BBMP: ಆಸ್ತಿ ತೆರಿಗೆ ಬಾಕಿ; ರಾಕ್ಲೈನ್ ಮಾಲ್ಗೆ ಬೀಗ ಜಡಿದ ಬಿಬಿಎಂಪಿ ಅಧಿಕಾರಿಗಳು
Team Udayavani, Feb 15, 2024, 11:56 AM IST
ಬೆಂಗಳೂರು: ಬಾಕಿ ತೆರಿಗೆ ಪಾವತಿಸದ ಹಿನ್ನೆಲೆಯಲ್ಲಿ ದಾಸರಹಳ್ಳಿ ವಲಯ ವ್ಯಾಪ್ತಿಯಲ್ಲಿರುವ ರಾಕ್ಲೈನ್ ಮಾಲ್ ಗೆ ಬುಧವಾರ ಬಿಬಿಎಂಪಿಯು ಬೀಗ ಜಡಿದಿದೆ.
ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಒಡೆತನದಲ್ಲಿರುವ ರಾಕ್ಲೈನ್ ಮಾಲ್ 2011ರಿಂದ 2022-23ರವರೆಗೆ 11.51 ಕೋಟಿ ರೂ.ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿತ್ತು. ಬಾಕಿ ತೆರಿಗೆ ಪಾವತಿಸಲು ಈಗಾಗಲೇ ಡಿಮಾಂಡ್ ನೋಟೀಸ್ ನೀಡಿದ್ದರೂ ತೆರಿಗೆ ಪಾವತಿಸಿರಲಿಲ್ಲ. ಈ ಹಿನ್ನೆಲೆಯಲಲ್ಲಿ ಬುಧವಾರ ದಾಸರಹಳ್ಳಿ ವಲಯ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ರಾಕ್ಲೈನ್ ಮಾಲ್ ಅನ್ನು ಸೀಜ್ ಮಾಡಲಾಯಿತು.
ಮಾಲ್ಗೆ ಬೀಗ ಜಡಿಯುವ ವೇಳೆ ವಲಯ ಆಯುಕ್ತೆ ಪ್ರೀತಿ ಗೆಹ್ಲೋಟ್, ವಲಯ ಜಂಟಿ ಆಯುಕ್ತ ಬಾಲಶೇಖರ, ದಾಸರಹಳ್ಳಿ ವಲಯ ಅಧಿಕಾರಿಗಳು, ಕಂದಾಯ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ, ಮಾರ್ಷಲ್ ಗಳು ಸೇರಿ ಇನ್ನಿತರೆ ಅಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಸಿಎನ್ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ
BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್, ರಾಹುಲ್ ಬಳಿಕ ಮತ್ತೊಬ್ಬ ಬ್ಯಾಟರ್ ಗೆ ಗಾಯ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.