Pakistan: ಬಿಲಾವಲ್ ಭುಟ್ಟೋ ಬೆಂಬಲಿತ ಸರ್ಕಾರ ಅಸ್ತಿತ್ವಕ್ಕೆ?
ನವಾಜ್ ಷರೀಫ್ ಪಕ್ಷಕ್ಕೆ ಬೆಂಬಲ ಘೋಷಣೆ
Team Udayavani, Feb 14, 2024, 12:10 AM IST
ಇಸ್ಲಾಮಾಬಾದ್: ಅತಂತ್ರ ಸಂಸತ್ ರಚನೆಯಾಗಿರುವ ಪಾಕಿಸ್ತಾನದಲ್ಲಿ ನವಾಜ್ ಷರೀಫ್ ನೇತೃತ್ವದ ಪಾಕಿಸ್ತಾನ ಮುಸ್ಲಿಂ ಲೀಗ್-ಎನ್ ಮತ್ತು ಬಿಲಾವಲ್ ಭುಟ್ಟೋ ನೇತೃತ್ವದ ಪಾಕಿಸ್ತಾನ ಪೀಪಲ್ಸ್ ಪಾರ್ಟಿಯ ನಡುವೆ ಸಹಮತ ಉಂಟಾಗುವ ಸಾಧ್ಯತೆ ಇದೆ. ಪ್ರಧಾನಿ ಹುದ್ದೆಯನ್ನು ಮೊದಲ 3 ವರ್ಷ ಪಿಪಿಪಿಗೆ ಮತ್ತು ಕೊನೆಯ 2 ವರ್ಷಗಳಲ್ಲಿ ನವಾಜ್ ಷರೀಫ್ ಪಕ್ಷಕ್ಕೆ ಎಂಬ ಸೂತ್ರಕ್ಕೆ ಬಹುತೇಕ ಒಪ್ಪಿಗೆ ಉಂಟಾಗಿತ್ತು. ಆದರೆ, ಮಂಗಳವಾರ ನಡೆದಿದ್ದ ಬೆಳವಣಿಗೆಯಲ್ಲಿ ಪ್ರಧಾನಿ ಹುದ್ದೆಯನ್ನು ಪಾಕಿಸ್ತಾನ ಮುಸ್ಲಿಂ ಲೀಗ್-ಎನ್ ಪಕ್ಷಕ್ಕೆ ಬಿಟ್ಟು ಕೊಡಲು ಬಿಲಾವಲ್ ಭುಟ್ಟೋ ಒಪ್ಪಿಕೊಂಡಿದ್ದಾರೆ. ಆದರೆ, ಅವರು ಸರ್ಕಾರದ ಭಾಗವಾಗುವುದಿಲ್ಲ ಎಂದು ಹೇಳಿದ್ದಾರೆ. ಅಧಿಕಾರ ಹಂಚಿಕೆ ಸೂತ್ರಕ್ಕೆ ಬಿಲಾವಲ್ ಭುಟ್ಟೋ ಪಕ್ಷದಲ್ಲಿ ಭಿನ್ನಮತ ಉಂಟಾಗಿರುವಂತೆಯೇ ಈ ಬೆಳವಣಿಗೆ ನಡೆದಿದೆ.
30 ಅರ್ಜಿಗಳ ವಜಾ: ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಲಾಹೋರ್ ಹೈಕೋರ್ಟ್‌ನಲ್ಲಿ ಸಲ್ಲಿಸಲಾ ಗಿದ್ದ 30 ಅರ್ಜಿಗಳನ್ನು ವಜಾಗೊಳಿಸ ಲಾಗಿದೆ. ಪಿಎಂಎಲ್ನ ನಾಯಕರಾದ ನವಾಜ್ ಷರೀಫ್, ಶೆಹಬಾಜ್ ಷರೀಫ್ ಸೇರಿದಂತೆ ಹಲವರ ಆಯ್ಕೆ ಪ್ರಶ್ನಿಸಿ ಪಾಕಿಸ್ತಾನ ತೆಹ್ರೀಕ್-ಇ- ಇನ್ಸಾಫ್ ಪಕ್ಷದ ನಾಯಕರು ದಾವೆ ಹೂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್‌ಬುಕ್ ಬಳಸುವಂತಿಲ್ಲ!
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Australia: ಜಾಲತಾಣ ಬಳಕೆಗೆ ಕನಿಷ್ಠ 16 ವರ್ಷ ಮಿತಿ ನಿಗದಿ?
US: ಮೊದಲ ದಿನವೇ ಜಗತ್ತಿಗೆ ಟ್ರಂಪ್ “ಎನರ್ಜಿ’ ಶಾಕ್!
MUST WATCH
ಹೊಸ ಸೇರ್ಪಡೆ
Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಮಗುಚಿ ಬಿದ್ದ ಕ್ರೇನ್; ತಪ್ಪಿದ ಅನಾಹುತ
Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ
Moodbidri: ಆಳ್ವಾಸ್‌ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.