Budget 2024: ಪ್ರವಾಸೋದ್ಯಮಕ್ಕೆ ಒತ್ತು- ಕೊಪ್ಪಳದ ಅಂಜನಾದ್ರಿ ಅಭಿವೃದ್ಧಿಗೆ 100 ಕೋಟಿ ರೂ.

ಬಾಗಲಕೋಟೆಯ ಐಹೊಳೆಯಲ್ಲಿ ಸುಸಜ್ಜಿತವಾದ ಹೋಟೆಲ್‌ ನಿರ್ಮಾಣ.

Team Udayavani, Feb 16, 2024, 1:24 PM IST

Budget 2024: ಪ್ರವಾಸೋದ್ಯಮಕ್ಕೆ ಒತ್ತು- ಕೊಪ್ಪಳದ ಅಂಜನಾದ್ರಿ ಅಭಿವೃದ್ಧಿಗೆ 100 ಕೋಟಿ ರೂ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ (ಫೆ-16) ವಿಧಾನಸಭೆಯಲ್ಲಿ ಮಂಡಿಸಿದ್ದ ಪ್ರಸಕ್ತ ಸಾಲಿನ ಬಜೆಟ್‌ ನಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಘೋಷಿಸಿದ್ದು, ಈ ನಿಟ್ಟಿನಲ್ಲಿ ಪರಿಷ್ಕೃತ ಪ್ರವಾಸೋದ್ಯಮ ನೀತಿ 2024-29 ಅನ್ನು ಜಾರಿಗೆ ತರಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:State budget 2024; ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್, ಗ್ರ್ಯಾಚ್ಯುಟಿ ಸವಲತ್ತು

ಪೌರಾಣಿಕ ಹಾಗೂ ಐತಿಹಾಸಿಕವಾಗಿ ಪ್ರಖ್ಯಾತಿ ಹೊಂದಿರುವ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಪ್ರವಾಸಿ ಸೌಲಭ್ಯ ಅಭಿವೃದ್ಧಿಪಡಿಸಲು 100 ಕೋಟಿ ರೂ. ಒದಗಿಸಲಾಗುವುದು ಎಂದು ಬಜೆಟ್‌ ನಲ್ಲಿ ಘೋಷಿಸಲಾಗಿದೆ.

ರಾಜ್ಯದ ಪ್ರಮುಖ ಜಲಾಶಯಗಳಲ್ಲಿನ ಹಿನ್ನೀರಿನಲ್ಲಿ ಮತ್ತು ಕಡಲ ತೀರಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಜಲಕ್ರೀಡೆಗಳು ಮತ್ತು ಜಲಸಾಹಸ ಪ್ರವಾಸೋದ್ಯಮ ಅಭಿವೃದ್ಧಿ.

ಸಾಹಸ ಪ್ರವಾಸೋದ್ಯಮ ಉತ್ತೇಜನಕ್ಕೆ ರಾಜ್ಯದ ಪ್ರಮುಖ 10 ಪ್ರವಾಸಿ ತಾಣಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಕೇಬಲ್‌ ಕಾರ್/ರೋಪ್‌ ವೇ ಸೌಲಭ್ಯ ಅಭಿವೃದ್ಧಿಪಡಿಸಲಾಗುವುದು.

ಗೋಕಾಕ ಜಲಪಾತವನ್ನು ಪ್ರೇಕ್ಷಣೀಯ ಸ್ಥಳವಾಗಿ ಅಭಿವೃದ್ಧಿಪಡಿಸಲಾಗುವುದು. ರಾಜ್ಯದ 530 ಸಂರಕ್ಷಿತ ಸ್ಮಾರಕಗಳನ್ನು 3 ಡಿ ಲೇಸರ್‌ ಸ್ಕ್ಯಾನಿಂಗ್‌ ಮೂಲಕ ಡಿಜಿಟಲ್‌ ದಾಖಲೀಕರಣ ಮಾಡಲಾಗಿದೆ. ಈ ಕಾರ್ಯವನ್ನು ದೇಶದಲ್ಲಿಯೇ ಪ್ರಥಮವಾಗಿ ಕೈಗೊಂಡಿರುವ ಶ್ರೇಯಸ್ಸು ರಾಜ್ಯ ಸರ್ಕಾರದ್ದಾಗಿದೆ. ‌

ರಾಷ್ಟ್ರಕೂಟರ ಕಾಲದಲ್ಲಿ ಕರ್ನಾಟಕದ ಮೊಟ್ಟ ಮೊದಲ ವಿಶ್ವವಿದ್ಯಾಲಯವನ್ನು ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲೂಕಿನ ನಾಗಾವಿಯಲ್ಲಿ ಸ್ಥಾಪಿಸಲಾಗಿತ್ತು ಎಂಬುದು ಸ್ಥಳೀಯರ ನಂಬಿಕೆ. ಅಲ್ಲಿನ ಪ್ರಾಚ್ಯಾವೇಶಗಳ ಸಂಶೋಧನೆ ಮತ್ತು ಸಂರಕ್ಷಣೆಗಾಗಿ ನೆರವು ನೀಡಲು ಭಾರತೀಯ ಪುರಾತತ್ವ ಇಲಾಖೆ(ಎಎಸ್‌ ಐ)ಗೆ ಶಿಫಾರಸು ಮಾಡಲಾಗುವುದು ಎಂದು ಮುಂಗಡ ಪತ್ರದಲ್ಲಿ ತಿಳಿಸಲಾಗಿದೆ.

ಕೆಎಸ್‌ ಟಿಡಿಸಿ ವತಿಯಿಂದ ಬಾಗಲಕೋಟೆಯ ಐಹೊಳೆಯಲ್ಲಿ ಸುಸಜ್ಜಿತವಾದ ಹೋಟೆಲ್‌ ನಿರ್ಮಾಣ. ಹಾಗೂ ರೋರಿಚ್‌ ಮತ್ತು ದೇವಿಕಾರಾಣಿ ಎಸ್ಟೇಟ್‌ ಪ್ರದೇಶದಲ್ಲಿ ಮೂಲಭೂತ ಸೌಲಭ್ಯಗಳ ಅಭಿವೃದ್ಧಿಗೆ ಒತ್ತು.

ಬೀದರ್‌ ಹಾಗೂ ವಿಜಯಪುರದಲ್ಲಿ ಕರೇಜ್‌ ಎಂದು ಪ್ರಸಿದ್ಧವಾಗಿರುವ ಪುರಾತನ ನೀರು ಸರಬರಾಜು ವ್ಯವಸ್ಥೆಯನ್ನು ನುರಿತ ಸಂಸ್ಥೆಗಳ ತಾಂತ್ರಿಕ ನೆರವಿನೊಂದಿಗೆ 15 ಕೋಟಿ ರೂ. ವೆಚ್ಚದಲ್ಲಿ ಪುನಶ್ಚೇತನ.

ರಾಜ್ಯದಲ್ಲಿ ಪರಿಸರ ಪ್ರವಾಸೋದ್ಯಮ ಉತ್ತೇಜಿಸಲು ಬಂಡೀಪುರ, ದಾಂಡೇಲಿ ಮತ್ತು ಕಬಿನಿಯಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಇಂಟರ್‌ ಪ್ರಿಟೇಷನ್‌ ಸೆಂಟರ್‌ ಗಳನ್ನು ಜೆ.ಎಲ್ಾರ್‌ ಸಂಸ್ಥೆಯ ಮೂಲಕ ನಿರ್ಮಾಣ ಮಾಡುವುದಾಗಿ ಬಜೆಟ್‌ ನಲ್ಲಿ ಘೋಷಿಸಲಾಗಿದೆ.

ಗದಗ ಜಿಲ್ಲೆಯ ಕಪ್ಪತ್ತಗುಡ್ಡದಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ಉತ್ತೇಜನ. ಶ್ರೀಕ್ಷೇತ್ರ ರೇಣುಕಾ ಯಲ್ಲಮ್ಮ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶ ಸಂರಕ್ಷಿಸಿ ಅಭಿವೃದ್ಧಿಗೊಳಿಸಲು ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ರಚಿಸುವುದಾಗಿ ತಿಳಿಸಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

Paddy 2

Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ

R Ashok (2)

BPL ಕಾರ್ಡ್‌ನಿಂದ ಎಪಿಎಲ್‌ಗೆ 6ನೇ ಗ್ಯಾರಂಟಿ: ಅಶೋಕ್‌ ಲೇವಡಿ

renukaacharya

Waq ಹೋರಾಟಕ್ಕೆ ವಿಜಯೇಂದ್ರ ತಂಡಗಳೇ ಅಧಿಕೃತ: ರೇಣುಕಾಚಾರ್ಯ

CM-ibrahim

HDK ವಿರುದ್ಧ ಜಮೀರ್‌ ಹೇಳಿಕೆ ತಪ್ಪು: ಸಿ.ಎಂ. ಇಬ್ರಾಹಿಂ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.