Kalaburgi;ದೇಶದ ವಿಕಾಸಕ್ಕೆ ಧರ್ಮದ ಜತೆಗೆ ಅಭಿವೃದ್ಧಿಕಾರ್ಯಗಳು ಬೇಕು:ನಿರ್ಮಲಾನಂದ ಸ್ವಾಮೀಜಿ

Team Udayavani, Feb 13, 2024, 5:42 PM IST

For a better country, development work is needed along with religion says Nirmalananda Swamiji

ಕಲಬುರಗಿ: ದೇಶ ಉದ್ದಾರವಾಗುವುದಕ್ಕೆ ಧರ್ಮ ಒಂದಿದ್ದರೆ ಸಾಲದು, ಅದರ ಜತೆಗೆ ರಾಷ್ಟ್ರದ ಅಭಿವೃದ್ಧಿಗೆ ಪೂರಕವಾಗುವ ಕಾರ್ಯಗಳು ಬೇಕು. ಅದರಲ್ಲೂ  ಕೈಗಾರಿಕೆಗಳು ಮುಖ್ಯ ಪಾತ್ರ ವಹಿಸುತ್ತವೆ ಎಂದು ಆದಿಚುಂಚನಗಿರಿ ಮಠದ ಜಗದ್ಗುರು ಡಾ.ನಿರ್ಮಲಾನಂದ ಸ್ವಾಮೀಜಿಗಳು ಹೇಳಿದರು.‌

ಮಂಗಳವಾರ ನಗರದ ಪಿಡಿಎ ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ನ್ಯಾಶನಲ್ ಸ್ಕಿಲ್ ಡೆವಲಪ್‍ಮೆಂಟ್ ಮತ್ತು ಎಥ್ನೋಟೆಕ್ ಅಕಾಡೆಮಿ ಸಹಯೋಗದಲ್ಲಿ ಪೂಜ್ಯ ಬಸವರಾಜ ದೊಡ್ಡಪ್ಪ ಅಪ್ಪ ಸೆಂಟರ್ ಫಾರ್ ಫ್ಯೂಚರ್ ಸ್ಕಿಲ್ಸ್ ತರಬೇತಿ ಕೇಂದ್ರದ ಉದ್ಘಾಟನೆ ನೆರವೇರಿಸಿ ಆಶೀರ್ವಚನ ನೀಡಿದರು.

ಭಾರತದಂತ ದೊಡ್ಡ ದೇಶದಲ್ಲಿ ಅತಿಹೆಚ್ಚು ಮಾನವ ಸಂಪನ್ಮೂಲವಿದ್ದು, ಅದರ ಬಳಕೆ ಅಧಿಕವಾಗಬೇಕು. ಹೀಗಾಗಿ, ಕೈಗಾರಿಕೆಗಳ ವೃದ್ಧಿಗೆ ಕೌಶಲ ತರಬೇತಿ ಅಗತ್ಯವಾಗಿದೆ. ದೇಶಕ್ಕೆ ಜನಸಂಖ್ಯೆ ಮಾರಕವಾಗಿಲ್ಲ. ಕೌಶಲ ತರಬೇತಿ ಕೊರತೆಯಿಂದಾಗಿ ಅದು ಮಾರಕವೆನಿಸುತ್ತಿದೆ. ಯುವ ಜನಾಂಗದಲ್ಲಿ ಕೌಶಲ ಹೆಚ್ಚಾದರೆ ದೇಶದ ಭಾರಿ ಜನಸಂಖ್ಯೆ ಯಾವುದೇ ಕಾರಣಕ್ಕೂ ಮಾರಕ ಎನಿಸದು ಎಂದು ಅಭಿಪ್ರಾಯಪಟ್ಟರು.

ಇಂದು ದೇಶದಲ್ಲಿ ತಂತ್ರಜ್ಞಾನಕ್ಕೆ ಯಾವುದೇ ಕೊರತೆಯಿಲ್ಲ. ಆದರೆ, ದಿನೇದಿನೇ ಸುಧಾರಿತ ರೂಪದಲ್ಲಿ ಬರುತ್ತಿರುವ ತಂತ್ರಜ್ಞಾನ ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ಯುವಜನರು ಮನಸ್ಸು ಮಾಡಬೇಕು. ದೇಶದ ಕೈಗಾರಿಕೆಗಳಲ್ಲಿ ಕೌಶಲಕ್ಕೆ ಹೆಚ್ಚು ಬೇಡಿಕೆಯಿದೆ. ಇನ್ನೊಂದೆಡೆ, ಶಿಕ್ಷಣ ಸಂಸ್ಥೆಗಳಲ್ಲಿ ಬೋಧಿಸುತ್ತಿರುವ ಪಠ್ಯ ಮತ್ತು ಕೈಗಾರಿಕೆಗಳ ಈ ಬೇಡಿಕೆಯ ಮಧ್ಯೆ ದೊಡ್ಡ ಅಂತರವಿದೆ. ಈ ನಿಟ್ಟಿನಲ್ಲಿ ಅಂತರ ಇಲ್ಲದಂತೆ ಮಾಡುವಲ್ಲಿ ರಾಷ್ಟ್ರೀಯ ಕೌಶಲಾಭಿವೃದ್ಧಿ ಮಂಡಳಿ ಮುತುವರ್ಜಿ ವಹಿಸಿ ಅಗತ್ಯ ಕ್ರಮ ಕೈಗೊಳ್ಳಬೇಕಿದೆ ಎಂದು ಸ್ವಾಮೀಜಿ ಸಲಹೆ ನೀಡಿದರು.

1894ರ ಸಂದರ್ಭದಲ್ಲಿ ಭಾರತ ಎಂಬುದು ಕೇವಲ ಧರ್ಮ ಮತ್ತು ಅಧ್ಯಾತ್ಮ ಕ್ಷೇತ್ರದಲ್ಲಿ ಗುರುತಿಸಿಕೊಂಡಿತ್ತು. ಆದರೆ, ಚಿಕಾಗೋ ಧರ್ಮ ಸಮ್ಮೇಳನಕ್ಕೆ ತೆರಳಿದ್ದ ಸ್ವಾಮಿ ವಿವೇಕಾನಂದರು ಆ ದೇಶದ ತಂತ್ರಜ್ಞಾನ ಪ್ರಾವೀಣ್ಯತೆ ಗಮನಿಸಿ ಆ ಕುರಿತು ಜೆಮ್‍ಷೆಡ್ ಟಾಟಾ ಅವರೊಂದಿಗೆ ಒಮ್ಮೆ ಚರ್ಚಿಸಿದ ಬಳಿಕ ಕರ್ನಾಟಕದಲ್ಲಿ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಸ್ಥಾಪನೆಯಾಗಲು ಕಾರಣವಾಯಿತು ಎಂದು ಡಾ.ನಿರ್ಮಲಾನಂದ ಸ್ವಾಮೀಜಿ, ಜಗದ್ಗುರುಗಳು ಹೇಳಿದರು.

ಕೇಂದ್ರ ಸಚಿವ ಭಗವಂತ ಖೂಬಾ ಮಾತನಾಡಿ, 2014ರ ಬಳಿಕ ಭಾರತ ದೇಶದಲ್ಲಿ ಸಾಕಷ್ಟು ಕೌಶಲ್ಯ ಅಭಿವೃದ್ಧಿ ಯೋಜನೆಗಳನ್ನು ಕೇಂದ್ರ ಸರಕಾರ ಜಾರಿಗೆ ತಂದು ಯುವಕರಿಗೆ ಸ್ವಯಂ ಉದ್ಯೋಗ ಸೃಷ್ಟಿಸಲು ಸಹಕಾರ ನೀಡುತ್ತಿದೆ. ಹೀಗಾಗಿ ಭಾರತದಲ್ಲಿನ ಯುವ ಶಕ್ತಿಗಳು ಹೆಚ್ಚಿನ ಕೌಶಲ್ಯ ತರಬೇತಿ ಪಡೆದು ವಿಶ್ವದಲ್ಲಿ ರಾಷ್ಟ್ರದ ಹೆಸರು ಪಸರಿಸಬೇಕು ಎಂದು ಯುವಕರಿಗೆ ಕರೆ ನೀಡಿದರು.

ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವಾಲಯವು ಯುವಕರಿಗೆ ಕೌಶಲ್ಯ ತರಬೇತಿ ನೀಡಿ, ಸ್ವಯಂ ಉದ್ಯೋಗ ನೀಡುವ ಕೆಲಸ ಮಾಡುತ್ತದೆ. ತಂತ್ರಜ್ಞಾನ ಮತ್ತು ಕೌಶಲ ಕ್ಷೇತ್ರದಲ್ಲಿ ಭಾರತ ಇಂದು ಸಾಕಷ್ಟು ಪ್ರಗತಿ ಸಾಧಿಸಿದೆ. ತಾಂತ್ರಿಕ ಶಿಕ್ಷಣ ಸೇರಿದಂತೆ ಉನ್ನತ ಶಿಕ್ಷಣ ಪಡೆಯಲು ವಿದೇಶಕ್ಕೆ ಹೋಗುವವರ ಸಂಖ್ಯೆ ಕಡಿಮೆಯಾಗಿದ್ದು, ಈಗ ಎಲ್ಲವೂ ಭಾರತದಲ್ಲಿಯೇ ಲಭಿಸುತ್ತಿದೆ. ಇದಕ್ಕೆ ಪುರಾವೆ ಎನ್ನುವಂತೆ ದೇಶದಲ್ಲಿ ಈಗ 1.25 ಲಕ್ಷ ಸ್ಟಾರ್ಟ್-ಅಪ್ ಕಂಪನಿಗಳು ಕಾರ್ಯನಿರ್ವಹಿಸುತ್ತಿದ್ದು, ಈ ಪೈಕಿ 125 ಯೂನಿಕಾರ್ನ್ ಕಂಪನಿಗಳಿವೆ. ಎಲ್ಲಕ್ಕಿಂತಲೂ ಮುಖ್ಯವಾಗಿ ಅಮೆರಿಕದ ಪ್ರತಿಷ್ಠಿತ ನಾಸಾ ಸಂಸ್ಥೆಯಲ್ಲಿ ಭಾರತ ಸಂಜಾತ ಶೇ.31ರಷ್ಟು ವಿಜ್ಞಾನಿಗಳು ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.

2047ಕ್ಕೆ ಭಾರತ ವಿಶ್ವಗುರು: ಸ್ವಾತಂತ್ರ್ಯದ ಶತಮಾನೋತ್ಸವದ ವರ್ಷವಾಗಲಿರುವ 2047ರ ಹೊತ್ತಿಗೆ ಇಡೀ ವಿಶ್ವಕ್ಕೆ ಭಾರತ ವಿಶ್ವಗುರು ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಇದೇ ಸಂದರ್ಭದಲ್ಲಿ ಪ್ರತಿಪಾದಿಸಿದರು.

ನವದೆಹಲಿಯ ಎಐಸಿಟಿಇ ಮುಖ್ಯಸ್ಥ ಪ್ರೋ. ಟಿ.ಜಿ ಸೀತಾರಾಮ್ ಮಾತನಾಡಿ, ತಂತ್ರಜ್ಞಾನ ಎಂಬುದು ಮಾನವ ಕಲ್ಯಾಣಕ್ಕೆ ಬಳಕೆಯಾಗಬೇಕು. ಆ ನಿಟ್ಟಿನಲ್ಲಿ ಇಂದು ಭಾರತ ಇಡೀ ಜಗತ್ತಿನ ಗಮನ ಸೆಳೆದಿದೆ. ಕೋವಿಡ್ ಸಂದರ್ಭದಲ್ಲಿ ಭಾರತ ಅಭಿವೃದ್ಧಿಪಡಿಸಿದ ಲಸಿಕೆಯನ್ನು ಜಗತ್ತಿನ 100ಕ್ಕೂ ಹೆಚ್ಚು ದೇಶಗಳಿಗೆ ಉಚಿತವಾಗಿ ಒದಗಿಸುವ ಮೂಲಕ ಮಾನವ ಕಲ್ಯಾಣ ತತ್ವ ಎತ್ತಿ ಹಿಡಿಯಲಾಯಿತು. ಈ ತತ್ವಕ್ಕೆ ಒತ್ತುಕೊಡುವ ಮೂಲಕ ಎಐಸಿಟಿಇ ವ್ಯಾಪ್ತಿಯ ಎಲ್ಲ ತಾಂತ್ರಿಕ ವಿದ್ಯಾಲಯಗಳಲ್ಲಿ ವಿಶ್ವಮಾನವತಾ ಮೌಲ್ಯಗಳನ್ನು ಕಡ್ಡಾಯವಾಗಿ ಬೋಧಿಸುವಂತೆ ನಿಯಮ ರೂಪಿಸಲಾಗಿದೆ ಎಂದರು.

ಬಿಜಿಎಸ್ ಮತ್ತು ಎಸ್.ಜೆ.ಬಿ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ ಹಾಗೂ ಹಾಸ್ಪಿಟಲ್ಸ್ ವ್ಯವಸ್ಥಾಪಕ ನಿರ್ದೇಶಕ ಡಾ.ಪ್ರಕಾಶನಾಥ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದರು. ಎಚ್.ಕೆ.ಇ ಸಂಸ್ಥೆಯ ಅಧ್ಯಕ್ಷ ಡಾ. ಭೀಮಾಶಂಕರ ಬಿಲಗುಂದಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಐಎಸ್‍ಟಿಇ ಅಧ್ಯಕ್ಷ ಪ್ರತಾಪ ಸಿನ್ಹ ಕೆ. ದೇಸಾಯಿ ಮಾತನಾಡಿದರು.

ಈ ಸಂದರ್ಭದಲ್ಲಿ ಪಿಡಿಎಸಿಇಕೆ ಸಂಯೋಜಕ ಬಸವರಾಜ್ ಖಂಡರಾವ್, ಹೆಚ್.ಕೆ.ಇ ಸಂಸ್ಥೆಯ ಉಪಾಧ್ಯಕ್ಷ ಡಾ. ಶರಣಬಸಪ್ಪ ಹರವಾಳ್, ಕಾರ್ಯದರ್ಶಿ ಡಾ. ಜಗನ್ನಾಥ್ ಬಿಜಾಪುರೆ, ಸಹ ಕಾರ್ಯದರ್ಶಿ ಡಾ. ಮಹಾದೇವಪ್ಪ ರಾಮಪುರೇ, ವಿಟಿಯು ಪ್ರಾದೇಶಿಕ ಕೇಂದ್ರದ ನಿರ್ದೇಶಕ ಡಾ. ಬಸವರಾಜ್ ಗಾದಗೆ ಸೇರಿ ಉಪ ಪ್ರಚಾರ್ಯರು, ಸಿಎಓ, ಡೀನರು, ಪ್ರಾಧ್ಯಪಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಎಥ್ನೋಟೆಕ್ ಗ್ರೂಪ್ ಆಫ್ ಕಂಪನಿಯ ಮುಖ್ಯಸ್ಥ ಡಾ.ಕಿರಣ ರಾಜಣ್ಣ ಸ್ವಾಗತಿಸಿದರು. ಪಿಡಿಎ ಇಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯ ಡಾ. ಶಶಿಕಾಂತ ಮೀಸೆ ವಂದಿಸಿದರು.‌

ವಿವಿಧ ಕ್ಷೇತ್ರದಲ್ಲಿ ಸಾಧನೆಗೈದವರಿಗೆ ಸತ್ಕಾರ: ಎಚ್.ಕೆ.ಇ ಸಂಸ್ಥೆಯ ಅಧ್ಯಕ್ಷ ಡಾ. ಭೀಮಾಶಂಕರ ಬಿಲಗುಂದಿ ಅವರ ಸಾಧನೆ ಗುರುತಿಸಿ ಎಥ್ನೋಟೆಕ್ ಅಕಾಡೆಮಿ ವತಿಯಿಂದ ವಿಶೇಷವಾಗಿ ಗೌರವ ಸಮರ್ಪಣೆ ಸಲ್ಲಿಸಲಾಯಿತು. ಅದೇ ರೀತಿ ನವದೆಹಲಿಯ ಎಐಸಿಟಿಇ ಮುಖ್ಯಸ್ಥ ಪ್ರೋ. ಟಿ.ಜಿ ಸೀತಾರಾಮ್, ಅಟಲ್ ಬಿಹಾರಿ ವಾಜಪೇಯಿ ನಿರ್ದೇಶಕ ಐಐಐಟಿಎಂ ಪ್ರೋ. ನಿವಾಸ್ ಸಿಂಗ್, ಚೆನೈನ ಅಣ್ಣ ವಿವಿಯ ಉಪಕುಲಪತಿ ಡಾ. ಆರ್. ವೇಲರಾಜ್, ಹರಿಯಾಣದ ಸ್ಪೋರ್ಟ್ಸ್ ವಿವಿಯ ಸುರ್ಜಿತ್ ಸಿಂಗ್ ದೇಸ್ವಾಲ್ ಹಾಗೂ ಶರಣಬಸವ ವಿವಿಯ ಡೀನರಾದ ಲಕ್ಷ್ಮಿ ಪಾಟೀಲ್ ಮಾಕಾ ಸೇರಿ ಅನೇಕ ಸಾಧಕರಿಗೆ ಇದೆ ವೇಳೆ ಗೌರವ ಸನ್ಮಾನ ಮಾಡಲಾಯಿತು.

ಟಾಪ್ ನ್ಯೂಸ್

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

1-loka

Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ

2-kalburgi

Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.