ಅಮೆರಿಕದಲ್ಲಿ ಭಾರತೀಯ ಮೂಲದ ಕುಟುಂಬದ ನಾಲ್ವರ ಶವ ಪತ್ತೆ… ಬಾತ್‌ರೂಮ್‌ನಲ್ಲಿ ಇತ್ತು ಗನ್
Team Udayavani, Feb 14, 2024, 4:30 PM IST
ಕ್ಯಾಲಿಫೋರ್ನಿಯಾ: ಕೇರಳ ಮೂಲದ ಕುಟುಂಬವೊಂದು ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿರುವ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಮೃತರನ್ನು ಆನಂದ್ ಸುಜಿತ್ ಹೆನ್ರಿ(42), ಪತ್ನಿ ಆಲಿಸ್ ಪ್ರಿಯಾಂಕಾ(40), ಮತ್ತು ಅವರ 4 ವರ್ಷದ ಅವಳಿ ಮಕ್ಕಳಾದ ನೋಹ್ ಮತ್ತು ನೀಥಾನ್ ಎಂದು ಗುರುತಿಸಲಾಗಿದೆ.
ಕುಟುಂಬ ಸದಸ್ಯರೊಬ್ಬರು ಯೋಗಕ್ಷೇಮ ವಿಚಾರಿಸಲು ಕರೆ ಮಾಡಿದ ಸಂದರ್ಭ ಮನೆಯಲ್ಲಿ ಯಾರೂ ಕರೆ ಸ್ವೀಕರಿಸಲಿಲ್ಲ ಇದರಿಂದ ಅನುಮಾನಗೊಂಡ ಕುಟುಂಬ ಸದಸ್ಯರು ಕ್ಯಾಲಿಫೋರ್ನಿಯಾದ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಪೊಲೀಸರು ಮನೆಯಾ ಬಳಿ ಬಂದು ಬೆಲ್ ಮಾಡಿದ ವೇಳೆ ಒಳಗಿನಿಂದ ಯಾವುದೇ ಪ್ರತಿಕ್ರಿಯೆ ಬರಲಿಲ್ಲ ಇದಾದ ಬಳಿಕ ಕಿಟಕಿಯ ಬಾಗಿಲು ತೆರೆದು ನೋಡಿದಾಗ ಮೃತದೇಹ ಪತ್ತೆಯಾಗಿದೆ.
ಬಳಿಕ ಬಾಗಿಲು ಒಡೆದು ಒಳ ಪ್ರವೇಶಿಸಿದ ಪೊಲೀಸರಿಗೆ ಇಬ್ಬರು ಅವಳಿ ಮಕ್ಕಳ ಮೃತದೇಹ ಬೆಡ್ ರೂಮ್ ನಲ್ಲಿ ಪತ್ತೆಯಾಗಿದ್ದು ಜೊತೆಗೆ ಪತಿ ಮತ್ತು ಪತ್ನಿಯ ಮೃತದೇಹ ಬಾತ್ ರೂಮ್ ನ ಒಳಗೆ ಪತ್ತೆಯಾಗಿದೆ. ಅಷ್ಟು ಮಾತ್ರವಲ್ಲದೆ ಬಾತ್ ರೂಮ್ ನಲ್ಲಿ ೯ ಎಂಎಂ ಪಿಸ್ತೂಲ್ ಪತ್ತೆಯಾಗಿದ್ದು ಕುಟುಂಬ ಸದಸ್ಯರ ಮೈಮೇಲೂ ಗುಂಡಿನ ಗಾಯಗಳು ಪತ್ತೆಯಾಗಿವೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಕುರಿತು ತನಿಖೆ ನಡೆಯುತ್ತಿದೆ. ಪರಿಶೀಲನೆ ನಡೆಸಿದ ಪೊಲೀಸರಿಗೆ ಯಾವುದೇ ಕುರುಹುಗಳು ಪತ್ತೆಯಾಗಿಲ್ಲ ಅಲ್ಲದೆ ಮನೆಯೊಳಗೆ ಯಾರೂ ಪ್ರವೇಶಿಸಿದ ಗುರುತೂ ಇರಲಿಲ್ಲ ಮನೆಯ ಕಿಟಕಿ ಬಾಗಿಲೊಂದು ಮಾತ್ರ ತೆರೆದಿತ್ತು ಹಾಗಾಗಿ ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಅನುಮಾನ ಕಾದಿದ್ದು ಮರಣೋತ್ತರ ಪರೀಕ್ಷಾ ವರದಿ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.
ದಂಪತಿಗಳು 2020ರಲ್ಲಿ ಮನೆ ಖರೀಸಿದಿದ್ದರು ಎಂಬ ಮಾಹಿತಿ ಲಭ್ಯವಾಗಿದ್ದು ಜೊತೆಗೆ ನೆರೆ ಹೊರೆಯವರೊಂದಿಗೆ ಉತ್ತಮ ಒಡನಾಟ ಹೊಂದಿದ್ದರು ಎಂದು ಹೇಳಲಾಗಿದೆ. ಸದ್ಯ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.
ಇದನ್ನೂ ಓದಿ: Kaatera: ಓಟಿಟಿಯಲ್ಲಿ ರಿಲೀಸ್ ಆದ ಐದೇ ದಿನದಲ್ಲಿ ಹೊಸ ದಾಖಲೆ ಬರೆದ ʼಕಾಟೇರʼ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
Pakistan: ಇಮ್ರಾನ್ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ
Appoint: ಲಾಕ್‌ಡೌನ್ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ
Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.