Belthangady ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು
Team Udayavani, Feb 13, 2024, 6:08 AM IST
ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿದ್ದ ಖಾಸಗಿ ಶಾಲೆ ಎಸೆಸೆಲ್ಸಿ ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಫೆ. 12ರಂದು ಬೆಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.
ಧರ್ಮಸ್ಥಳ ಗ್ರಾಮದ ಪಿಜತ್ತಡ್ಕದ ನಿವಾಸಿ ಮೃತಪಟ್ಟವಳು. ಈಕೆ ಫೆ. 7ರಂದು ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಎರಡು ದಿನಗಳ ಹಿಂದೆ ಸ್ಥಳಾಂತರಿಸಲಾಗಿತ್ತು. ಅಲ್ಲಿ ಸೋಮವಾರ ಮುಂಜಾನೆ ಮೃತ ಪಟ್ಟಿದ್ದಾಳೆ.
ಶಾಲೆಯಲ್ಲಿ ನಡೆದ ಯಾವುದೋ ಘಟನೆಯ ಕಾರಣ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.