Budget 2024; ಮೊದಲ ಸಮುದ್ರ ಆಂಬುಲೆನ್ಸ್ ಖರೀದಿ; ಮೀನುಗಾರಿಕೆ ಕ್ಷೇತ್ರಕ್ಕೆ ಸಿಕ್ಕಿದ್ದೇನು?
Team Udayavani, Feb 16, 2024, 11:27 AM IST
ಬೆಂಗಳೂರು: ರಾಜ್ಯದಲ್ಲಿ ಮೀನುಗಾರಿಕೆ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಮುಂದಿನ ವರ್ಷಗಳಲ್ಲಿ 3,000 ಕೋಟಿ ರೂ.ಗಳಷ್ಟು ಬೃಹತ್ ಗಾತ್ರದ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ರ ಬಜೆಟ್ ಮಂಡನೆಯಲ್ಲಿ ಹೇಳಿದರು.
ಹೊನ್ನಾವರ ತಾಲ್ಲೂಕಿನ ಮಂಕಿ/ ಕಾಸರಕೋಡದಲ್ಲಿ ಮೀನುಗಾರಿಕೆ ಸಂಶೋಧನಾ ಕೇಂದ್ರ ಸ್ಥಾಪನೆ, ಭದ್ರಾವತಿಯಲ್ಲಿ ಅತ್ಯಾಧುನಿಕ ಮೀನು ಮಾರುಕಟ್ಟೆ ಸ್ಥಾಪನೆ, ಆಕ್ವಾ ಪಾರ್ಕ್‌ಗಳ ಸ್ಥಾಪನೆ, ಭಟ್ಕಳ ತಾಲ್ಲೂಕಿನ ಮುರುಡೇಶ್ವರದಲ್ಲಿ ಸುಸಜ್ಜಿತ ಮೀನುಗಾರಿಕೆ ಹೊರ ಬಂದರು ನಿರ್ಮಾಣ ಮತ್ತು ವಿಜಯಪುರದ ಆಲಮಟ್ಟಿಯಲ್ಲಿ ಒಳನಾಡು ಮೀನುಗಾರಿಕೆ ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದರು.
ಮತ್ಸ್ಯ ಆಶಾಕಿರಣ ಯೋಜನೆಯಡಿ ಮೀನುಗಾರಿಕೆ ನಿಷೇಧದ ಅವಧಿಯಲ್ಲಿ ಕರಾವಳಿಯ ಮೀನುಗಾರರಿಗೆ ನೀಡುತ್ತಿರುವ ಪರಿಹಾರ ಮೊತ್ತದ ರಾಜ್ಯದ ಪಾಲನ್ನು 1,500 ರೂ.ಗಳಿಂದ 3,000 ರೂ.ಗಳಿಗೆ ಹೆಚ್ಚಿಸಲಾಗುವುದು.
ಇದನ್ನೂ ಓದಿ:State Budget; ಮದ್ಯಪ್ರಿಯರಿಗೆ ಶಾಕ್ ನೀಡಿದ ಸಿದ್ದು ಬಜೆಟ್; ಮದ್ಯ ಬೆಲೆ ಮತ್ತೆ ಹೆಚ್ಚಳ
ಸಮುದ್ರ ಮೀನುಗಾರಿಕೆಗೆ ತೆರಳಿದಾಗ ಅಪಘಾತ ಅಥವಾ ಅನಾರೋಗ್ಯಕ್ಕೆ ಒಳಗಾಗುವ ಮೀನುಗಾರರನ್ನು ತ್ವರಿತವಾಗಿ ದಡಕ್ಕೆ ತರಲು ರಾಜ್ಯದಲ್ಲಿ ಪ್ರಪ್ರಥಮ ಸಮುದ್ರ ಆಂಬುಲೆನ್ಸ್ ಅನ್ನು 7 ಕೋಟಿ ರೂ. ವೆಚ್ಚದಲ್ಲಿ ಖರೀದಿಸಲಾಗುವುದು.
2024-25ರ ಸಾಲಿನಲ್ಲಿ 10,000 ವಸತಿ ರಹಿತ ಮೀನುಗಾರರಿಗೆ ರಾಜ್ಯ ಸರ್ಕಾರದ ವಿವಿಧ ವಸತಿ ಯೋಜನೆಗಳಡಿಯಲ್ಲಿ ಮನೆಗಳನ್ನು ನಿರ್ಮಿಸಲು ಸಹಾಯಧನ ನೀಡಲಾಗುವುದು.
ರಾಜ್ಯದಲ್ಲಿನ 16 ಮೀನು ಮರಿ ಉನ್ನತೀಕರಣವನ್ನು ನಬಾರ್ಡ್ ಉತ್ಪಾದನಾ ಕೇಂದ್ರಗಳ ಸಹಯೋಗದೊಂದಿಗೆ 20 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುವುದು.
ಚಿತ್ರದುರ್ಗ, ಹೊಳಲ್ಕೆರೆ ಮತ್ತು ಹೊಸದುರ್ಗ ತಾಲ್ಲೂಕುಗಳ ಗಣಿಬಾಧಿತ ಪ್ರದೇಶದಲ್ಲಿ ಮೀನುಗಾರಿಕೆಯನ್ನು ಕೈಗೊಳ್ಳಲು 6 ಕೋಟಿ ರೂ. ವೆಚ್ಚ ಮಾಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.