Venoor ಭಗವಾನ್ ಶ್ರೀ ಬಾಹುಬಲಿಯ ಮಹಾಮಜ್ಜನ ಪೂರ್ವ ತಯಾರಿಗೆ ಡಾ| ಹೆಗ್ಗಡೆ ಮೆಚ್ಚುಗೆ
Team Udayavani, Feb 15, 2024, 12:02 AM IST
ಬೆಳ್ತಂಗಡಿ: ವೇಣೂರು ಭಗವಾನ್ ಶ್ರೀ ಬಾಹಬಲಿಯ ಮಹಾಮಜ್ಜನಕ್ಕೆ ಕ್ಷಣಗಣನೆ ಆರಂಭ ವಾಗುತ್ತಿರುವಂತೆಯೇ ಫೆ. 14ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ ಮಾಡಿ ಅಟ್ಟಳಿಗೆ ಹಾಗೂ ಇತರ ಕಾಮಗಾರಿ ವೀಕ್ಷಿಸಿದರು.
ಬಳಿಕ ಡಾ| ಹೆಗ್ಗಡೆಯವರು ಮಾತನಾಡಿ, ವೇಣೂರು ಕ್ಷೇತ್ರದ ಬಗ್ಗೆ ನಮಗೆ ಹಾಗೂ ನಮ್ಮ ಹಿರಿಯರಿಗೆ ಬಹಳಷ್ಟು ಪ್ರೀತಿ. ಸರಕಾರವು ಮೂಲ ಸೌಕರ್ಯಗಳಿಗೆ ಅನುದಾನ ಒದಗಿಸಿರುವುದಕ್ಕೆ ವೈಯಕ್ತಿಕ ಧನ್ಯವಾದ ತಿಳಿಸುತ್ತೇನೆ. ಕ್ಷೇತ್ರದ ಮಸ್ತಕಾಭಿಷೇಕದ ಯಶಸ್ಸಿಗೆ ಧರ್ಮಸ್ಥಳ ಐಟಿಐ ಸಂಸ್ಥೆಯ ವಿದ್ಯಾರ್ಥಿಗಳ ಜತೆಗೆ ಶೌರ್ಯ ತಂಡವನ್ನು ಒದಗಿಸುತ್ತೇವೆ. ಒಗ್ಗಟ್ಟಿಗೆ ಉತ್ತಮ ಫಲವಿದೆ. ನಿಮ್ಮೆಲ್ಲರ ಶ್ರಮ, ಉತ್ಸಾಹದಿಂದ ಈ ಐತಿಹಾಸಿಕ ಸಮಾರಂಭ ಯಶಸ್ವಿಯಾಗಲಿದೆ ಎಂದು ಹಾರೈಸಿದರು. ಈಗಾಗಲೇ ರಚನೆಯಾದ ಸಮಿತಿಗಳಲ್ಲಿ ಯುವಕರು ಉಲ್ಲಾಸದಿಂದ ಭಾಗವಹಿಸುವುದು ಸಂತಸದ ವಿಷಯ ಎಂದು ಶ್ಲಾಘಿಸಿದರು.
ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ ಅಜಿಲರು ಸ್ವಾಗತಿಸಿ, ಸಮಿತಿ ವತಿಯಿಂದ ನಡೆದ ಕೆಲಸಗಳ ಬಗ್ಗೆ ವಿವರಣೆ ನೀಡಿದರು. ಸರಕಾರದಿಂದ ವೇಣೂರಿನ ಮೂಲ ಸೌಕರ್ಯಗಳ ಅಭಿವೃದ್ಧಿ ಬಗ್ಗೆ ಬಂದ ಅನುದಾನ ಹಾಗೂ ಆಗಲಿರುವ ಕಾಮಗಾರಿಗಳ ವಿವರವಿತ್ತರು. ಭಕ್ತರ ಅನುಕೂಲಕ್ಕಾಗಿ ವ್ಯವಸ್ಥೆ ಮಾಡಿದ ಕಲಶಗಳ ಮಾಹಿತಿ ನೀಡಿದರು.
ಮಹಾ ಮಸ್ತಕಾಭಿಷೇಕ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್ ಇಂದ್ರ, ಪ್ರಮುಖರಾದ ಡಾ| ಶಾಂತಿಪ್ರಸಾದ್, ವಿಕಾಸ್ ಜೈನ್ ಪಡ್ಯಾರಬೆಟ್ಟು, ಶಿವಪ್ರಸಾದ್ ಅಜಿಲ, ಸನತ್ ಕುಮಾರ್‌ಜೈನ್, ಪ್ರಮೋದ್ ಜೈನ್ ಹಾಗೂ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.