Davanegere; ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆಗೆ ಚಾಲನೆ
Team Udayavani, Feb 13, 2024, 1:25 PM IST
ದಾವಣಗೆರೆ: ಇತಿಹಾಸ ಪ್ರಸಿದ್ಧ ಮಧ್ಯ ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆ ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆಗೆ ಮಂಗಳವಾರ ಹಂದರಗಂಬದ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಲಾಯಿತು.
ಶ್ರೀದುರ್ಗಾಂಬಿಕಾ ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷರೂ ಆಗಿರುವ ಶಾಸಕ ಶಾಮನೂರು ಶಿವಶಂಕರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹಂದರಗಂಬ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಪ್ರತಿ ಎರಡು ವರ್ಷಗಳಿಗೊಮ್ಮೆ ನಡೆಯುವ ಜಾತ್ರೆಯನ್ನು ಹಂದರಗಂಬದ ಪೂಜೆಯ ಮೂಲಕ ಚಾಲನೆ ನೀಡಲಾಗಿದೆ. ಮಾ. 19 ಮತ್ತು 20 ರಂದು ನಡೆಯುವ ಜಾತ್ರೆ ಸುಗಮ ಮತ್ತು ಸಾಂಗವಾಗಿ ನಡೆಯಲು ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆ ವತಿಯಿಂದ ಎಲ್ಲ ರೀತಿಯ ಸೌಲಭ್ಯಗಳನ್ನು ಒದಗಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಶಾಸಕ ಶಾಮನೂರು ಶಿವಶಂಕರಪ್ಪ ಮಾತನಾಡಿ, ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ ಮಾ. 19 ಮತ್ತು 20 ರಂದು ನಡೆಯಲಿದೆ. ಜಾತ್ರಾ ಮಹೋತ್ಸವ ಅಂಗವಾಗಿ ಕುಸ್ತಿ, ಕುರಿ ಪಂದ್ಯಾವಳಿ, ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
Davangere: ಮಹಿಳೆಯ ಮೇಲೆ ಕರಡಿ ದಾಳಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
Davanagere: ವಿಶೇಷ ತೆರಿಗೆ ಕಾರ್ಯಾಚರಣೆ: ಒಂದೇ ದಿನ 1.65 ಕೋಟಿ ತೆರಿಗೆ ಸಂಗ್ರಹ
Davanagere: ಅಸೆಂಬ್ಲಿ ಅಧಿವೇಶನಕ್ಕೆ ಮೊದಲು ಸಿದ್ದರಾಮಯ್ಯ ರಾಜೀನಾಮೆ: ಆರ್.ಅಶೋಕ್
MUST WATCH
ಹೊಸ ಸೇರ್ಪಡೆ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
Editorial: ಪಾಕ್ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು
Kannada: ಕನ್ನಡನಾಡಲ್ಲಿ ಕನ್ನಡ ಕಲಿಕೆಯ ಹಾಡು-ಪಾಡು
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.