ಕನ್ನಡಪರ ಹೋರಾಟಗಾರರನ್ನು ಜೈಲಿಗೆ ಹಾಕಿದ್ದು ಎಷ್ಟು ಸರಿ?: ಕೋಟ
Team Udayavani, Feb 15, 2024, 9:20 PM IST
ಬೆಂಗಳೂರು: ಮಾತೆತ್ತಿದರೆ ನಾವು ಕನ್ನಡಪರ ಎನ್ನುವ ಸರ್ಕಾರ ಕನ್ನಡಪರ ಹೋರಾಟಗಾರರನ್ನು ಜೈಲಿಗೆ ಹಾಕಿದ್ದು ಎಷ್ಟು ಸರಿ ಎಂದು ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
ರಾಜ್ಯಪಾಲರ ಭಾಷಣದ ವಂದನಾ ಪ್ರಸ್ತಾಪದ ಮೇಲಿನ ಚರ್ಚೆಯ ವೇಳೆ ಮಾತನಾಡಿದ ಅವರು, ಸರ್ಕಾರ ಕನ್ನಡಪರ ಎಂದು ಹೇಳಿಕೊಳ್ಳುತ್ತಿದೆ. ಆದರೆ ಕನ್ನಡದ ಬಗ್ಗೆ ಹೋರಾಟ ನಡೆಸಿದವರನ್ನು ಜೈಲಿಗೆ ಹಾಕಿದೆ. ಜೊತೆ ಜಾಮೀನು ಸಿಗದ ರೀತಿಯಲ್ಲಿ ಮಾಡಿದ್ದೇವೆೆ. ಕನ್ನಡ ಹೋರಾಟಗಾರರನ್ನು ಜೈಲಿಗೆ ಕಳುಹಿಸಿ ಇತ್ತ ಕನ್ನಡ ಉಳಿಸುತ್ತೇವೆ ಎಂದರೆ ಹೇಗೆ ಎಂದು ಕೆಣಕಿದರು.
ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಸ್ವಾಗತಾರ್ಹ ಆದರೆ. ಸದನ ಹತ್ತಿರವಿರುವಾಗ ಆ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ವಾಪಸ್ ಕಳಿಸಿದ್ದಾರೆ. ಆದರೆ ಈ ವಿಚಾರದಲ್ಲಿ ರಾಜ್ಯಪಾಲರನ್ನೇ ತಪ್ಪಿತಸ್ಥರನ್ನಾಗಿ ಮಾಡುವ ಕೆಲಸವನ್ನು ಸರ್ಕಾರ ಮಾಡಿದ್ದು ಏಕೆ ಎಂದು ಪ್ರಶ್ನೆ ಮಾಡಿದರು. ಈ ವೇಳೆ ಮಧ್ಯಪ್ರವೇಶ ಮಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ನೀವು ಸದನದ ಮೂಲಕ ಜನತೆ ತಪ್ಪು ಸಂದೇಶ ನೀಡಬೇಡಿ ಎಂದರು.
ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕುರಿತ ಸುಗ್ರೀವಾಜ್ಞೆಯನ್ನು ಜನವರಿ ಮೊದಲ ವಾರದಲ್ಲೇ ಸರ್ಕಾರ ರಾಜ್ಯಪಾಲರಿಗೆ ಕಳುಹಿಸಿತ್ತು. ಆದರೆ ಆರೋಗ್ಯ ಕಾರಣದ ಹಿನ್ನೆಲೆಯಲ್ಲಿ ರಾಜ್ಯಪಾಲರು ಆ ಬಗ್ಗೆ ಗಮನ ಹರಿಸಲಿಲ್ಲ. ಇದು ಸರ್ಕಾರದ ಗಮನಕ್ಕೂ ಇದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವನಾಗಿ ನಾನು ಇಲ್ಲೂ ಈ ಬಗ್ಗೆ ರಾಜ್ಯಪಾಲರ ವಿರುದ್ಧ ಹೇಳಿಕೆ ನೀಡಿಲ್ಲ. ಮಾಧ್ಯಮಗಳ ರೆಕಾರ್ಡ್ ತೆಗಿಸಿ ನೋಡಿ ಎಂದು ತೀಕ್ಷ್ಣವಗಿ ಪ್ರತಿಕ್ರಿಯಿಸಿದರು. ಮಧ್ಯಪ್ರವೇಶ ಮಾಡಿದ ಜೆಡಿಎಸ್‌ನ ಭೋಜೆಗೌಡ ಕನ್ನಡ ಶಾಲೆಗಳ ಬಗ್ಗೆ ಸರ್ಕಾರ ಗಮನಹರಿಸಲಿ ಎಂದು ಒತ್ತಾಯಿಸಿದರು. ಸಭಾಪತಿಗಳ ಮಧ್ಯಪ್ರವೇಶದಿಂದ ಸದನ ಸರಿದಾರಿಗೆ ಬಂತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.