗೆ ಹಲವು ಸುತ್ತಿನ ಮಾತುಕತೆಗಳು ನಡೆದಿದ್ದವು. ಆದರೆ ಒಮ್ಮತ ಮೂಡದೆ ಮೊದಲು ಶಾಸಕರ ಪಟ್ಟಿ ಬಿಡುಗಡೆ ಮಾಡಿ ಆ ಬಳಿಕ ಕಾರ್ಯಕರ್ತರ ಬಗ್ಗೆ ಚರ್ಚೆ ನಡೆಸುವ ತೀರ್ಮಾನಕ್ಕೆ ಬರಲಾಗಿತ್ತು.
ಪ್ರಗತಿ ಇಲ್ಲ
ಕಾರ್ಯಕರ್ತರಿಗೆ ಸ್ಥಾನಮಾನ ನೀಡುವ ಪ್ರಕ್ರಿಯೆಯಲ್ಲಿ ಕಳೆದೆರಡು ವಾರಗಳಿಂದ ಗಮನಾರ್ಹ ಪ್ರಗತಿ ಕಂಡುಬಂದಿಲ್ಲ. ಕಾರ್ಯ ಕರ್ತರಿಗೆ ನಿಗಮ ಮಂಡಳಿ ಸ್ಥಾನಮಾನ ನೀಡುವ ಬಗ್ಗೆ ಹೈಕಮಾಂಡ್ ಒಲವು ಹೊಂದಿದೆ. ಆದರೆ ಹೈಕಮಾಂಡ್ ಮಟ್ಟದಲ್ಲಿ ಪ್ರಬಲರಾಗಿರುವ ನಾಯಕರೊಬ್ಬರು ಕಾರ್ಯಕರ್ತರ ಕೋಟಾದಲ್ಲಿ ಕೆಲವು ಹೆಸರುಗಳನ್ನು ಸೂಚಿಸಿದ್ದರು. ಅವುಗಳ ಬಗ್ಗೆ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಇಬ್ಬರೂ ಆಕ್ಷೇಪ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಇಡೀ ಪ್ರಕ್ರಿಯೆಯೇ ನನೆಗುದಿಗೆ ಬಿದ್ದಿದೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura ದೊಡ್ಡಾಸ್ಪತ್ರೆಗೆ ವೈದ್ಯರ ಕೊರತೆ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.