Temple: ಇಂದು ಅಬುಧಾಬಿಯಲ್ಲಿ ಮೊದಲ ಹಿಂದೂ ದೇವಾಲಯ ಲೋಕಾರ್ಪಣೆ ಮಾಡಲಿದ್ದಾರೆ ಪ್ರಧಾನಿ ಮೋದಿ
Team Udayavani, Feb 14, 2024, 8:22 AM IST
ಅಬುಧಾಬಿ: ಅಬುಧಾಬಿಯಲ್ಲಿ ಬೋಚಸನ್‌ವಾಸಿ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥೆ (BAPS) ನಿರ್ಮಿಸಿರುವ ವಿಸ್ತಾರವಾದ ಹಿಂದೂ ದೇವಾಲಯವನ್ನು ಪ್ರಧಾನಿ ನರೇಂದ್ರ ಮೋದಿ ಇಂದು (ಬುಧವಾರ) ಉದ್ಘಾಟಿಸಲಿದ್ದಾರೆ.
ಸುಮಾರು 27 ಎಕರೆ ವಿಸ್ತೀರ್ಣದ ಭೂಮಿಯಲ್ಲಿ ನಿರ್ಮಿಸಲಾದ ದೇವಾಲಯ ಅಬುಧಾಬಿಯ ಮೊದಲ ಹಿಂದೂ ದೇವಾಲಯವಾಗಿದ್ದು, ಇದು ಭಾರತೀಯ ಸಂಸ್ಕೃತಿಯ ವಿಶಿಷ್ಟ ಮಿಶ್ರಣ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಗುರುತನ್ನು ಹೊಂದಿದೆ.
ಎರಡು ದಿನಗಳ ಯುಎಇ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಇಂದು ಇಲ್ಲಿ ನಿರ್ಮಿಸಲಾದ ಮೊದಲ ಹಿಂದೂ ದೇವಾಲಯವನ್ನು ಉದ್ಘಾಟನೆ ಮಾಡಲಿದ್ದಾರೆ, ಅಲ್ಲದೆ ಮುಂಬರುವ ತಿಂಗಳಿನಿಂದ ಭಕ್ತರಿಗೆ ದರ್ಶನಕ್ಕೆ ಮುಕ್ತವಾಗಲಿದೆ ಎಂದು ದೇವಳದ ಆಡಳಿತ ಮಂಡಳಿ ಹೇಳಿದೆ.
ದುಬೈ-ಅಬುಧಾಬಿ ಶೇಖ್ ಜಾಯೆದ್ ಹೆದ್ದಾರಿಯ ಅಲ್ ರಹ್ಬಾ ಬಳಿಯ ಅಬು ಮುರೇಖಾದಲ್ಲಿ ಯುಎಇ ಸರ್ಕಾರವು ದಾನವಾಗಿ ನೀಡಿದ 27 ಎಕರೆ ಜಮೀನಿನಲ್ಲಿ ಈ ದೇವಾಲಯವನ್ನು ನಿರ್ಮಿಸಲಾಗಿದೆ. 2019 ರಲ್ಲಿ ಇದರ ಶಿಲಾನ್ಯಾಸ ಸಮಾರಂಭ ಕಾರ್ಯಕ್ರಮ ನಡೆದಿತ್ತು ಎನ್ನಲಾಗಿದೆ.
ಇಲ್ಲಿ ಪ್ರಾರ್ಥನಾ ಮಂದಿರದಲ್ಲಿ 3,000 ಮಂದಿ ಕುಳಿತುಕೊಳ್ಳುವ ಸಾಮರ್ಥ್ಯವನ್ನು ಹೊಂದಿದೆ, ಒಂದು ಸಮುದಾಯ ಕೇಂದ್ರ, ಸಭಾಂಗಣ, ಒಂದು ಗ್ರಂಥಾಲಯ ಮತ್ತು ಮಕ್ಕಳ ಉದ್ಯಾನವನ ಒಳಗೊಂಡಿದೆ.
ದೇವಾಲಯದ ಮುಂಭಾಗ ಅಮೃತಶಿಲೆಯ ಕೆತ್ತನೆಗಳನ್ನು ಹೊಂದಿದ್ದು, ರಾಜಸ್ಥಾನ ಮತ್ತು ಗುಜರಾತ್‌ನ ನುರಿತ ಕುಶಲಕರ್ಮಿಗಳಿಂದ ಕೆತ್ತನೆ ಕಾರ್ಯ ನಡೆದಿದ್ದು ಇದಕ್ಕಾಗಿ 25,000 ಕಲ್ಲುಗಳನ್ನು ಬಳಸಲಾಗಿದೆ.
ಈ ದೇವಾಲಯವು ಸಾಂಪ್ರದಾಯಿಕ ನಾಗರ ಶೈಲಿಯ ವಾಸ್ತುಶಿಲ್ಪವನ್ನು ಹೊಂದಿದೆ. ಇದು ಯುಎಇಯ ಏಳು ಎಮಿರೇಟ್‌ಗಳಲ್ಲಿ ಒಂದನ್ನು ಪ್ರತಿನಿಧಿಸುವ ಕಿರೀಟವನ್ನು ಹೋಲುವಂತಿದ್ದು, ದೇವಾಲಯ 108 ಅಡಿ ಎತ್ತರದಲ್ಲಿದೆ.
ಅಯೋಧ್ಯೆ ಮಂದಿರದ ರೀತಿಯಲ್ಲೇ ಇಲ್ಲಿ ದೇವಾಲಯವನ್ನು ನಿರ್ಮಾಣ ಮಾಡಲಾಗಿದೆ.
ಇದನ್ನೂ ಓದಿ: Yenepoya Hospital; 9ರ ಬಾಲಕಿಯ 40 ಕ್ಯಾನ್ಸರ್ ಗಡ್ಡೆಗಳಿಗೆ ಶಸ್ತ್ರಚಿಕಿತ್ಸೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
MUST WATCH
ಹೊಸ ಸೇರ್ಪಡೆ
Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ
New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ
Yasin Malik ವಿಚಾರಣೆಗೆ ತಿಹಾರ್ ಜೈಲಿನಲ್ಲೇ ಕೋರ್ಟ್ ರೂಂ: ಸುಪ್ರೀಂ
General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ
Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.