Vijayapura; ಯುವತಿಯನ್ನು ಚುಡಾಯಿಸಿ ಚಪ್ಪಲಿಯಿಂದ ಹಲ್ಲೆಗೈದ ಯುವಕ; ಆರೋಪಿ ಪರಾರಿ
Team Udayavani, Feb 13, 2024, 12:14 PM IST
ವಿಜಯಪುರ: ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ಯುವತಿಯನ್ನು ಯುವಕನೊಬ್ಬ ಚುಡಾಯಿಸಿದ್ದಲ್ಲದೆ, ಚಪ್ಪಲಿಯಿಂದ ಹೊಡೆದ ಘಟನೆ ನಾಗಠಾಣ ಗ್ರಾಮದಿಂದ ವರದಿಯಾಗಿದೆ.
ನಾಗಠಾಣ ಗ್ರಾಮದ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಸೋಮವಾರ ಘಟನೆ ಜರುಗಿದೆ. ಕಂಪ್ಯೂಟರ್ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ಯುವತಿಯನ್ನು ಆಕೆ ಕೇಂದ್ರಕ್ಕೆ ಹೋಗುವಾಗ ಅದೇ ಗ್ರಾಮದ ಶ್ರೀಶೈಲ ಮಸಳಿ ಎಂಬ ಯುವಕ ಕೆಣಕಿದ್ದಾನೆ. ಆಗ ಕುಪಿತಳಾದ ಶ್ರೀಶೈಲನಿಗೆ ಚಪ್ಪಲಿ ತೋರಿಸಿದ್ದಾಳೆ. ಇದರಿಂದ ಕೆರಳಿದ ಶ್ರೀಶೈಲ ಯುವತಿಗೆ ಚಪ್ಪಲಿಯಿಂದ ಹೊಡೆದು, ಹಲ್ಲೆ ಮಾಡಿದ್ದಾನೆ.
ಘಟನೆಯಿಂದ ಬಾಧಿತ ಯುವತಿ ವಿಜಯಪುರ ಗ್ರಾಮೀಣ ಪೊಲೀಸರಿಗೆ ದೂರು ನೀಡಿದ್ದು, ವಿಷಯ ತಿಳಿಯುತ್ತಲೇ ಆರೋಪಿ ತಲೆ ಮರೆಸಿಕೊಂಡು ಪರಾರಿಯಾಗಿದ್ದಾನೆ.
ಯುವತಿ ಮೇಲೆ ಚಪ್ಪಲಿಯಿಂದ ಹಲ್ಲೆ ಮಾಡುವ ದೃಶ್ಯ ಕಂಪ್ಯೂಟರ್ ಕೇಂದ್ರದ ಸಿಸಿ ಕೆಮೆರಾದಲ್ಲಿ ಸೆರೆಯಾಗಿದೆ.
ಪೊಲೀಸರು ಆರೋಪಿಯನ್ನು ಬಂಧಿಸಿ, ಕಠಿಣ ಶಿಕ್ಷೆ ಕೊಡಿಸುವ ಮೂಲಕ ನ್ಯಾಯ ದೊರಕಿಸಿ ಕೊಡಬೇಕು ಎಂದು ಬಾಧಿತ ಯುವತಿಯ ಪೋಷಕರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್ ಅಮಾನತು
Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.