Agri: ಅಡಿಕೆ ಎಲೆಚುಕ್ಕೆ , ಹಳದಿ ಎಲೆ ರೋಗ 1,664.14 ಕೋ.ರೂ. ನಷ್ಟ: ಚಲುವರಾಯಣಸ್ವಾಮಿ


Team Udayavani, Feb 13, 2024, 11:29 PM IST

cheluvanarayana swamy

ಬೆಂಗಳೂರು: ರಾಜ್ಯದಲ್ಲಿ ಅಡಿಕೆ ಎಲೆಚುಕ್ಕೆ ಮತ್ತು ಹಳದಿ ಎಲೆ ರೋಗದಿಂದಲೇ ಸುಮಾರು 68 ಸಾವಿರ ಹೆಕ್ಟೇರ್‌ ಬೆಳೆ ಹಾನಿಯಾಗಿದ್ದು, ಇದರಿಂದಾದ ಆರ್ಥಿಕ ನಷ್ಟ ಸರಿ ಸುಮಾರು 1,664.14 ಕೋಟಿ ರೂ.!

ಮಂಗಳವಾರ ವಿಧಾನಪರಿಷತ್‌ನಲ್ಲಿ ಬಿಜೆಪಿಯ ಕೆ. ಪ್ರತಾಪ್‌ಸಿಂಹ ನಾಯಕ್‌ ಕೇಳಿದ ಪ್ರಶ್ನೆಗೆ ತೋಟಗಾರಿಕೆ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ ಪರವಾಗಿ ಉತ್ತರಿಸಿದ ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ, ರಾಜ್ಯದಲ್ಲಿ ಎಲೆಚುಕ್ಕೆ ಮತ್ತು ಹಳದಿ ಎಲೆ ರೋಗದಿಂದ ಅಡಿಕೆ ಬೆಳೆ ಸಾಕಷ್ಟು ಹಾನಿಯಾಗಿದ್ದು ನಿಜ.

ಈ ವಿಚಾರದಲ್ಲಿ ಇದು ವರೆಗೆ ಪರಿಹಾರ ಕಲ್ಪಿಸಲು ಸಾಧ್ಯವಾಗಿಲ್ಲ. ಬರೀ ನಿರ್ವಹಣೆ ಮತ್ತು ನಿಯಂತ್ರಣಕ್ಕೆ ಸೀಮಿತವಾಗಿರುವುದೂ ಸತ್ಯ ಎಂದು ಒಪ್ಪಿಕೊಂಡರು.

ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ, ದ.ಕ., ಉತ್ತರ ಕನ್ನಡ, ಹಾಸನ, ಕೊಡಗು ಜಿಲ್ಲೆಗಳ 53,977 ಹೆಕ್ಟೇರ್‌ ಪ್ರದೇಶದಲ್ಲಿನ ಅಡಿಕೆ ಬೆಳೆಯು ಎಲೆಚುಕ್ಕೆ ರೋಗಕ್ಕೆ ತುತ್ತಾಗಿದ್ದು, ಇದರಿಂದ ಬೆಳೆಗಾರರಿಗೆ 1,101.81 ಕೋಟಿ ರೂ. ಹಾನಿ ಉಂಟಾಗಿದೆ. ಅದೇ ರೀತಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಮತ್ತು ಕೊಡಗಿನಲ್ಲಿ 13,767 ಹೆಕ್ಟೇರ್‌ ಪ್ರದೇಶದ ಅಡಿಕೆ ಹಳದಿ ಎಲೆ ರೋಗಕ್ಕೆ ತುತ್ತಾಗಿದ್ದು, ಇದರಿಂದಾದ ಆರ್ಥಿಕ ನಷ್ಟ 562.33 ಕೋಟಿ ರೂ. ಎಂದು ಅಂದಾಜಿಸಿರುವುದಾಗಿ ಸಚಿವರು ಮಾಹಿತಿ ನೀಡಿದರು.

ಸಮಸ್ಯೆ ಇರು ವುದು ಸತ್ಯ. ಇದ ಕ್ಕಾಗಿ ಸ್ಥಳೀಯ ಜನ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲಾಗಿದೆ. ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ 21.50 ಕೋಟಿ ರೂ. ಅನುದಾನದ ಆವಶ್ಯಕತೆ ಇದ್ದು, ಈ ಸಂಬಂಧದ ಪ್ರಸ್ತಾವನೆಯು ಆರ್ಥಿಕ ಇಲಾಖೆ ಪರಿಶೀಲನೆಯಲ್ಲಿದೆ. ಕಟಾವು ಮತ್ತು ಔಷಧ ಸಿಂಪಡಣೆಗಾಗಿ ಖರೀದಿಸುವ ಯಂತ್ರಗಳಿಗೆ ಸಾಮಾನ್ಯ ವರ್ಗಕ್ಕೆ ಶೇ. 40 ಮತ್ತು ಪರಿಶಿಷ್ಟ ಜಾತಿ/ ಪಂಗಡದವರಿಗೆ ಶೇ. 50ರಷ್ಟು ಸಹಾಯಧನ ನೀಡಲಾಗುತ್ತಿದೆ ಎಂದು ವಿವರಿಸಿದರು.

ಪ್ಯಾಕೇಜ್‌ ಘೋಷಿಸಲು ಆಗ್ರಹ
ಈ ಮೊದಲು ಮಾತನಾ ಡಿದ ಪ್ರತಾಪ್‌ಸಿಂಹ ನಾಯಕ್‌, ಸರಕಾರದ ಕ್ರಮಗಳು ಬರೀ ರೋಗ ನಿಯಂತ್ರಣ ಮತ್ತು ನಿರ್ವಹಣೆಗೆ ಸೀಮಿತವಾಗಿವೆ. ಶಾಶ್ವತ ಪರಿಹಾರದ ಬಗ್ಗೆ ಗಂಭೀರ ಚಿಂತನೆ ಮಾಡಬೇಕು. ಅದಕ್ಕಿಂತ ಮುಖ್ಯವಾಗಿ ರೈತರಲ್ಲಿ ವಿಶ್ವಾಸ ತುಂಬುವ ದೃಷ್ಟಿಯಿಂದ ಪ್ಯಾಕೇಜ್‌ ಘೋಷಿಸಬೇಕು ಎಂದು ಆಗ್ರಹಿಸಿದರು.

ಪ್ರವಾಸಿ ತಾಣಗಳಲ್ಲಿ ಹೊಸ ಪಾರ್ಕಿಂಗ್‌ ನೀತಿ
ರಾಜ್ಯಾದ್ಯಂತ ಪ್ರವಾಸಿ ತಾಣಗಳ ಪಾರ್ಕಿಂಗ್‌ ಸಮ ಸ್ಯೆಗೆ ಪ್ರತ್ಯೇಕ ಸ್ಥಳ ಒದಗಿಸಿ ಅಲ್ಲಿ ಬೂಮ್‌ ಬ್ಯಾರಿಯರ್‌ ಮತ್ತು ಡಿಜಿಟಲ್‌ ಪಾವತಿ ಆಧಾರದ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸುವ ಹೊಸ ನೀತಿಯನ್ನು ಸದ್ಯದಲ್ಲೇ ತರಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದರು. ಬೈಂದೂರು ಶಾಸಕ ಗುರುರಾಜ್‌ ಶೆಟ್ಟಿ ಗಂಟಿಹೊಳೆ ಪ್ರಶ್ನೆಗೆ ಪ್ರವಾಸೋದ್ಯಮ ಸಚಿವ ಎಚ್‌.ಕೆ. ಪಾಟೀಲ್‌ ಪರವಾಗಿ ಉತ್ತರಿಸಿದ ಅವರು, ಪ್ರವಾಸಿಗರ ಸುರಕ್ಷತೆಗೆ ಈಗಾಗಲೆ ಪ್ರವಾಸಿಮಿತ್ರ ಯೋಜನೆಯಡಿ ಸೂಕ್ತ ಭದ್ರತೆ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಜನನಿಬಿಡ ಪ್ರವಾಸಿ ತಾಣಗಳಾದ ಮೈಸೂರು, ಚಾಮುಂಡಿ ಬೆಟ್ಟ, ನಂದಿ ಗಿರಿಧಾಮ, ಹಂಪಿ, ಬಾದಾಮಿ, ಬನಶಂಕರಿ, ಕರಾವಳಿ ಪ್ರದೇಶಗಳಲ್ಲಿ ಪಾರ್ಕಿಂಗ್‌ ಶುಲ್ಕವನ್ನು ಡಿಜಿಟಲ್‌ ಪಾವತಿ ಆಧಾರದ ಮೇಲೆ ಸಂಗ್ರಹಿಸಲು ಕ್ರಮ ವಹಿಸಲಾಗುವುದು ಎಂದು ವಿವರಿಸಿದರು.

ಎಮ್ಮೆಕೆರೆ ಈಜುಕೊಳ ಶೀಘ್ರ ಸೇವೆಗೆ ಮುಕ್ತ
ಮಂಗಳೂರು ಸ್ಮಾರ್ಟ್‌ಸಿಟಿ ಯೋಜನೆಯಡಿ ಅಭಿವೃದ್ಧಿಪಡಿಸಿದ ಎಮ್ಮೆಕೆರೆ ಈಜುಕೊಳ ಪುನಾರಂಭಿಸಲು ಈಗಾಗಲೇ ಅಗತ್ಯ ಕ್ರಮ ಕೈಗೊಂಡಿದ್ದು, ಶೀಘ್ರ ಸೇವೆಗೆ ಮುಕ್ತಗೊಳಿಸಲಾಗುವುದು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್‌. ಸುರೇಶ್‌ (ಬೈರತಿ) ವಿಧಾನಪರಿಷತ್‌ನಲ್ಲಿ ತಿಳಿಸಿದರು. ಮಂಗಳವಾರ ಪ್ರಶ್ನೋತ್ತರ ವೇಳೆ ಜೆಡಿಎಸ್‌ನ ಬಿ.ಎಂ. ಫಾರೂಕ್‌ ವಿಷಯ ಪ್ರಸ್ತಾವಿಸಿ, ಎಮ್ಮೆಕೆರೆಯಲ್ಲಿ ಸುಮಾರು 25 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ ಈಜುಕೊಳದ ನಿರ್ವಹಣೆಗಾಗಿಯೇ 2.15 ಕೋಟಿ ರೂ. ಮೀಸಲಿಡಲಾಗಿದೆ. ಇಂತಹ ಹೈಟೆಕ್‌ ಈಜುಕೊಳವನ್ನು ಉದ್ಘಾಟನೆಯಾದ ಬೆನ್ನಲ್ಲೇ ಸ್ಥಗಿತಗೊಳಿಸಲಾಗಿದೆ. ಇಷ್ಟೊಂದು ದುಬಾರಿ ವೆಚ್ಚ ಮತ್ತು ತರಬೇತುದಾರರಿಲ್ಲ ಎಂಬ ಕಾರಣಕ್ಕೆ ಸ್ಥಗಿತಗೊಳಿಸಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಈ ಬಗ್ಗೆ ಅಗತ್ಯ ತನಿಖೆ ಆಗಬೇಕು ಎಂದು ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಸುರೇಶ್‌, ಉದ್ದೇಶಿತ ಈಜುಕೊಳವನ್ನು ಅಂತಾರಾಷ್ಟ್ರೀಯ ಮಾನದಂಡಗಳ ಪ್ರಕಾರ ನಿರ್ಮಿಸಲಾಗಿದ್ದು, ಅಭ್ಯಾಸ ಕೊಳದ ಆಳವು 2.20 ಮೀಟರ್‌ ಇದೆ. ಆದ್ದರಿಂದ ಈಜುಕೊಳದ ನಿರ್ವಹಣೆಗೆ ತಜ್ಞರ ಆವಶ್ಯಕತೆ ಇದೆ. ಅದರಂತೆ ಈಜುಕೊಳದ ಬಳಕೆಗೆ ಅನುಮತಿ ನೀಡುವ ಬಗ್ಗೆ ಈಗಾಗಲೇ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ ಎಂದರು.
ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಅನುಷ್ಠಾನ ಸಮಿತಿಯನ್ನೂ ರಚಿಸಲಾಗಿದೆ. ಈ ಸಮಿತಿ ಈಜುಕೊಳದ ನಿರ್ವಹಣೆಗೆ ಕಾರ್ಯಸೂಚಿ ಸಿದ್ಧಪಡಿಸಿ, ಎಮ್ಮೆಕೆರೆ ಈಜುಕೊಳವನ್ನು ರಾಷ್ಟ್ರೀಯ/ಅಂತಾರಾಷ್ಟ್ರೀಯ ಮಟ್ಟದ ಕ್ರೀಡೆಗೆ, ತರಬೇತಿ ಮತ್ತು ಸಾರ್ವಜನಿಕ ಬಳಕೆಗೆ ಉಪಯೋಗಿಸಲು ಕ್ರಮ ವಹಿಸಲಿದೆ ಎಂದು ಹೇಳಿದರು.

ಟಾಪ್ ನ್ಯೂಸ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.